ನಟರ ದುಬಾರಿ ಸಂಭಾವನೆ: ನ.1 ರಿಂದ ತಮಿಳು ಚಿತ್ರೋದ್ಯಮವೇ ಬಂದ್..!

By Kannadaprabha News  |  First Published Aug 20, 2024, 7:59 AM IST

ಖ್ಯಾತನಾಮ ನಟ, ನಟಿಯರು, ತಂತ್ರಜ್ಞರ ದುಬಾರಿ ಸಂಭಾವನೆ, ಹಣ ಪಡೆದು ಶೂಟಿಂಗ್‌ಗೆ ಆಗಮಿಸದೇ ತೊಂದರೆ ನೀಡುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಚಲನಚಿತ್ರ ಶೂಟಿಂಗ್ ನಿಲ್ಲಿಸಲು ನಿರ್ಧರಿಸಿದ ತಮಿಳು ಚಿತ್ರ ನಿರ್ಮಾಪಕರ ಮಂಡಳಿ


ಚೆನ್ನೈ(ಆ.20): ಮೊಬೈಲ್, ಒಟಿಟಿ ವೇದಿಕೆಗಳಿಂದಾಗಿ ಚಲನಚಿತ್ರರಂಗ ಭಾರೀ ಹೊಡೆತ ಅನುಭವಿಸುತ್ತಿರುವ ಹೊತ್ತಿನಲ್ಲೇ ದಕ್ಷಿಣ ಭಾರತದ ಪ್ರಮುಖ ಚಿತ್ರೋದ್ಯಮವಾದ ತಮಿಳು ಚಿತ್ರೋದ್ಯಮ, ತಾತ್ಕಾಲಿಕವಾಗಿ ಚಿತ್ರ ನಿರ್ಮಾಣವನ್ನೇ ಸಗಿತಗೊಳಿಸುವ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ.

ಖ್ಯಾತನಾಮ ನಟ, ನಟಿಯರು, ತಂತ್ರಜ್ಞರ ದುಬಾರಿ ಸಂಭಾವನೆ, ಹಣ ಪಡೆದು ಶೂಟಿಂಗ್‌ಗೆ ಆಗಮಿಸದೇ ತೊಂದರೆ ನೀಡುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಚಲನಚಿತ್ರ ಶೂಟಿಂಗ್ ನಿಲ್ಲಿಸಲು ತಮಿಳು ಚಿತ್ರ ನಿರ್ಮಾಪಕರ ಮಂಡಳಿ ನಿರ್ಧರಿಸಿದೆ. ಇದಕ್ಕೆ ಥಿಯೇಟರ್ ಮಾಲೀಕರ ಸಂಘ, ಚಿತ್ರ ಹಂಚಿಕೆದಾರರ ಸಂಘ ಕೂಡಾ ಬೆಂಬಲ ವ್ಯಕ್ತಪಡಿಸಿರುವ ಕಾರಣ ಈ ಬಂದ್ ಯಶಸ್ವಿಯಾಗುವುದು ಖಚಿತವಾಗಿದೆ.

Tap to resize

Latest Videos

ಚಿಲ್ಲರೆಗಾಗಿ ಗಾರ್ಮೆಂಟ್ಸ್ ಕೆಲಸ ಮಾಡಿದವ ಇಂದು ಹಿಟ್ ಸಿನಿಮಾಗಳ ಸೂಪರ್ ಸ್ಟಾರ್!

ಬಂದ್ ಏಕೆ?: 

ನಟ, ನಟಿಯರು, ತಂತ್ರಜ್ಞರು ಇತ್ತೀಚಿನ ದಿನಗಳಲ್ಲಿ ತಮ್ಮ ಸಂಭಾವನೆ ಭಾರೀ ಪ್ರಮಾಣದಲ್ಲಿ ಏರಿಸಿದ್ದಾರೆ. ಇನ್ನೊಂದೆಡೆ ಭಾರೀ ಹಣ ಪಡೆದ ಮೇಲೂ ನಟರು, ತಂತ್ರಜ್ಞರು ಶೂಟಿಂಗ್ ಅಥವಾ ಇತರೆ ಚಿತ್ರ ಸಂಬಂಧಿ ಕೆಲಸಕ್ಕೆ ಗೈರಾಗಿ ತೊಂದರೆ ನೀಡು ತ್ತಿದ್ದಾರೆ. ಇನ್ನು ಕೆಲವು ಪ್ರಕರಣಗಳಲ್ಲಿ ಯೋ ಜನೆ ಆರಂಭದ ಬಳಿಕ ಅದಕ್ಕೆ ಕೈ ಕೊಟ್ಟು ಮತ್ತೊಂದು ಚಿತ್ರ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಾಗಿ ನಿರ್ಮಾಪಕರಿಗೆ ಭಾರೀ ನಷ್ಟವಾಗುತ್ತಿದೆ.
ಹೀಗಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆ.16ರಿಂದಲೇ ಜಾರಿಯಾಗುವಂತೆ ಚಲನಚಿತ್ರರಂಗದ ಚಟುವಟಿಕೆಗಳನ್ನು ಹಂತಹಂತವಾಗಿ ನಿಲ್ಲಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ತಮಿಳಿನಲ್ಲಿ ಮತ್ತೊಬ್ಬರು ಕೊಡಗಿನ ಬೆಡಗಿ ರನ್ನಿಂಗ್ ಶುರು; ಈ ಫೇಸ್‌ಲೀ ಏನೋ ಇದೆ, ಕಣ್ಣಂಚಲಿ ಸವಿ ಮಿಂಚಿದೆ..!

ಉದ್ದೇಶ ಏನು?

. ನಟ, ತಂತ್ರಜ್ಞರ ಸಂಭಾವನೆ ಕುರಿತು ವಿವಿಧ ಸಂಘಟನೆಗಳ ಜೊತೆ ಸಮಾಲೋಚನೆ
• ಒಟ್ಟಾರೆ ಚಲನಚಿತ್ರ ನಿರ್ಮಾಣ ವೆಚ್ಚ ಕಡಿತ ಮಾಡಿ ನಿರ್ಮಾಪಕರ ಹೊರೆ ಇಳಿಸಲು ಕ್ರಮ
. ಶೂಟಿಂಗ್ ಅಥವಾ ಇತರೆ ಕೆಲಸ ಬಾಕಿ ಉಳಿದ ಚಿತ್ರಗಳ ಕೆಲಸ ಪೂರ್ಣಗೊಳಿಸುವುದು
• ಥಿಯೇಟರ್ ಸಿಗದೇ ಉಳಿದ ಚಿತ್ರಗಳಿಗೆ ಅಗತ್ಯ ಪ್ರಮಾಣದ ಥಿಯೇಟರ್ ಒದಗಿಸುವುದು

ಏನೇನು ನಿರ್ಧಾರ?

ಆ.16ರಿಂದ ಹೊಸ ಚಿತ್ರದ ಶೂಟಿಂಗ್ ಪೂರ್ಣ ಸ್ಥಗಿತ
ಈಗಾಗಲೇ ಆರಂಭವಾದ ಯೋಜನೆ ಅ.30ರೊಳಗೆ ಪೂರ್ಣಗೊಳಿಸಬೇಕು
ಪ್ರಮುಖ ನಟರ ಚಿತ್ರ ಥಿಯೇಟರ್‌ನಲ್ಲಿ ಬಿಡುಗಡೆಯಾದ 8 ವಾರ ಬಳಿಕ ಒಟಿಟಿಗಳಲ್ಲಿ ಬಿಡುಗಡೆ ಮಾಡಬೇಕು

click me!