
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಸೆನ್ಸೇಷನಲ್ ನಿರ್ದೇಶಕ ಅಟ್ಲೀ ಕಾಂಬಿನೇಷನ್‌ನಲ್ಲಿ ಸನ್ ಪಿಕ್ಚರ್ಸ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ ಸೋಷಿಯೊ ಫ್ಯಾಂಟಸಿ ಸಿನಿಮಾ ‘ರಾಕಾ’. ಇದೀಗ ಈ ಸಿನಿಮಾಗೆ ಸಂಬಂಧಿಸಿದಂತೆ ಕೇವಲ ‘37’ ಎಂಬ ನಂಬರ್ ಇರುವ ಮಿಸ್ಟರಿ ಪೋಸ್ಟರ್‌ವೊಂದನ್ನು ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಇನ್ನೇನು ನಾಲ್ಕೇ ದಿನಗಳಲ್ಲಿ ನಿರ್ದೇಶಕ ಅಟ್ಲೀ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅದೇ ದಿನ ಈ ‘37’ರ ಹಿಂದಿರುವ ಅಸಲಿ ರಹಸ್ಯವನ್ನು ಚಿತ್ರತಂಡ ಬಹಿರಂಗಪಡಿಸಲಿದೆಯೇ ಎಂಬ ಚರ್ಚೆ ಅಭಿಮಾನಿಗಳಲ್ಲಿ ಜೋರಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕನಾಗಿ, ಅಟ್ಲೀ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೋಸ್ಟ್ ಅವೈಟೆಡ್ ಸಿನಿಮಾ ‘ರಾಕಾ’. ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಈ ಬಿಗ್ ಬಜೆಟ್ ಸೋಷಿಯೊ ಫ್ಯಾಂಟಸಿ ಆ್ಯಕ್ಷನ್ ಸಿನಿಮಾ ಭರ್ಜರಿ ಮಟ್ಟದಲ್ಲಿ ತಯಾರಾಗುತ್ತಿದೆ.
ಸದ್ಯ ಸಿನಿಮಾ ಶೂಟಿಂಗ್ ಹಂತದಲ್ಲಿದ್ದು, ಕಳೆದ ಕೆಲವು ತಿಂಗಳುಗಳಿಂದ ಯಾವುದೇ ದೊಡ್ಡ ಅಪ್‌ಡೇಟ್ ನೀಡದೆ ಸೈಲೆಂಟ್ ಆಗಿಯೇ ಚಿತ್ರೀಕರಣ ನಡೆಸಲಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟೈಟಲ್ ಪೋಸ್ಟರ್ ಹಾಗೂ ಅಲ್ಲು ಅರ್ಜುನ್ ಅವರ ಲುಕ್‌ಗೆ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಚಿತ್ರತಂಡ ಮತ್ತೊಂದು ಇಂಟರೆಸ್ಟಿಂಗ್ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ.
ಭಾರೀ ಕುತೂಹಲ
ಈ ಪೋಸ್ಟರ್‌ನಲ್ಲಿ ‘37’ ಎಂಬ ಸಂಖ್ಯೆಯೊಂದೇ ಪ್ರಮುಖವಾಗಿ ಕಾಣಿಸಿಕೊಂಡಿದ್ದು, ಅದರ ಜೊತೆಗೆ ‘ರಾಕಾ’ ಎಂಬ ಟೈಟಲ್ ಮಾತ್ರ ಇದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಮಾಹಿತಿ ನೀಡಲಾಗಿಲ್ಲ. ಹೀಗಾಗಿ ಈ ಮಿಸ್ಟರಿ ನಂಬರ್ ಈಗ ಅಲ್ಲು ಅರ್ಜುನ್ ಅಭಿಮಾನಿಗಳಷ್ಟೇ ಅಲ್ಲದೆ, ಸಿನಿಮಾ ಪ್ರೇಮಿಗಳಲ್ಲೂ ಭಾರೀ ಕುತೂಹಲ ಮೂಡಿಸಿದೆ. ಅಷ್ಟಕ್ಕೂ ಈ ‘37’ ಅಂದ್ರೆ ಏನು? ಇದರ ಹಿಂದೆ ಯಾವ ರಹಸ್ಯ ಅಡಗಿದೆ? ಎಂಬ ಪ್ರಶ್ನೆಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿವೆ. ಅಭಿಮಾನಿಗಳು ತಮ್ಮದೇ ಆದ ಹಲವು ಥಿಯರಿಗಳನ್ನು ಮುಂದಿಡುತ್ತಿದ್ದಾರೆ.
ಇನ್ನು ಸೆಪ್ಟೆಂಬರ್ 21ರಂದು ನಿರ್ದೇಶಕ ಅಟ್ಲೀ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ, ಅದೇ ದಿನ ‘37’ರ ಹಿಂದಿರುವ ಅಸಲಿ ಸೀಕ್ರೆಟ್ ಏನು ಎಂಬುದನ್ನು ಚಿತ್ರತಂಡ ರಿವೀಲ್ ಮಾಡಬಹುದು ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಇನ್ನು ‘ರಾಕಾ’ ಚಿತ್ರದ ಫಸ್ಟ್ ಲುಕ್‌ನಲ್ಲಿ ಅಲ್ಲು ಅರ್ಜುನ್ ಬ್ಲಡ್-ಬೀಸ್ಟ್ ರೀತಿಯ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದರು. ಇದಲ್ಲದೆ ಸಿನಿಮಾದಲ್ಲಿ ಅವರು ಒಂದಕ್ಕಿಂತ ಹೆಚ್ಚು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.
ತಾತ, ತಂದೆ ಹಾಗೂ ಇಬ್ಬರು ಗಂಡು ಮಕ್ಕಳಾಗಿ, ಅಂದರೆ ಒಟ್ಟು ನಾಲ್ಕು ವಿಭಿನ್ನ ಪಾತ್ರಗಳಲ್ಲಿ ಬನ್ನಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಮೂಲಕ ಅಲ್ಲು ಅರ್ಜುನ್ ಮತ್ತೊಮ್ಮೆ ವಿಭಿನ್ನ ಅವತಾರಗಳಲ್ಲಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ ರಶ್ಮಿಕಾ ಮಂದಣ್ಣ, ಮೃಣಾಲ್ ಠಾಕೂರ್ ಹಾಗೂ ಜಾನ್ವಿ ಕಪೂರ್ ಕೂಡ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ರಾಕಾ ಚಿತ್ರಕ್ಕೆ ಸಾಯಿ ಅಭ್ಯಂಕರ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಟ್ಲೀ-ಅಲ್ಲು ಅರ್ಜುನ್ ಕಾಂಬಿನೇಷನ್‌ನಲ್ಲಿನ ಈ ಬಹುನಿರೀಕ್ಷಿತ ಸಿನಿಮಾ ಯಾವ ರೀತಿಯ ಮ್ಯಾಜಿಕ್ ಸೃಷ್ಟಿಸಲಿದೆ ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಅದರಲ್ಲೂ ‘37’ ಎಂಬ ನಂಬರ್‌ನ ಅಸಲಿ ರಹಸ್ಯ ಏನು? ಎಂಬ ಪ್ರಶ್ನೆಗೆ ಸೆಪ್ಟೆಂಬರ್ 21ರಂದು ಉತ್ತರ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.