ಶತಕದತ್ತ KGF ದಾಪುಗಾಲು, ನಿರ್ಮಾಪಕ ಫುಲ್ ಖುಷ್

Published : Feb 08, 2019, 04:09 PM ISTUpdated : Feb 08, 2019, 05:19 PM IST
ಶತಕದತ್ತ KGF ದಾಪುಗಾಲು, ನಿರ್ಮಾಪಕ ಫುಲ್ ಖುಷ್

ಸಾರಾಂಶ

ಯಶ್ ಅಭಿನಯದ, ಪಂಚ ಭಾಷೆಗಳಲ್ಲಿ ಬಿಡುಗಡೆಯಾದ ಕೆಜಿಎಫ್ 50 ದಿನಗಳನ್ನು ಪೂರೈಸಿದೆ. ಈ ಬಗ್ಗೆ ಈ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದಿಷ್ಟು....

ಕನ್ನಡ ಚಿತ್ರಗಳತ್ತ ಜನರು ತಿರುಗಿ ನೋಡುವಂತೆ ಮಾಡಿದ ಸಿನಿಮಾ ಕೆಜಿಎಫ್. ಎಲ್ಲ ಭಾಷೆಗಳಲ್ಲೂ ಅಭಿಮಾನಿಗಳನ್ನು ಸೆಳೆಯುವಲ್ಲಿ ಯಶಸ್ವಿಯಾದ ಈ ಚಿತ್ರ 50 ದಿನಗಳ ಆಟ ಪೂರೈಸಿದೆ.

ಚಿತ್ರರಂಗದಲ್ಲಿ ಇತಿಹಾಸ ಬರೆದು, ಪಂಚ ಭಾಷೆಯಲ್ಲಿ ಬಿಡುಗಡೆಯಾದ ಕೆಜಿಎಫ್ ಚಿತ್ರದ್ದೇ ಸುದ್ದಿ. ಒಮ್ಮೇಗೆ 2460 ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಫಿಲ್ಮ್ ಇದು.

18 ಕೋಟಿ ರೂ.ಗೆ ಈ ಚಿತ್ರದ ಡಿಜಿಟಲ್ ರೈಟ್ಸ್ ಮಾರಾಟವಾಗಿದ್ದು, ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರ ಬಿಡುಗಡೆಯಾಗಿ 50 ದಿನಗಳನ್ನು ಪೂರೈಸಿದೆ. ಈ ಸಂತೋಷವನ್ನು ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು ಅಭಿವ್ಯಕ್ತಗೊಳಿಸಿದ್ದು ಹೀಗೆ....

 

'#KGF ನನಗೆ ಕೇವಲ ಚಿತ್ರವಲ್ಲ. ಇಂಥ ದಾಖಲೆಯ ಚಿತ್ರವನ್ನು ಕನ್ನಡ ಚಿತ್ರರಂಗಕ್ಕೆ ಸಮರ್ಪಿಸಬೇಕೆಂಬುವುದು ನನ್ನ ಕನಸಾಗಿತ್ತು. ಅದ್ಧೂರಿ ಯಶಸ್ಸು ಕಂಡು ಈ ಚಿತ್ರ 50ನೇ ದಿನಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ನಾನು ಇಡೀ ಚಿತ್ರತಂಡಕ್ಕೆ, ಅಭಿಮಾನಿಗಳಿಗೆ ಮತ್ತು ಸಮಸ್ತ ಸಿನಿಪ್ರಿಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ,' ಎಂದು ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಇದಕ್ಕೆ ಕಾರಣರಾದ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಟಿ ಶ್ರೀನಿಧಿ ಶೆಟ್ಟಿ, ಹೊಂಬಾಳೆ ಪ್ರೊಡಕ್ಷನ್ ಹೌಸ್ ಹಾಗೂ ಕಾರ್ತಿಕ್‌ಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

34th Wedding Anniversary : ಅಂಬಿ ನೆನಪಲ್ಲಿ ಸುಮಲತಾ ಭಾವನಾತ್ಮಕ ಪೋಸ್ಟ್
ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ದರ್ಶನ್‌ಗೆ ಗುಡ್ ನ್ಯೂಸ್; ಅಭಿಮಾನಿಗಳೂ ಫುಲ್ ಖುಷ್!