ನರೇಂದ್ರ ಮೋದಿಯಾಗಲಿದ್ದಾರೆ ಈ ಬಾಲಿವುಡ್ ನಟ

Published : Jan 04, 2019, 11:10 PM IST
ನರೇಂದ್ರ ಮೋದಿಯಾಗಲಿದ್ದಾರೆ ಈ ಬಾಲಿವುಡ್ ನಟ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಬದುಕು ಆಧರಿಸಿದ ಪಿಎಂ ನರೇಂದ್ರ ಮೋದಿ ಬಯೋಪಿಕ್‌ನಲ್ಲಿ ಬಾಲಿವುಡ್ ನಟ ವಿವೇಕ್ ಓಬೇರಾಯ್ ಮೋದಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಮುಂಬೈ[ಜ.04] ಪ್ರಧಾನಿ ನರೇಂದ್ರ ಮೋದಿ ಅವರ ಬದುಕನ್ನು ಆಧರಿಸಿ ನಿರ್ಮಿಸಲಾಗುವ ಪಿಎಂ ನರೇಂದ್ರ ಮೋದಿ ಬಯೋಪಿಕ್‌ ಚಿತ್ರದಲ್ಲಿ ಬಾಲಿವುಡ್‌ ನಟ ವಿವೇಕ್‌ ಒಬೇರಾಯ್‌ ಅವರು ಮೋದಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

ಕೆಲ ಕಾಲದಿಂದ ಬಾಲಿವುಡ್‌ನಿಂದ ದೂರವಿದ್ದ ಓಬೇರಾಯ್ ಮೋದಿ ಅವತಾರದಲ್ಲಿ ಕಾಣಸಿಗಲಿದ್ದಾರೆ. ಈ ವಿಚಾರವನ್ನು ಖ್ಯಾತ ಚಿತ್ರ ವಿಮರ್ಶಕ ತರಣ್‌ ಆದರ್ಶ್‌ ತಮ್ಮ ಟ್ವೀಟರ್ ನಲ್ಲಿಯೂ ಹಂಚಿಕೊಂಡಿದ್ದಾರೆ.

'ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌' ನಲ್ಲಿ ಮನಮೋಹನ್ ಸಿಂಗ್‌ಗೆ ಅವಮಾನ?

ಉಮಂಗ್‌ ಕುಮಾರ್‌ ಮೋದಿ ಬಯೋಪಿಕ್‌ ಚಿತ್ರವನ್ನು ನಿರ್ದೇಶಿಸಲಿದ್ದು, ಸಂದೀಪ್‌ ಸಿಂಗ್‌ ನಿರ್ಮಿಸಲಿದ್ದಾರೆ.  ಚಿತ್ರದ ಮೊದಲ ಪೋಸ್ಟರ್‌ ಜನವರಿ 7ರಂದು ಬಿಡುಗಡೆಯಾಗಲಿದೆ. ಚಿತ್ರೀಕರಣ ಇದೇ ಜನವರಿ ಕೊನೆಯಲ್ಲಿ ಆರಂಭವಾಗುವ ನಿರೀಕ್ಷೆ ಇದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಂಡನ ಜೊತೆ ಜಾಲಿಯಾಗಿ ಮೆಲ್ಬೋರ್ನ್‌ ಸುತ್ತಾಡಿ ಬಂದ ಸೋನಲ್‌!
ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!