
ಉದಯಪುರ: ತಾರಾ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಕರ್ನಾಟಕದ ಕೊಡವ ಮತ್ತು ತೆಲುಗು ಸಂಪ್ರದಾಯದಂತೆ ಬೆಳಗ್ಗೆ 8 ಗಂಟೆಯ ಮುಹೂರ್ತದಲ್ಲಿ ಮದುವೆ ನಡೆಯಲಿದೆ.
ರಾಜಸ್ಥಾನದ ಉದಯಪುರದ ಐಟಿಸಿ ಹೋಟೆಲ್‌ನಲ್ಲಿ ಸಮಾರಂಭ ಜರುಗಲಿದ್ದು, ಬುಧವಾರವಷ್ಟೇ ಜೋಡಿ ತಮ್ಮ ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ಹಳದಿ ಶಾಸ್ತ್ರ ಆಚರಿಸಿದರು. ವಿಜಯ್ ಆಂಧ್ರಪ್ರದೇಶದವರು. ರಶ್ಮಿಕಾ ಕರ್ನಾಟಕದ ಕೊಡಗಿನ ಮೂಲದವರು. ಹೀಗಾಗಿ ಮೂಲಗಳ ಪ್ರಕಾರ ಇಬ್ಬರೂ ವಿವಾಹ ಕಾರ್ಯಕ್ರಮಗಳನ್ನು ತಮ್ಮ ತವರಿನ ಸಂಪ್ರದಾಯದಂತೆ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದಾರೆ,
ರಶ್ಮಿಕಾ ಮತ್ತು ವಿಜಯ್ ಜೋಡಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ‘ರಶ್ಮಿಕಾ ಮತ್ತು ವಿಜಯ್ ಹಾಗೂ ಅವರ ಕುಟುಂಬಸ್ಥರಿಗೆ ಅಭಿನಂದನೆಗಳು. ಇದು ಇಬ್ಬರ ಜೀವನದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತದೆ. ಒಟ್ಟಿಗೆ ಸಪ್ತಪದಿ ತುಳಿದು ದಂಪತಿಗಳು ಜೀವನಪರ್ಯಂತ ಸ್ನೇಹಿತರಾಗುತ್ತಾರೆ. ಮುಂದಿನ ದಿನಗಳು ಕನಸುಗಳು ಮತ್ತು ಅವುಗಳ ಈಡೇರಿಕೆಯಿಂದ ತಂಬಿರಲಿ. ಇಬ್ಬರಿಗೂ ಶುಭಾಶಯಗಳು’ ಎಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.