Sharmiela Mandre: 'ಇದು ನನ್ನ ಜೀವನದ ವಿಶೇಷ ಕ್ಷಣ': ನಿಶ್ಚಿತಾರ್ಥದ ಬಳಿಕ ಶರ್ಮಿಳಾ ಮಾಂಡ್ರೆ ಹೇಳಿದ್ದೇನು?

Published : Jun 29, 2026, 05:38 PM IST
Sharmiela Mandre

ಸಾರಾಂಶ

Sharmiela Mandre ತಮಿಳು ನಿರ್ಮಾಪಕ ಸುಧನ್ ಸುಂದರಂ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆಪ್ತರ ಸಮ್ಮುಖದಲ್ಲಿ ನಡೆದ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ದಕ್ಷಿಣ ಭಾರತದ ಜನಪ್ರಿಯ ನಟಿ ಹಾಗೂ ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಮತ್ತು ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಹೊಸ ಜೀವನದತ್ತ ಮೊದಲ ಹೆಜ್ಜೆಯಿಟ್ಟಿದ್ದಾರೆ. ಕುಟುಂಬಸ್ಥರು, ಆಪ್ತರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಡೆದ ಸರಳ ಆದರೆ ಅರ್ಥಪೂರ್ಣ ಸಮಾರಂಭದಲ್ಲಿ ಇಬ್ಬರೂ ಉಂಗುರ ಬದಲಾಯಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಈ ವಿಶೇಷ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಜೋಡಿಗೆ ಅಭಿಮಾನಿಗಳು ಮತ್ತು ಸಿನಿತಾರೆಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಬಿಳಿ ಹೂವುಗಳ ಸುಂದರ ಅಲಂಕಾರ ಮತ್ತು ಅತ್ಯಾಧುನಿಕ ವಿನ್ಯಾಸದಿಂದ ಕಂಗೊಳಿಸಿದ್ದ ನಿಶ್ಚಿತಾರ್ಥದ ವೇದಿಕೆ ಎಲ್ಲರ ಗಮನ ಸೆಳೆಯಿತು. ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಶರ್ಮಿಳಾ ಮತ್ತು ಸುಧನ್ ಅವರ ಹೊಸ ಜೀವನದ ಆರಂಭ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

"ಇದು ನಮ್ಮ ಜೀವನದ ಅತ್ಯಂತ ವಿಶೇಷ ಕ್ಷಣ. ನಮ್ಮ ಮೇಲೆ ಪ್ರೀತಿ, ಆಶೀರ್ವಾದ ಮತ್ತು ಶುಭಾಶಯಗಳ ಸುರಿಮಳೆಗರೆದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಜೀವನದ ಈ ಹೊಸ ಪಯಣವನ್ನು ಕಾತರದಿಂದ ಎದುರು ನೋಡುತ್ತಿದ್ದೇವೆ" ಎಂದು ಶರ್ಮಿಳಾ ಮಾಂಡ್ರೆ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸುಧನ್ ಸುಂದರಂ, "ಈ ಸಂತಸದ ಕ್ಷಣದಲ್ಲಿ ನಮ್ಮೊಂದಿಗಿದ್ದ ಕುಟುಂಬಸ್ಥರು, ಸ್ನೇಹಿತರು ಮತ್ತು ಹಿತೈಷಿಗಳ ಪ್ರೀತಿ, ಬೆಂಬಲ ಹಾಗೂ ಆಶೀರ್ವಾದಕ್ಕೆ ನಾವು ಸದಾ ಚಿರಋಣಿಗಳಾಗಿರುತ್ತೇವೆ" ಎಂದಿದ್ದಾರೆ.

ಶುಭಾಶಯಗಳ ಸುರಿಮಳೆ

ಇಬ್ಬರೂ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ನಿಶ್ಚಿತಾರ್ಥದ ಫೋಟೋಗಳನ್ನು ಹಂಚಿಕೊಂಡಿದ್ದು, ಕಾಮೆಂಟ್ ವಿಭಾಗದಲ್ಲಿ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಾಶಯಗಳ ಸುರಿಮಳೆಯನ್ನೇ ಹರಿಸಿದ್ದಾರೆ. 2007ರಲ್ಲಿ ಬಿಡುಗಡೆಯಾದ 'ಸಜನಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಶರ್ಮಿಳಾ ಮಾಂಡ್ರೆ, 'ಕೃಷ್ಣ', 'ನವಗ್ರಹ', 'ಸ್ವಯಂವರ', 'ಆಕೆ', 'ಗಾಳಿಪಟ 2', 'ಪೌಡರ್' ಹಾಗೂ 'ಡೆವಿಲ್' ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿದ್ದಾರೆ. ನಟನೆಯ ಜೊತೆಗೆ 'Sharmiela Mandre Productions' ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿರುವ ಅವರು, ಕಂಟೆಂಟ್‌ ಆಧಾರಿತ ಸಿನಿಮಾಗಳಿಗೆ ನಿರಂತರವಾಗಿ ಬೆಂಬಲ ನೀಡುತ್ತಿದ್ದಾರೆ.

ಇನ್ನೊಂದೆಡೆ, 'Passion Studios' ಸಂಸ್ಥಾಪಕರಾದ ಸುಧನ್ ಸುಂದರಂ, ತಮಿಳು ಚಿತ್ರರಂಗದ ಪ್ರಮುಖ ನಿರ್ಮಾಪಕರಲ್ಲಿ ಒಬ್ಬರು. 'ಕಪ್ಪಲ್', 'ನಿಬುಣನ್', 'ಸೀತಕಾತಿ', 'ಅನಬೆಲ್ ಸೇತುಪತಿ', ರಾಷ್ಟ್ರ ಪ್ರಶಸ್ತಿ ವಿಜೇತ 'ಪಾರ್ಕಿಂಗ್' ಹಾಗೂ ವಿಜಯ್ ಸೇತುಪತಿ ಅಭಿನಯದ 'ಮಹಾರಾಜ' ಸೇರಿದಂತೆ ಹಲವು ಯಶಸ್ವಿ ಹಾಗೂ ವಿಭಿನ್ನ ಕಥಾಹಂದರದ ಚಿತ್ರಗಳನ್ನು ನಿರ್ಮಿಸಿ ಚಿತ್ರರಂಗದಲ್ಲಿ ವಿಶಿಷ್ಟ ಹೆಜ್ಜೆ ಗುರುತು ಮೂಡಿಸಿದ್ದಾರೆ. ಹೊಸ ಜೀವನದ ಪಯಣ ಆರಂಭಿಸಿರುವ ಈ ಜೋಡಿಗೆ ಅಭಿಮಾನಿಗಳು, ಸ್ನೇಹಿತರು ಹಾಗೂ ಚಿತ್ರರಂಗದ ಗಣ್ಯರು ಹಾರ್ದಿಕ ಶುಭಾಶಯಗಳನ್ನು ಕೋರುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನನಗೆ ಆಗಲ್ಲ ಎಂದು ಕೈಮುಗಿದ್ರೂ ಕೇಳ್ದೇ ರೋಲ್​​ ಕೊಟ್ರು: ದಿಲೀಪ್​ ರಾಜ್​ರನ್ನು ನೆನೆದ 'ಪಾರು'
NS Shankar: ಒಂದು ಸಿನಿಮಾ, ಸಾವಿರ ನೆನಪು... ತೆರೆಗೆ ಸರಿದ ನಗಿಸಿದ ನಿರ್ದೇಶಕ ಎನ್‌.ಎಸ್‌.ಶಂಕರ್‌