
ಬಾಲಿವುಡ್ ನಟಿ ಐಶ್ವರ್ಯಾ ರೈ ಸದ್ಯ ಅಭಿಷೇಕ್ ಬಚ್ಚನ್ ಪತ್ನಿ. ಆದರೆ ಒಂದು ಕಾಲದಲ್ಲಿ ಸಲ್ಮಾನ್ ಖಾನ್ ಜೊತೆಗಿನ ಅವರ ಪ್ರೇಮ ಸಂಬಂಧ ದೊಡ್ಡ ಸುದ್ದಿಯಾಗಿತ್ತು. ಈ ಸಂಬಂಧ ಮುರಿದುಬಿದ್ದಾಗ, ಸಂದರ್ಶನವೊಂದರಲ್ಲಿ ಐಶ್ವರ್ಯಾ, 'ನನ್ನೊಳಗಿದ್ದ ರಾಕ್ಷಸರನ್ನು ಹೊರಹಾಕಿದ್ದೇನೆ' ಎಂದು ಹೇಳಿಕೆ ನೀಡಿದ್ದರು. ಆ ಹಳೆಯ ಘಟನೆಯನ್ನು ಇಲ್ಲಿ ನೆನಪಿಸಿಕೊಳ್ಳಲಾಗಿದೆ.
ಐಶ್ವರ್ಯಾ ರೈ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ? ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಅವರು ಕೂಡ ಒಬ್ಬರು. ಅವರ ಸಿನಿಮಾಗಳಿಗಿಂತ ಹೆಚ್ಚಾಗಿ, ಅವರ ವೈಯಕ್ತಿಕ ಜೀವನವೇ ಅಭಿಮಾನಿಗಳಲ್ಲಿ ಹೆಚ್ಚು ಕುತೂಹಲ ಮೂಡಿಸುತ್ತದೆ. ಸದ್ಯ ಅವರು ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗಿ, ಒಬ್ಬ ಮಗಳ ತಾಯಿಯಾಗಿದ್ದಾರೆ. ಇತ್ತೀಚೆಗೆ ಇವರಿಬ್ಬರ ದಾಂಪತ್ಯದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವದಂತಿಗಳು ಹರಿದಾಡಿದ್ದವು, ಆದರೆ ಈ ಬಗ್ಗೆ ಯಾರೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ಇದೆಲ್ಲದರ ನಡುವೆ, ಸಲ್ಮಾನ್ ಖಾನ್ ಜೊತೆಗಿನ ಅವರ ಹಳೆಯ ಪ್ರೇಮ ಸಂಬಂಧ ಇಂದಿಗೂ ಚರ್ಚೆಯಲ್ಲಿದೆ.
ಐಶ್ವರ್ಯಾ ಮತ್ತು ಸಲ್ಮಾನ್ ಸಂಬಂಧ
ಹೌದು, ಒಂದು ಕಾಲದಲ್ಲಿ ಐಶ್ವರ್ಯಾ ಮತ್ತು ಸಲ್ಮಾನ್ ಖಾನ್ ಪ್ರೇಮ ಸಂಬಂಧದಲ್ಲಿದ್ದರು ಎಂದು ವರದಿಯಾಗಿತ್ತು. ಆದರೆ ಈ ಸಂಬಂಧದಲ್ಲಿ ಸಾಕಷ್ಟು ಏಳುಬೀಳುಗಳಿದ್ದವು ಎನ್ನಲಾಗಿದೆ. ಇಬ್ಬರ ನಡುವೆ ಆಗಾಗ ಜಗಳಗಳು, ವಾದ-ವಿವಾದಗಳು ನಡೆಯುತ್ತಿದ್ದವು ಮತ್ತು ಸಲ್ಮಾನ್, ಐಶ್ವರ್ಯಾ ಮೇಲೆ ಹಲ್ಲೆ ನಡೆಸುತ್ತಿದ್ದರು ಎಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಬ್ರೇಕಪ್ ನಂತರ, ಸಲ್ಮಾನ್ ಬಗ್ಗೆ ಪ್ರಶ್ನೆ ಕೇಳಿದಾಗಲೆಲ್ಲಾ ಐಶ್ವರ್ಯಾ ನೇರವಾಗಿ ಉತ್ತರ ನೀಡದೆ ಮೌನ ವಹಿಸುತ್ತಿದ್ದರು. ಇದು ಮತ್ತಷ್ಟು ಚರ್ಚೆಗೆ ಕಾರಣವಾಗಿತ್ತು.
ಬ್ರೇಕಪ್ ಬಗ್ಗೆ ಐಶ್ವರ್ಯಾ ಹೇಳಿದ್ದೇನು?
2012ರಲ್ಲಿ ಸಿಮಿ ಗರೆವಾಲ್ ಅವರ ಟಾಕ್ ಶೋ ಒಂದರಲ್ಲಿ ಐಶ್ವರ್ಯಾ ಭಾಗವಹಿಸಿದ್ದರು. ಆಗ ಸಿಮಿ, ಸಲ್ಮಾನ್ ಜೊತೆಗಿನ ಸಂಬಂಧದ ಬಗ್ಗೆ ಕೇಳಿದಾಗ, "ನಾನು ಆ ವಿಷಯವನ್ನು ಸಂಪೂರ್ಣವಾಗಿ ಬದಿಗಿಟ್ಟಿದ್ದೇನೆ. ಅದರ ಬಗ್ಗೆ ಯಾವುದೇ ರೀತಿಯಲ್ಲಿ ನೋಡಲು ಅಥವಾ ಮಾತನಾಡಲು ನಾನು ಇಷ್ಟಪಡುವುದಿಲ್ಲ, ಅದರಲ್ಲೂ ಸಾರ್ವಜನಿಕವಾಗಿ ಈ ಬಗ್ಗೆ ಮಾತಾಡೋಕೆ ನನಗೆ ಖಂಡಿತ ಇಷ್ಟವಿಲ್ಲ" ಎಂದು ಹೇಳಿದ್ದರು.
ಆಗ ಸಿಮಿ, "ಆ ವಿಷಯದ ಬಗ್ಗೆ ನಿಮಗೆ ಈಗಲೂ ಕೆಟ್ಟ ಭಾವನೆ ಇದೆಯಾ?" ಎಂದು ಕೇಳಿದರು. ಅದಕ್ಕೆ ಐಶ್ವರ್ಯಾ, "ನನ್ನೊಳಗಿದ್ದ ರಾಕ್ಷಸರನ್ನು ನಾನು ಹೊರಹಾಕಿದ್ದೇನೆ. ಅದೆಲ್ಲಾ ಹಳೆಯ ಕಥೆ, ಅದನ್ನು ಅಲ್ಲಿಗೇ ಬಿಟ್ಟುಬಿಡಬೇಕು" ಎಂದು ಖಡಕ್ ಆಗಿ ಉತ್ತರಿಸಿದ್ದರು. ಸಂಜಯ್ ಲೀಲಾ ಬನ್ಸಾಲಿ ಅವರ 'ಹಮ್ ದಿಲ್ ದೇ ಚುಕೆ ಸನಮ್' ಸಿನಿಮಾದ ಚಿತ್ರೀಕರಣದ ವೇಳೆ ಇವರಿಬ್ಬರು ಹತ್ತಿರವಾಗಿದ್ದರು ಎನ್ನಲಾಗಿದೆ.
ಐಶ್ವರ್ಯಾ ಇತ್ತೀಚೆಗೆ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಪ್ರತಿದಿನವೂ ವಿಭಿನ್ನವಾದ ಅದ್ಭುತ ಉಡುಗೆಗಳನ್ನು ಧರಿಸಿ ಎಲ್ಲರ ಗಮನ ಸೆಳೆದಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.