
ಬೆಂಗಳೂರು[ಸೆ.13] ಮಹಿಳಾ ಸಂಘದ ಹಣಕ್ಕಾಗಿ ಚಿತ್ರನಟಿ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ಮಾಡಿದ್ದು ಹಣ ಮತ್ತು ಕಾರು ಸುಲಿಗೆ ಮಾಡಿದ್ದಾರೆ. ಆದಿಶಕ್ತಿ ಮಹಿಳಾ ಸಂಘದ ಕಾರ್ಯಕರ್ತರಿಂದ ರಘು ಎಂಬುವರ ಮೇಲೆ ಹಲ್ಲೆ ನಡೆಸಿದ ಚಿತ್ರ ನಟಿ ಸುಲಿಗೆ ಮಾಡಿದ್ದಾರೆ.
ಚಿತ್ರನಟಿ ಸುಷ್ಮಿತಾ ಎಂಬಾಕೆ ತನ್ನ ಸಹಚರರೊಂದಿಗೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ರಘು ಒಬ್ಬನೇ ಹಣ ಮಾಡುತ್ತಿದ್ದಾನೆ ಎಂದು ಆರೋಪಿಸಿ ಹಲ್ಲೆ ನಡೆಸಿ ಕಾರು , ಹಣ ಲ್ಯಾಪ್ ಟ್ಯಾಪ್ ದೋಚಲಾಗಿದೆ ಎಂದು ಹೇಳಲಾಗಿದೆ.
ತನ್ನ ಆರು ಜನ ಸಹಚರರೊಂದಿಗೆ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.