ರಶ್ಮಿಕಾ ಮಂದಣ್ಣ ಹೇಳಿಕೆಗೆ ಯಶ್ ಪ್ರತಿಕ್ರಿಯಿಸಿದ್ದು ಹೀಗೆ

Published : Jun 26, 2017, 07:29 PM ISTUpdated : Apr 11, 2018, 01:07 PM IST
ರಶ್ಮಿಕಾ ಮಂದಣ್ಣ ಹೇಳಿಕೆಗೆ ಯಶ್ ಪ್ರತಿಕ್ರಿಯಿಸಿದ್ದು ಹೀಗೆ

ಸಾರಾಂಶ

ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಖಾಸಗಿ ಸಂದರ್ಶವೊಂದರಲ್ಲಿ, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ನೀಡಿದ ಹೇಳಿಕೆ ಯಶ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ಸಂದರ್ಶನವೊಂದರಲ್ಲಿ ನಿರೂಪಕ  ಕನ್ನಡದ ಯಾವ ನಟ ಮಿಸ್ಟರ್ ಶೋ ಆಫ್ ಅಂತಾ ಪ್ರಶ್ನೆ ಕೇಳಿದ್ರು. ಈ ಪ್ರಶ್ನೆಗೆ ನೇರವಾಗಿ ರಶ್ನಿಕಾ ಮಂದಣ್ಣ ಯಶ್ ಅಂತಾ ಹೇಳಿದ್ರು. ಈ ಮಾತು ಯಶ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಯಶ್ ಅಭಿಮಾನಿಗಳು ರಶ್ಮಿಕಾ ಹೇಳಿಕೆ ಬಗ್ಗೆ  ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಯಶ್‌ ರಶ್ಮಿಕಾ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಅಭಿಪ್ರಾಯವನ್ನು ಬರೆದು ಪೋಸ್ಟ್‌ ಮಾಡಿದ್ದಾರೆ.

ಬೆಂಗಳೂರು (ಜೂ.26): ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಖಾಸಗಿ ಸಂದರ್ಶವೊಂದರಲ್ಲಿ, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ನೀಡಿದ ಹೇಳಿ ಯಶ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ಸಂದರ್ಶನವೊಂದರಲ್ಲಿ ನಿರೂಪಕ  ಕನ್ನಡದ ಯಾವ ನಟ ಮಿಸ್ಟರ್ ಶೋ ಆಫ್ ಅಂತಾ ಪ್ರಶ್ನೆ ಕೇಳಿದ್ರು. ಈ ಪ್ರಶ್ನೆಗೆ ನೇರವಾಗಿ ರಶ್ನಿಕಾ ಮಂದಣ್ಣ ಯಶ್ ಅಂತಾ ಹೇಳಿದ್ರು. ಈ ಮಾತು ಯಶ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಯಶ್ ಅಭಿಮಾನಿಗಳು ರಶ್ಮಿಕಾ ಹೇಳಿಕೆ ಬಗ್ಗೆ  ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಯಶ್‌ ರಶ್ಮಿಕಾ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಅಭಿಪ್ರಾಯವನ್ನು ಬರೆದು ಪೋಸ್ಟ್‌ ಮಾಡಿದ್ದಾರೆ.

"ಒಬ್ಬ ನಟನಾಗಿ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಸಂಪಾದಿಸುವುದನ್ನೇ ಗುರಿಯಾಗಿಟ್ಟುಕೊಂಡು ಕೆಲಸ ಮಾಡುವ ನಾನು, ಕೆಲವೊಮ್ಮೆ ಎದುರಾಗುವ ಅನಗತ್ಯ ಎನಿಸುವ ವಿಷಯಗಳನ್ನು ನಿರ್ಲ್ಯಕ್ಷಿಸುವ ಸ್ವಭಾವವನ್ನು ರೂಢಿಸಿಕೊಂಡಿದ್ದೇನೆ. ಆದರೆ ನನ್ನನ್ನು ಪ್ರೀತಿಸುವ ನಿಮ್ಮ ಮನಸಿಗೆ ನೋವಾದಾಗ ಪ್ರತಿಕ್ರಿಯೆ ನೀಡದೆ ಇರುವುದು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಅಭಿಮಾನ ಪ್ರೀತಿಗೆ ಬೆಲೆಕಟ್ಟಲಾಗುವುದಿಲ್ಲ, ಅದಕ್ಕೆ ನಾನೆಂದು ಚಿರಋಣಿ.‘ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯೂ ಮಾಡಿಲ್ಲ. ಮಾತು ಸಹ ಆಡಿಲ್ಲ. ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಆಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು, ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ.ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ. ಈ ವಿಷಯ ಇಲ್ಲಿಗೆ ಬಿಟ್ಟುಬಿಡಿ. ಇಲ್ಲಿ ಚರ್ಚಿಸುವಂತದ್ದು ಏನೂ ಇಲ್ಲ!  ಕೆಲವೇ ದಿನಗಳಲ್ಲಿ ''ಕೆ.ಜಿ.ಎಫ್'' ಚಿತ್ರದ ಮತ್ತೊಂದು ಸ್ಟಿಲ್ ಬರಲಿದೆ. ಅಲ್ಲಿಯವರೆಗೆ ಈದ್ ಮುಬಾರಕ್" ಎಂದಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಬಗ್ಗೆ ನಂಬಲಸಾಧ್ಯ, ಯಾರೂ ಹೇಳದ ಗುಟ್ಟುಗಳನ್ನು ರಿವೀಲ್​ ಮಾಡಿದ ಅಭಿಷೇಕ್​ ಶ್ರೀಕಾಂತ್​
ಶಿರಸಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!