Viral News: ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರ.?

Suvarna News   | Asianet News
Published : Jan 07, 2022, 05:58 PM ISTUpdated : Jan 07, 2022, 06:08 PM IST
Viral News:  ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರ.?

ಸಾರಾಂಶ

ದಿವಂಗತ (late) ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಕೆಎಂಎಫ್‌ (KMF)ವಿಶೇಷವಾಗಿ ಗೌರವ ಸಲ್ಲಿಸಿದೆ. ತನ್ನ ಜನಪ್ರಿಯ ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರವನ್ನು (Photo) ಮುದ್ರಿಸುವ ಮೂಲಕ ಗೌವರ ಸಲ್ಲಿಸಿದೆ ಎಂಬ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಈ ಫೋಟೋ ನೋಡಿ ಅಭಿಮಾನಿಗಳು, ಕನ್ನಡಿಗರು ಅತೀವ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಜಾಲತಾಣಗಳಲ್ಲಿ ಹಂಚಿಕೊಂಡು ಕೆಎಂಎಫ್‌ಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ಆದರೆ ನಿಜಕ್ಕೂ ಕೆಎಂಎಫ್‌ ಹಾಲಿನ ಪ್ಯಾಕೆಟ್‌ ಮೇಲೆ ಅಪ್ಪು ಫೋಟೋ ಮುದ್ರಿಸಿದೆಯೇ ಎಂದು ಪರಿಶೀಲಿಸಿದಾಗ ಇದು ಸುಳ್ಳು ಸುದ್ದಿ ಎಂಬುದು ಖಚಿತವಾಗಿದೆ. ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್‌ ರಾಜ್‌ಕುಮಾರ್‌ ಭಾವಚಿತ್ರ ಮುದ್ರಿಸಿಲ್ಲ. ಈ ನಿರ್ಧಾರವನ್ನು ನಾವು ತೆಗೆದುಕೊಂಡಿಲ್ಲ ಎಂದು ಕೆಎಂಎಫ್‌ ಅ​ಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Fact check: 1999 ರಲ್ಲೇ 'ಒಮಿಕ್ರೋನ್' ವಿಡಿಯೋ ಗೇಮ್ ರಚಿಸಿದ್ರಾ ಬಿಲ್ ಗೇಟ್ಸ್?

ರೈತರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಕೆಎಂಎಫ್‌ ಉತ್ಪನ್ನಗಳಿಗೆ ನಟ ಪುನೀತ್‌ ಸುಮಾರು 10 ವರ್ಷಗಳಿಂದ ಪ್ರಚಾರ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರು ಕೆಎಂಎಫ್‌ನಿಂದ ಯಾವುದೇ ಸಂಭಾವನೆ ಪಡೆಯುತ್ತಿರಲಿಲ್ಲ ಆದರೆ ಹೃದಯಾಘಾತದಿಂದ ಪುನೀತ್‌ ಕಳೆದ 2 ತಿಂಗಳ ಹಿಂದೆ ನಿಧನರಾಗಿದ್ದು, ಅಭಿಮಾನಿಗಳು ಅಪ್ಪು ಅಗಲಿಕೆಗೆ ಇನ್ನೂ ಕಂಬಿನಿ ಮಿಡಿಯುತ್ತಿದ್ದಾರೆ.

- ವೈರಲ್ ಚೆಕ್ 

PREV
Read more Articles on
click me!

Recommended Stories

ಡೈಪರ್ ಬಳಸಿದರೆ ಮಕ್ಕಳ ಕಿಡ್ನಿ ಹಾಳಾಗುತ್ತಾ, ವೈರಲ್ ಆಗಿರೊ ಸುದ್ದಿಯಲ್ಲಿ ಸತ್ಯವೆಷ್ಟು?
ಯುವ ಜೋಡಿಯ 'ಆ 19 ನಿಮಿಷ'ದ MMS ಲೀಕ್​ ಆಯ್ತು! ಹಲ್​ಚಲ್​ ಸೃಷ್ಟಿಸಿರೋ ವಿಡಿಯೋದ ಅಸಲಿಯತ್ತೇನು?