ಕ್ರಿಸ್ಮಸ್ ಆಚರಣೆಗೆ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಚರ್ಚಗಳು ಹಾಗೂ ಕ್ರೈಸ್ತರ ಮನೆಗಳಲ್ಲಿ ಸಿದ್ಧತೆ ನಡೆದಿವೆ. ಡಿ.25 (ಸೋಮವಾರ) ಕ್ರಿಸ್ಮಸ್ ಹಬ್ಬದ ಆಚರಣೆ ನಡೆಯಲಿದ್ದರೂ ಡಿ.24ರ (ಭಾನುವಾರ) ರಾತ್ರಿಯಿಂದಲೇ ಚರ್ಚೆಗಳಲ್ಲಿ ವಿಶೇಷ ಕಾರ್ಯಕ್ರಮಗಳು ಆರಂಭಗೊಳ್ಳುತ್ತವೆ. ಮಧ್ಯರಾತ್ರಿಯೇ ವಿಶೇಷ ಸಾಮೂಹಿಕ ಪ್ರಾರ್ಥನೆ ನೆರವೇರಲಿವೆ. ಹಬ್ಬದ ಹಿನ್ನೆಲೆಯಲ್ಲಿ ಬಿಷಪ್ ಅವರಿಂದ ಸಂದೇಶವಿರುತ್ತದೆ.
ಬೆಳಗಾವಿ(ಡಿ.22): ವರ್ಷಾಂತ್ಯದ ಬಹುದೊಡ್ಡ ಸಂಭ್ರಮದ ಕ್ರಿಸ್ಮಸ್ ಆಚರಣೆಗೆ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ. ಕ್ರೈಸ್ತರ ಮನೆಗಳ ಮುಂದೆ ನಕ್ಷತ್ರ ಬುಟ್ಟಿಗಳು ಗಮನ ಸೆಳೆಯುತ್ತಿವೆ. ಬಾಲಯೇಸುವಿಗಾಗಿ ಪುಟ್ಟ ಗೋದಲಿಸಿದ್ಧಗೊಳ್ಳುತ್ತಿದೆ. ಮನೆಯೊಳಗೆ ಕೇಕ್ ತಯಾರಿಗೆ ಭರದ ಸಿದ್ಧತೆ ನಡೆದಿದೆ. ಕ್ರಿಸ್ಮಸ್ ಟ್ರಿ ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸುತ್ತಿವೆ.
ಕ್ರಿಸ್ಮಸ್ ಆಚರಣೆಗೆ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಚರ್ಚಗಳು ಹಾಗೂ ಕ್ರೈಸ್ತರ ಮನೆಗಳಲ್ಲಿ ಸಿದ್ಧತೆ ನಡೆದಿವೆ. ಡಿ.25 (ಸೋಮವಾರ) ಕ್ರಿಸ್ಮಸ್ ಹಬ್ಬದ ಆಚರಣೆ ನಡೆಯಲಿದ್ದರೂ ಡಿ.24ರ (ಭಾನುವಾರ) ರಾತ್ರಿಯಿಂದಲೇ ಚರ್ಚೆಗಳಲ್ಲಿ ವಿಶೇಷ ಕಾರ್ಯಕ್ರಮಗಳು ಆರಂಭಗೊಳ್ಳುತ್ತವೆ. ಮಧ್ಯರಾತ್ರಿಯೇ ವಿಶೇಷ ಸಾಮೂಹಿಕ ಪ್ರಾರ್ಥನೆ ನೆರವೇರಲಿವೆ. ಹಬ್ಬದ ಹಿನ್ನೆಲೆಯಲ್ಲಿ ಬಿಷಪ್ ಅವರಿಂದ ಸಂದೇಶವಿರುತ್ತದೆ.
undefined
ಗೀತಾ ಜಯಂತಿಯಂದು 1 ಲಕ್ಷ ಗೀತಾ ಪ್ರೇಮಿಗಳಿಂದ ನಿರಂತರ 42 ಗಂಟೆ ಅಖಂಡ ಗೀತಾ ಪಾರಾಯಣ
ಕ್ರಿಸ್ಮಸ್ ಸಂಭ್ರಮದ ಹಿನ್ನೆಲೆಯಲ್ಲಿ ನಗರದ ಫಾತಿಮಾ ಕೆಥಿಡ್ರಲ್ ಚರ್ಚ್, ಐ.ಸಿ.ಚರ್ಚ್, ಸೇಂಟ್ ಅಂಥೋನಿ ಚರ್ಚ್, ಮೌಂಟ್ಕಾರ್ಮಲ್ ಚರ್ಚ್, ಸೇಂಟ್ ಮೇರಿ ಚರ್ಚ್, ಮೆಥೋಡಿಸ್ಟ್ ಚರ್ಚ್ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಚರ್ಚಗಳಲ್ಲಿ ಸಿದ್ಧತೆ ನಡೆಯುತ್ತಿದೆ. ಚರ್ಚಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳ್ಳುತ್ತಿವೆ. ನಕ್ಷತ್ರ ಬುಟ್ಟಿಗಳು ಮೆರಗು ನೀಡುತ್ತಿವೆ. ಯೇಸು ಕ್ರಿಸ್ತನ ಜನನದ ಸನ್ನಿವೇಶ ಬಿಂಬಿಸುವ ಗೋದಲಿಗಳು ಗಮನ ಸೆಳೆಯುತ್ತವೆ.
ವಿಶೇಷವಾಗಿ ಕ್ಯಾಂಪ್ ಪ್ರದೇಶದಲ್ಲಿರುವ ಚರ್ಚಗಳು ಹಾಗೂ ಕ್ರೈಸ್ತರ ಮನೆಗಳ ಆವರಣದಲ್ಲಿ ನಕ್ಷತ್ರ ಬುಟ್ಟಿಗಳು ಗಮನ ಸೆಳೆಯುತ್ತಿವೆ. ಡಿ.24ರ ಮಧ್ಯರಾತ್ರಿಯಿಂದಲೇ ವಿಶೇಷ ಪ್ರಾರ್ಥನೆ ಮೂಲಕ ಕ್ರಿಸ್ಮಸ್ ಕಳೆಗಟ್ಟಲಿದೆ. ವಿಶೇಷ ಪ್ರಾರ್ಥ ನೆ ಬಳಿಕ ಕ್ರೈ ಸ್ತರು ಸಿಹಿ ತಿನಿಸುಗಳನ್ನು ಹಂಚಿಕೊಳ್ಳುತ್ತಾರೆ. ಡಿ.25ರ ಬೆಳಗಿನ ಜಾವದವರೆಗೂ ನಡೆಯುವ ಸಂತೋಷ ಕೂಟದ ವಿಶೇಷ ಗೀತಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.
ಭಗವದ್ಗೀತೆ: ಕಳ್ಳತನವೆಂದೆರ ಇನ್ನೊಬ್ಬರ ವಸ್ತು ಮಾತ್ರವಲ್ಲ, ಸುಖ-ಸಂತೋಷ ಕದಿಯೋದೂ ಹೌದು!
ಜಿಲ್ಲೆಯಲ್ಲಿ ರೋಮನ್ ಕ್ಯಾಥೋಲಿಕ್ ಮತ್ತು ಪ್ರೊಟೆಸ್ಟೆಂಟ್ ಕ್ರೈಸ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೋಮನ್ ಕ್ಯಾಥೋಲಿಕ್ ಪಂಗಡಕ್ಕೆ ಸೇರಿದವರು ಸಂಪ್ರದಾಯಗಳನ್ನು ಪಾಲಿಸುತ್ತಾರೆ. ಪೋಪ್ ಧರ್ಮ ಗುರುವನ್ನು ನಂಬುತ್ತಾರೆ. ನಗರ ಹಾಗೂ ತಾಲ್ಲೂಕಿನಲ್ಲಿ 20ಕ್ಕೂ ಹೆಚ್ಚು ಹಾಗೂ ಜಿಲ್ಲೆಯಾದ್ಯಂತ 100ಕ್ಕೂ ಹೆಚ್ಚು ಚರ್ಚ್‌ಗಳಿವೆ. ಅವುಗಳಲ್ಲೀಗ ಕ್ರಿಸ್ಮಸ್ ಸಂಭ್ರಮ ಮನೆಮಾಡಿದೆ.
ಕ್ರಿಸ್ಮಸ್ ಸಂದರ್ಭದಲ್ಲಿ ಎಲ್ಲೆಡೆ ಕೇಕ್ ಹಂಚುವ ಪದ್ಧತಿಯಿದೆ. ಅಕ್ಕಿ, ರವೆಲಡ್ಡು, ವಿವಿಧ ರೀತಿಯ ಚಕ್ಕುಲಿಗಳು, ಅಕ್ಕಿ ಹಿಟ್ಟಿನಿಂದ ತಯಾರಿಸಿದ ತಿಂಡಿಗಳನ್ನು ಮನೆಯಲ್ಲೇ ತಯಾರಿಸಿ, ತಮ್ಮ ಸಂಬಂಧಿಕರಿಗೆ, ಸ್ನೇಹಿತರಿಗೆ, ನೆರೆಹೊರೆಯವರಿಗೆ ಹಂಚುತ್ತಾರೆ. ಹೊಸ ಬಟ್ಟೆ ತೊಟ್ಟು ಕ್ರೈಸ್ತರು ಪರಸ್ಪರ ಕೇಕ್ ವಿನಿಮಯಮಾಡಿಕೊಂಡು ಶುಭಾಶಯ ಕೋರುತ್ತಾರೆ. ಬೇಕರಿಗಳಲ್ಲಿಯೂ ಕೇಕ್‌ಗೆ ಈಗ ಭಾರೀ ಬೇಡಿಕೆ ಬಂದಿದೆ. ಡಿ.24ರ ಮಧ್ಯರಾತ್ರಿ ವಿಶೇಷ ಪೂಜೆಯೊಂದಿಗೆ ಯೇಸುಕ್ರಿಸ್ತನ ಜನನ ಸಂಭ್ರಮವನ್ನು ಆಚರಿಸಲಾಗುತ್ತದೆ. ಆ ಮೂಲಕ ಡಿ.1ರಿಂದ ಆರಂಭಗೊಂಡ ಕ್ರಿಸ್ಮಸ್ ಧಾರ್ಮಿಕ ಆಚರಣೆಗಳಿಗೆ ತೆರೆ ಬೀಳಲಿದೆ.