Bengaluru: ಇಂದು ಮಧ್ಯರಾತ್ರಿ ಐತಿಹಾಸಿಕ ಅದ್ಧೂರಿ ಕರಗ ಶಕ್ತ್ಯೋತ್ಸವ

By Kannadaprabha News  |  First Published Apr 6, 2023, 9:52 AM IST

ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಶಕ್ತ್ಯೋತ್ಸವವು ಗುರುವಾರ ಮಧ್ಯರಾತ್ರಿ ವಿಜೃಂಭಣೆಯಿಂದ ಜರುಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
 


ಬೆಂಗಳೂರು (ಏ.06): ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಶಕ್ತ್ಯೋತ್ಸವವು ಗುರುವಾರ ಮಧ್ಯರಾತ್ರಿ ವಿಜೃಂಭಣೆಯಿಂದ ಜರುಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇತಿಹಾಸ ಪ್ರಸಿದ್ಧ ಕರಗ ಶಕ್ತ್ಯೋತ್ಸವದ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲ ರಸ್ತೆಗಳು ವಿದ್ಯುತ್‌ ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ. ಭದ್ರತೆ ದೃಷ್ಟಿಯಿಂದ ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕರಗದ ವೈಭವವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬರಲಿದೆ.

ಏ.6ರ ಮಧ್ಯರಾತ್ರಿ ಕರಗ ಶಕ್ತ್ಯೋತ್ಸವವು ಅದ್ಧೂರಿಯಾಗಿ ನಡೆಯಲಿದೆ. ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಹೊರಲಿದ್ದಾರೆ. ನಗರದ ಆಯ್ದ ರಸ್ತೆಗಳಲ್ಲಿ ಕರಗದ ಮೆರವಣಿಗೆ ಸಾಗಲಿದ್ದು, ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ನೆರೆ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ. ಇನ್ನು ಬುಧವಾರ ರಾತ್ರಿ ಪುರಾಣ ಕಥನ ಹಾಗೂ ಪೊಂಗಲ್‌ ಸೇವೆ ವಿಶೇಷವಾಗಿ ನಡೆಯಿತು. ಎಂದಿನಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾ, ಭಕ್ತಿಯಿಂದ ನಡೆದವು.

Tap to resize

Latest Videos

Bengaluru: ವಿಜೃಂಭಣೆಯ ಐತಿಹಾಸಿಕ ಧರ್ಮರಾಯ ಹಸಿ ಕರಗ ಮಹೋತ್ಸವಕ್ಕೆ ಸಕಲ ಸಿದ್ಧತೆ

ಹಬ್ಬದ ವಾತಾವರಣ: ವರ್ಷಕ್ಕೊಮ್ಮೆ ನಡೆಯುವ ಹೂವಿನ ಕರಗ ಉತ್ಸವ ನಗರ್ತಪೇಟೆಯ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದೆ. ಸರ್ವ ಧರ್ಮಗಳ ಭಾವೈಕ್ಯತೆಯ ಸಂಗಮವಾಗಿರುವ ಅಕ್ಕಿಪೇಟೆ ರಸ್ತೆಯ ತವಕ್ಕಲ್‌ ಮಸ್ತಾನ್‌ ದರ್ಗಾ ಕೂಡ ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿದೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿಯಂತೆ ಹೂವಿನ ಕರಗ ದರ್ಗಾದೊಳಕ್ಕೆ ಪ್ರವೇಶಿಸಿ ಮುಂದಕ್ಕೆ ಸಾಗಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ಅದ್ಧೂರಿಯಾಗಿ ನಡೆದಿವೆ.

ತಮಿಳುನಾಡಿನ ಪರಿಣಿತರಿಂದ ಅಲಂಕಾರ: ಕರಗದ ಹಿನ್ನೆಲೆಯಲ್ಲಿ ದೇವಾಲಯದ ಒಳಗೆ, ಹೊರಗೆ ಹಾಗೂ ಕರಗಕ್ಕೆ ಮಲ್ಲಿಗೆ ಹೂವಿನ ಅಲಂಕಾರ ಮಾಡಲು ತಮಿಳುನಾಡಿನಿಂದ 150 ಮಂದಿ ಪರಿಣಿತರನ್ನು ಕರೆಸಲಾಗಿದೆ. ಹೂವಿನ ಅಲಂಕಾರದ ವೈಭೋಗ ತುಂಬಾ ಸೊಗಸಾಗಿರಲಿದೆ. ಅದೇ ರೀತಿ ವಿದ್ಯುತ್‌ ದೀಪಾಲಂಕಾರ ಕೂಡ ಕಣ್ಮನ ತಣಿಸಲಿದ್ದು, ಮೈಸೂರು ಅರಮನೆಯಲ್ಲಿ ಲೈಟಿಂಗ್‌ ವಿನ್ಯಾಸ ಮಾಡುವವರನ್ನು ಕರೆಸಲಾಗಿದೆ ಎಂದು ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಅಧ್ಯಕ್ಷ ಕೆ.ಸತೀಶ್‌ ಮಾಹಿತಿ ನೀಡಿದ್ದಾರೆ.

ಕರಗ ಉತ್ಸವಕ್ಕೆ 40 ಲಕ್ಷ ಮುಂಗಡ ಅನುದಾನ: ತುಷಾರ್‌ ಗಿರಿನಾಥ್‌

ಕರಗ ಉತ್ಸವ ಹಿನ್ನಲೆ, ಮದ್ಯ ನಿಷೇಧ: ಶ್ರೀ ಧರ್ಮರಾಯಸ್ವಾಮಿ ಕರಗ ಉತ್ಸವ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ನಾಲ್ಕು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ 12 ರಿಂದ ಶುಕ್ರವಾರ ಬೆಳಗ್ಗೆ 10 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಆದೇಶಿಸಿದ್ದಾರೆ. ಕರಗ ಉತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ. ಏ.6 ರಿಂದ ಮಧ್ಯಾಹ್ನ 12 ಗಂಟೆಯಿಂದ ಏ.7 ಗಂಟೆವರೆಗೆ 10 ಗಂಟೆಗೆವರೆಗೆ ಹಲಸೂರು ಗೇಟ್‌, ಎಸ್‌.ಜೆ.ಪಾರ್ಕ್, ಎಸ್‌.ಆರ್‌.ನಗರ ಹಾಗೂ ವಿಲ್ಸನ್‌ ಗಾರ್ಡನ್‌ ಠಾಣಾ ವ್ಯಾಪ್ತಿಯ ಬಾರ್‌ಗಳು, ವೈನ್ಸ್‌ ಷಾಪ್‌ಗಳು ಹಾಗೂ ಪಬ್‌ಗಳು ಸೇರಿದಂತೆ ಎಲ್ಲ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳಲ್ಲಿ ವಹಿವಾಟು ನಿರ್ಬಂಧಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

click me!