ಚಂದ್ರಯಾನ-3 ಯಶಸ್ವಿ ಆಗಲಿದೆ, ದಕ್ಷಿಣ ಭಾರತ ಸಮೃದ್ಧಿಯಾಗಲಿದೆ: ಕೋಡಿಮಠ ಶ್ರೀಗಳಿಂದ ಭವಿಷ್ಯ

By Sathish Kumar KH  |  First Published Aug 20, 2023, 11:33 AM IST

ಭಾರತದಲ್ಲಿ ಜಲಪ್ರಳಯವಾದರೂ, ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ. ಇನ್ನು ಚಂದ್ರಯಾನ-3 ಯಶಸ್ವಿಯಾಗಲಿದ್ದು, ದೇಶಕ್ಕೆ ಒಳಿತಾಗಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.


ಬೆಳಗಾವಿ (ಆ.20): ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ಆದರೆ, ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ, ಇನ್ನು ಚಂದ್ರಯಾನ-3 ಯಶಸ್ವಿಯಾಗಲಿದ್ದು, ದೇಶಕ್ಕೆ ಒಳಿತಾಗಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಸಂತಸದ ಹಾಗೂ ಆಘಾತಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ. ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಿದೆ. ಆದರೆ, ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟಗಳ ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು. ಇನ್ನು ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದರು. 

Tap to resize

Latest Videos

ಡಿಆರ್‌ಡಿಒ ಸಿದ್ಧಪಡಿಸಿದ್ದ ಚಾಲಕ ರಹಿತ ತಪಸ್‌ ವಿಮಾನ ರೈತರ ಜಮೀನಿನಲ್ಲಿ ಪತನ

ವಿಪರೀತ ಮಳೆಯಿಂದ ಜಲಪ್ರಳಯ: ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸಲಿವೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ. ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು ಎಂದು ಹೇಳಿದರು. 

ಪ್ರಕೃತಿಯಿಂದ ಹೆಚ್ಚಿನ ಸಾವು ನೋವು: ಪ್ರಾಕೃತಿಕ ದೋಷದಿಂದಲೇ ಸಾವುನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗಿದೆ. ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೆ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ಮೇ ಉಣ್ಣುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ. ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ‌ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗ್ತಿವೆ ಎಂದು ನುಡಿದರು.

click me!