ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಧಾರ್ಮಿಕ ವಿಧಿವಿಧಾನಗಳ ಮೂಲಕ ವಿದ್ಯುಕ್ತವಾಗಿ ಆದಿಚುಂಚನ ಗಿರಿ ಮಠದ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.25ಕ್ಕೆ ಬಾಗಿಲು ಮುದ್ರೆ ತೆರೆಯಲಾಯಿತು.
ಹಾಸನ (ನ.03): ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಧಾರ್ಮಿಕ ವಿಧಿವಿಧಾನಗಳ ಮೂಲಕ ವಿದ್ಯುಕ್ತವಾಗಿ ಆದಿಚುಂಚನ ಗಿರಿ ಮಠದ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.25ಕ್ಕೆ ಬಾಗಿಲು ಮುದ್ರೆ ತೆರೆಯಲಾಯಿತು. ಸಂಪ್ರದಾಯದಂತೆ ತಳವಾರ ವಂಶದ ನರಸಿಂಹರಾಜ್ ಅರಸ್ ಅವರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆರೆಯಲು ಅನುವು ಮಾಡಿಕೊಟ್ಟರು.
ಬೆಳಿಗ್ಗೆ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತು. ನ.2 ರಿಂದ 15ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ 14 ದಿನ ಗಳಲ್ಲಿ 12 ದಿನಗಳ ಕಾಲ ಮಾತ್ರ ಹಾಸನಾಂಬೆ ದೇವಿ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ದಿನದ 24 ಗಂಟೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನ ಕ್ಕಾಗಿ ಭಕ್ತಸಾಗರ ಹರಿದು ಬರಲಿದೆ.
ಎಚ್ಚರ.. ಅನುಮತಿ ಇಲ್ಲದೆ ರಸ್ತೆ ಅಗೆದರೆ ದಂಡ: BBMP ಖಡಕ್ ಸೂಚನೆ
ಪ್ರತೀತಿ: ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಲಭಿಸಲಿದ್ದು, ಇಲ್ಲಿ ದೇವಾಲಯದ ಬಾಗಿಲು ಹಾಕುವಾಗ ಹಚ್ಚಿಟ್ಟ ದೀಪ ಮುಂದಿನ ವರ್ಷ ಬಾಗಿಲು ತೆರೆದಾಗ ದೀಪ ಬೆಳಗುತ್ತಲೇ ಇರುತ್ತದೆ. ದೇವರಿಗೆ ಇಟ್ಟ ನೈವೇದ್ಯ ಒಂದು ವರ್ಷದ ನಂತರವೂ ಉತ್ತಮವಾಗಿರುತ್ತದೆ ಎಂಬ ನಂಬಿಕೆಯಿದೆ. ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ ೧.೩೦ರವರೆಗೆ ಹಾಗೂ ಮಧ್ಯಾಹ್ನ ೩ ರಿಂದ ರಾತ್ರಿ ೨ ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕಾಗಿ ಒಬ್ಬರಿಗೆ 300 ಹಾಗೂ 1000 ರು.ಗಳ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ.
ದೇವಿಯ ಸುಗಮ ದರ್ಶನಕ್ಕೆ ೧೨೦೦ ಸಿಬ್ಬಂದಿಯೊಂದಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲಾಡಳಿತ ಭಕ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯದ ಸೂಕ್ತ ವ್ಯವಸ್ಥೆ ಕಲ್ಪಿಸಿದೆ. ಇನ್ನು, ದರ್ಶನೋತ್ಸವಕ್ಕೆ ಚಾಲನೆ ವೇಳೆ ಜಿಲ್ಲಾ ಉಸ್ತು ವಾರಿ ಕೆ.ಎನ್.ರಾಜಣ್ಣ ,ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಹಾಸನಾಂಬ ದೇವಸ್ಥಾನ ಆಡಳಿತಾಧಿಕಾರಿ ಮಾರುತಿ, ಎಸ್ಪಿ ಮೊಹಮ್ಮದ್ ಸುಜಿತಾ ಸೇರಿ ಗಣ್ಯರು, ಅಧಿಕಾರಿಗಳು, ಇನ್ನಿತರರಿದ್ದರು.
ಕಿರುಕುಳ ಕೊಟ್ಟ ಯುವಕನ ಕಚ್ಚಿ ಕೊಂದ ನಾಗರಹಾವು: ಸತ್ತವನ ಮೊಬೈಲ್‌ನಲ್ಲಿತ್ತು ಬೆಚ್ಚಿಬೀಳಿಸುವ ದೃಶ್ಯ!
ದರ್ಶನ ಭಾಗ್ಯ ಕಲ್ಪಿಸಿದ ಹಾಸನಾಂಬೆ: ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಗುರುವಾರ ಸರಿಸುಮಾರು 12.25ಕ್ಕೆ ಬಾಗಿಲು ತೆರೆಯಲಾಯಿತು. ನ.೨ರಿಂದ ೧೫ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ ೧೪ ದಿನಗಳಲ್ಲಿ 12 ದಿನಗಳ ಕಾಲ ಮಾತ್ರ ಹಾಸನಾಂಬೆ ದೇವಿ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ದಿನದ ೨೪ ಗಂಟೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ ೧೨-೨೫ಕ್ಕೆ ಅರಸು ವಂಶಸ್ಥರ ಬಾಳೆಕಂದು ಕಡಿದ ನಂತರ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತಸಾಗರ ಹರಿದು ಬರಲಿದೆ.