Chikkamagaluru: ಶ್ರೀ ದೇವೀರಮ್ಮ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

By Govindaraj S  |  First Published Oct 13, 2022, 7:22 PM IST

ಪ್ರಕೃತಿಯ ರುದ್ರ ರಮಣೀಯ ಪರಿಸರವನ್ನು ತನ್ನ ಒಡಲೊಳಗೆ ಹುದುಗಿಸಿಕೊಂಡಿರುವ ಚಂದ್ರದ್ರೋಣ ಪರ್ವತ ಗಿರಿ ಶ್ರೇಣಿಯ ಮಕುಟ ಪ್ರಾಯವಾದ ಚಿಕ್ಕಮಗಳೂರು ಜಿಲ್ಲೆಯ ದೇವಿರಮ್ಮನ ಬೆಟ್ಟದಲ್ಲಿ ನೆಲೆಸಿರುವ ಶ್ರೀ ದೇವಿರಮ್ಮನವರ ದೀಪೋತ್ಸವ ಕಾರ್ಯಕ್ರಮ  ಅಕ್ಟೋಬರ್ 23ರಿಂದ 27ರವರೆಗೆ  ವಿಜೃಂಭಣೆಯಿಂದ ಜರುಗಲಿದೆ. 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಅ.13): ಪ್ರಕೃತಿಯ ರುದ್ರ ರಮಣೀಯ ಪರಿಸರವನ್ನು ತನ್ನ ಒಡಲೊಳಗೆ ಹುದುಗಿಸಿಕೊಂಡಿರುವ ಚಂದ್ರದ್ರೋಣ ಪರ್ವತ ಗಿರಿ ಶ್ರೇಣಿಯ ಮಕುಟ ಪ್ರಾಯವಾದ ಚಿಕ್ಕಮಗಳೂರು ಜಿಲ್ಲೆಯ ದೇವಿರಮ್ಮನ ಬೆಟ್ಟದಲ್ಲಿ ನೆಲೆಸಿರುವ ಶ್ರೀ ದೇವಿರಮ್ಮನವರ ದೀಪೋತ್ಸವ ಕಾರ್ಯಕ್ರಮ  ಅಕ್ಟೋಬರ್ 23ರಿಂದ 27ರವರೆಗೆ  ವಿಜೃಂಭಣೆಯಿಂದ ಜರುಗಲಿದೆ. ಪ್ರತಿವರ್ಷ ಲಕ್ಷಾಂತರ ಮಂದಿ ಚಾರಣಿಗರು ಆಗಮಿಸಿ ಗಿರಿಯನ್ನು ಹತ್ತಿ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಅರೆ ಕಳೆದ ಮೂರು  ವರ್ಷಗಳಿಂದ ಕೋವಿಡ್ ಸೋಂಕು ಹರಡುವ ಕಾರಣಕ್ಕೆ ಜಿಲ್ಲಾಡಳಿತ ಗಿರಿ ಹತ್ತುವುದನ್ನು ನಿರ್ಬಂಧಿಸಿತ್ತು. ಈ ಬಾರಿ ಕೋವಿಡ್ ಕಾರ್ಮೋಡ ಸರಿದು ಎಲ್ಲಾ ಹಬ್ಬ, ಹರಿದಿನಗಳ ಆಚರಣೆಗೆ ಮುಕ್ತ ಅವಕಾಶ ಕಲ್ಪಿಸಿರುವುದರಿಂದ ಈ ಬಾರಿ ದೇವಿರಮ್ಮನ ದೀಪೋತ್ಸವ ಇನ್ನಷ್ಟು ಕಳೆ ಕಟ್ಟಲಿದೆ.

Tap to resize

Latest Videos

80ರಿಂದ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ: ಚಿಕ್ಕಮಗಳೂರು ತಾಲ್ಲೂಕು ಬಿಂಡಿಗಾ ಗ್ರಾಮದ ಶ್ರೀ ದೇವೀರಮ್ಮನವರ ದೇವಾಲಯದ ದೀಪಾವಳಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಅಕ್ಟೋಬರ್ 23ರಿಂದ 27ರವರೆಗೆ ನಡೆಯಲಿದ್ದು, ಸುಮಾರು 80 ಸಾವಿರದಿಂದ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೆ.ಎನ್.ರಮೇಶ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ದೇವೀರಮ್ಮನವರ ದೇವಾಲಯದ ದೀಪಾವಳಿ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿಮ್ಮ ದನಕರುಗಳು ಚರ್ಮಗಂಟುರೋಗದಿಂದ ಬಳುತ್ತಿವೆಯೇ? ಇಲ್ಲಿದೆ ಪರಿಹಾರ

ಅಕ್ಟೋಬರ್ 23ರಂದು ದೇವಾಲಯಕ್ಕೆ 400 ವಾಹನಗಳು ಮಾತ್ರ ಸಂಚರಿಸಲು ಅವಕಾಶ ನೀಡಲಾಗುತ್ತದೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 9 ಗಂಟೆಯವರೆಗೆ ಮಾತ್ರ ವಾಹನ ಸಂಚರಿಸಲು ಅವಕಾಶ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ಜಾತ್ರಾ ಮಹೋತ್ಸವದ ಪ್ರಯುಕ್ತ ಕೆಎಸ್ಆರ್ಟಿಸಿ ವತಿಯಿಂದ ದೇವಾಲಯಕ್ಕೆ ಭಕ್ತಾದಿಗಳು ತೆರಳಲು 125 ಬಸ್ಗಳ ವ್ಯವಸ್ಥೆ ಮಾಡಬೇಕು. ಮೆಸ್ಕಾಂ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಮತ್ತು ಆರೋಗ್ಯ ಇಲಾಖೆ ಸುರಕ್ಷತಾ ಸಿದ್ಧತೆ ಮತ್ತು ಕ್ರಮಗಳನ್ನು ಕೈಗೊಳ್ಳಲು ಹಾಗೂ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಟ್ರಾಫಿಕ್ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆ ಮತ್ತು ಮಲ್ಲೇನಹಳ್ಳಿ ಗ್ರಾ.ಪಂಚಾಯತ್ ದೇವಾಲಯ ಮತ್ತು ಬೆಟ್ಟದ ಸುತ್ತಮುತ್ತ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದ ಅವರು, ಸ್ವಚ್ಛತಾ ಕಾರ್ಯಗಳಿಗೆ ನಗರಸಭೆಯ ವತಿಯಿಂದ 10 ಸ್ವಚ್ಛತಾ ವಾಹನಗಳನ್ನು ಒದಗಿಸುವಂತೆ ಸೂಚಿಸಿದರು.ಬೆಟ್ಟದ ಮೂರು ಭಾಗಗಳಲ್ಲಿ ಹಾಗೂ ಆಸ್ಪತ್ರೆಯಲ್ಲಿ ಆಂಬುಲೆನ್ಸ್, ತಜ್ಞ ವೈದ್ಯರು ಮತ್ತು ಹೆಚ್ಚುವರಿ ವೈದ್ಯರು ಹಾಗೂ ಇತರ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು. ದೇವಾಲಯಕ್ಕೆ ಹೋಗುವ ರಸ್ತೆಗಳನ್ನು ಅತೀ ಶೀಘ್ರವಾಗಿ ದುರಸ್ತಿಗೊಳಿಸುವಂತೆ  ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಚಿಕ್ಕಮಗಳೂರು ನಗರಸಭೆಯಿಂದ ಅಂಗಡಿಗಳ ಮೇಲೆ ದಿಢೀರ್ ದಾಳಿ, 100 ಕೆಜಿಗೂ ಅಧಿಕ ಪ್ಲಾಸ್ಟಿಕ್ ವಶಕ್ಕೆ

ಕಾರ್ಯಕ್ರಮದ ವಿವರ: ಅಕ್ಟೋಬರ್ 24 ರಂದು ಬೆಳಿಗ್ಗೆ ಶ್ರೀ ದೇವೀರಮ್ಮನ ಬೆಟ್ಟದಲ್ಲಿ ಅಭಿಷೇಕ ನಂತರ ಪೂಜಾ ಪ್ರಾರಂಭ ರಾತ್ರಿ 7 ಘಂಟೆಗೆ ದೀಪೋತ್ಸವ ನಡೆಯಲಿದೆ. ಅಕ್ಟೋಬರ್ 25ರಂದು ಬೆಳಿಗ್ಗೆ 8.45 ಘಂಟೆಗೆ ಶ್ರೀ ದೇವಿರಮ್ಮನ ದೇವಸ್ಥಾನದಲ್ಲಿ ಶ್ರೀ ದೇವಿಯವರಿಗೆ ಉಡುಗೆ ಪೂಜೆ, ಸಂಜೆ ಬೆಣ್ಣೆ ಬಟ್ಟೆ ಸುಡುವುದು, ಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ಅಕ್ಟೋಬರ್ 26ರಂದು ರಾತ್ರಿ ದೇವಿ ಸನ್ನಿಧಿಯಲ್ಲಿ ಶ್ರೀ ಮಹಾಗಣಪತಿ ಪೂಜೆ, ಪುನ್ಯಾಹ, ಅಗ್ನಿಕುಂಡ ಪೂಜೆ, ಕಳಸ ಸ್ಥಾಪನೆ, ಕುಂಕುಮಾರ್ಚನೆ ಸೇರಿದಂತೆ ಹಲವು ಪೂಜಾ ಕೈಂಕರ್ಯಗಳು ನಡೆಯಲಿದೆ. ಅಕ್ಟೋಬರ್ 27 ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥ , ಪ್ರಸಾದ ವಿತರಣೆ ನಡೆಯಲಿದೆ.

click me!