
ಭಾರತವು (India) ವಿವಿಧ ಧರ್ಮಗಳು, ಸಂಸ್ಕೃತಿಗಳು, ಸಂಪ್ರದಾಯಗಳು, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶವಾಗಿದೆ. ಈ ಕಾರಣದಿಂದಾಗಿ, ದೇಶವು ವರ್ಷವಿಡೀ ಹಲವಾರು ಹಬ್ಬ (Festival)ಗಳನ್ನು ಆಚರಿಸುತ್ತದೆ, ಈದ್-ಉಲ್-ಫಿತರ್ (Eid-ul-Fitr) ಅವುಗಳಲ್ಲಿ ಒಂದಾಗಿದೆ. ಮುಸ್ಲಿಮರ ಪವಿತ್ರ ಹಾಗೂ ದೊಡ್ಡ ಹಬ್ಬಗಳಲ್ಲಿ ರಂಜಾನ್ ಮೊದಲನೆಯದು. ಈ ಹಬ್ಬವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಪ್ರವಾದಿ ಮುಹಮ್ಮದ್ ಈ ತಿಂಗಳು ಪವಿತ್ರ ಕುರಾನ್‌ನ ಬಹಿರಂಗ ಪಡಿಸಿದರು ಎಂದು ನಂಬಲಾಗಿದೆ.
ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದು ರಂಜಾನ್‌ನ ತಿಂಗಳ ಅವಧಿಯ ಮುಂಜಾನೆಯಿಂದ ಸೂರ್ಯಾಸ್ತದ ಉಪವಾಸದ ಅಂತ್ಯವನ್ನು ಸೂಚಿಸುತ್ತದೆ. ಇದು ಇಸ್ಲಾಮಿಕ್ ಕ್ಯಾಲೆಂಡರ್‌ನಲ್ಲಿ ಶವ್ವಾಲ್‌ನ ಮೊದಲ ದಿನದಂದು ಬರುತ್ತದೆ. ಈ ದಿನವನ್ನು ಪ್ರಪಂಚದಾದ್ಯಂತದ ವಿವಿಧ ಭಾಷೆಗಳು ಮತ್ತು ದೇಶಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಕರೆಯಲಾಗುತ್ತದೆ. ದಿನವನ್ನು ಲೆಸ್ಸರ್ ಈದ್ ಅಥವಾ ಸರಳವಾಗಿ ಈದ್ ಎಂದೂ ಕರೆಯುತ್ತಾರೆ.ರಂಜಾನ್‌ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.
Eid Mubarak 2022: ಈದ್‌ಗೆ ವಾಟ್ಸಾಪ್, ಫೇಸ್‌ಬುಕ್, ಸ್ಟೇಟಸ್‌ಗಳಲ್ಲಿ ಈ ರೀತಿ ಶುಭಾಶಯ ಹೇಳಿ..
ಈದ್-ಉಲ್-ಫಿತರ್ ಇತಿಹಾಸ
ಈದ್-ಉಲ್-ಫಿತರ್ ಇಸ್ಲಾಮಿಕ್ ಪ್ರವಾದಿ ಮುಹಮ್ಮದ್ ಅವರಿಂದ ಹುಟ್ಟಿಕೊಂಡಿತು ಎನ್ನಲಾಗಿದೆ. ಕೆಲವು ಸಂಪ್ರದಾಯಗಳ ಪ್ರಕಾರ, ಮೆಕ್ಕಾದಿಂದ ಮುಹಮ್ಮದ್ ವಲಸೆ ಬಂದ ನಂತರ ಈ ಹಬ್ಬಗಳನ್ನು ಮದೀನಾದಲ್ಲಿ ಪ್ರಾರಂಭಿಸಲಾಯಿತು. ಇಸ್ಲಾಮಿಕ್ ಪ್ರವಾದಿಯ ಪ್ರಸಿದ್ಧ ಒಡನಾಡಿಯಾದ ಅನಸ್, ಮುಹಮ್ಮದ್ ಮದೀನಾಕ್ಕೆ ಆಗಮಿಸಿದಾಗ, ಜನರು ಎರಡು ನಿರ್ದಿಷ್ಟ ದಿನಗಳನ್ನು ಆಚರಿಸುವುದನ್ನು ಕಂಡುಕೊಂಡರು. ಈದ್-ಉಲ್-ಫಿತರ್ ಮತ್ತು ಈದ್-ಅಲ್-ಅಧಾ. ಇನ್ನು ಈ ಹಬ್ಬಕ್ಕೆ ಅದರದೇ ಆದ ಮಹತ್ವ ಇದೆ. ಈ ತಿಂಗಳಲ್ಲಿ ಆಚರಿಸುವ ಆಚರಣೆಗಳು ಮಹತ್ವದ ವೈಜ್ಞಾನಿಕ ಕಾರಣಗಳನ್ನು ಒಳಗೊಂಡಿವೆ.
ಈದ್-ಉಲ್-ಫಿತರ್ ಯಾವಾಗ ಆಚರಿಸುತ್ತಾರೆ ?
ಕೆಲವೊಂದೆಡೆ, ಈದ್-ಉಲ್-ಫಿತರ್ ಮೇ 2ರಂದು, ಇನ್ನು ಕೆಲವೆಡೆ ಮೇ.3ರಂದು ಆಚರಿಸಲಾಗುತ್ತಿದೆ. ಚಂದ್ರನ ವೀಕ್ಷಣೆಗೆ ಅನುಗುಣವಾಗಿ ಹಬ್ಬದ ದಿನಾಂಕ ಬದಲಾಗುತ್ತದೆ. ಈದ್-ಉಲ್-ಫಿತರ್ ರಂಜಾನ್ ತಿಂಗಳ ಅಂತ್ಯ ಮತ್ತು ಶವ್ವಾಲ್ ತಿಂಗಳ ಆರಂಭದ ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸದ ಅಂತ್ಯವನ್ನು ಸೂಚಿಸುತ್ತದೆ.
ಪ್ರತಿ ವರ್ಷ Eid al-Fitr ದಿನಾಂಕ ಬದಲಾಗುವುದೇಕೆ?
ಈದ್-ಉಲ್-ಫಿತರ್ ಆಚರಣೆ ಹೇಗಿರುತ್ತದೆ ?
ರಂಜಾನ್ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ.
ಈದ್ ಹಬ್ಬವು ಚಂದ್ರನನ್ನು ನೋಡಿದ ನಂತರವೇ ಪ್ರಾರಂಭವಾಗುತ್ತದೆ. ಈದ್ ಉಲ್-ಫಿತರ್ ಉಪವಾಸದ ಅಂತ್ಯವನ್ನು ಸೂಚಿಸುತ್ತದೆ. ಪ್ರವಾದಿ ಮೊಹಮ್ಮದ್ ಅವರ ಬೋಧನೆಗಳ ದಾಖಲೆಯಾದ ಸುನ್ನತ್ ಅನ್ನು ಅನುಸರಿಸಿ, ಹಬ್ಬದಂದು ಮುಸ್ಲಿಮರು ಮುಂಜಾನೆ ಬೇಗನೆ ಎದ್ದು ತಮ್ಮ ದೈನಂದಿನ ಪ್ರಾರ್ಥನೆ ಸಲ್ಲಿಸಿ, ಸ್ನಾನ ಮಾಡಿ ಹೊಸ ಬಟ್ಟೆ ತೊಟ್ಟು ಇತ್ತರ್ (ಸುಗಂಧ ದ್ರವ್ಯ) ಧರಿಸುತ್ತಾರೆ. ಬಳಿಕ ಹಬ್ಬದ ಪ್ರಾರ್ಥನೆಗೆ ಹೋಗುವ ಮುನ್ನ ಮನೆಯಲ್ಲಿ ತಯಾರಿಸಿದ ಸಿಹಿ ತಿಂಡಿಯನ್ನು ಸೇವಿಸುತ್ತಾರೆ. ಹುಡುಗರು, ಯುವಕರು ಸೇರಿದಂತೆ ಈದ್ಗ್ ಬಳಿ ಎಲ್ಲಾ ಮುಸ್ಲಿಮರು ಒಟ್ಟಿಗೆ ಸೇರಿ ಹಬ್ಬದ ವಿಶೇಷ ಸಭೆಯಲ್ಲಿ ಪ್ರಾರ್ಥನೆಗಳನ್ನು ಮಾಡುತ್ತಾರೆ. ಆದ್ರೆ ಹೆಣ್ಣು ಮಕ್ಕಳು, ಮಹಿಳೆಯರು ಮನೆಯಲ್ಲೇ ಹಬ್ಬನ ನಮಾಜ್ ಮಾಡುತ್ತಾರೆ.