ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ: ಬೆಟ್ಟದ ತುಂಬ ಝೇಂಕರಿಸಿದ ಉಘೇ ಉಘೇ ಮಾದಪ್ಪನ ಜಯಕಾರ!

By Girish GoudarFirst Published Nov 2, 2024, 4:27 PM IST
Highlights

ದೀಪಾವಳಿ  ಜಾತ್ರಾ ಮಹೋತ್ಸವ ಹಿನ್ನಲೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವವು ಲಕ್ಷಾಂತರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ರಥೋತ್ಸೋವಕ್ಕೂ ಮುನ್ನ ಬೇಡಗಂಪಣ ಸಂಪ್ರದಾಯದಂತೆ ರಥಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ ಬಳಿಕ ಸಮುದಾಯದ ಪುಟ್ಟ ಬಾಲಕಿಯರು ರಥಕ್ಕೆ ಬೆಲ್ಲದ ಆರತಿ ಬೆಳಗಿದರು. 

ವರದಿ- ಪುಟ್ಟರಾಜು ಆರ್. ಸಿ. ಏಷಿಯಾನೆಟ್ ಸುವರ್ಣ  ನ್ಯೂಸ್, ಚಾಮರಾಜನಗರ 

ಚಾಮರಾಜನಗರ(ನ.02): ದೀಪಾವಳಿ ವಿಶೇಷ ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವ ನೆರವೇರಿತು. ಲಕ್ಷಾಂತರ ಮಾದಪ್ಪನ ಭಕ್ತರು ತೇರಿನ ಮೇಲೆ ಬಾಳೆ ಹಣ್ಣು, ಜವನ ಎಸೆದು ತಮ್ಮ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸಿದ್ರು ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Latest Videos

ದೀಪಾವಳಿ  ಜಾತ್ರಾ ಮಹೋತ್ಸವ ಹಿನ್ನಲೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವವು ಲಕ್ಷಾಂತರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ರಥೋತ್ಸೋವಕ್ಕೂ ಮುನ್ನ ಬೇಡಗಂಪಣ ಸಂಪ್ರದಾಯದಂತೆ ರಥಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ ಬಳಿಕ ಸಮುದಾಯದ ಪುಟ್ಟ ಬಾಲಕಿಯರು ರಥಕ್ಕೆ ಬೆಲ್ಲದ ಆರತಿ ಬೆಳಗಿದರು. ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುಸ್ವಾಮಿ ನೇತೃತ್ವದಲ್ಲಿ ರಥ ಮುಂಭಾಗ ಬೂದುಗುಂಬಳ ಕಾಯಿಯನ್ನು ಒಡೆಯುವ ಮೂಲಕ ಬೆಳಗ್ಗೆ 9.00ಕ್ಕೆ ಮಹಾ ರಥೋತ್ಸವಕ್ಕೆ ಚಾಲನೆ ಸಿಕ್ಕಿತು.

ಚಾಮರಾಜನಗರ: ಮಾದಪ್ಪನ ಬೆಟ್ಟಕ್ಕೆ ಮದುವೆಗೆ ಹೆಣ್ಣು ಸಿಗಲಿ ಎಂದು ಬ್ರಹ್ಮಚಾರಿಗಳ ಪಾದಯಾತ್ರೆ!

ರಥೋತ್ಸವಕ್ಕೆ  ಚಾಲನೆ  ಸಿಕ್ಕ  ಬೆನ್ನಲ್ಲೆ  ನೆರೆದಿದ್ದ   ಭಕ್ತ  ಸಮೂಹ   ಉಘೇ ಮಾದಪ್ಪ 'ಉಘೇ ಮಾದಪ್ಪ, ಉಘೇ ಮಾಯ್ಕಾರ.. ಉಘೇ ಉಘೇ..' ಎಂಬ ಜಯಘೋಷಗಳ ಮುಖೇನಾ ರಥವನ್ನು ಎಳೆದರು. ಹೂವು, ಬಾಳೆ ಕಂದು, ಬಣ್ಣ ಬಣ್ಣಗಳ ವಸ್ತ್ರಗಳಿಂದ ಅಲಂಕೃತಗೊಂಡಿದ್ದ ರಥವು ದೇವಾಲಯದ ಸುತ್ತ ಒಂದು ಸುತ್ತು ಸಾಗಿತು. ರಥ ಸಾಗಿದ ಬಳಿಕ ಪಲ್ಲಕ್ಕಿ ಉತ್ಸವ ಜರುಗಿತು. ನವ ವಧುವರರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ರಥಕ್ಕೆ ಹಣ್ಣು ಜವನ, ಧವಸ ಧಾನ್ಯ, ನಾಣ್ಯಗಳನ್ನು ಎಸೆದು ಹರಕೆ ತೀರಿಸಿದರು. ರಥ ಸಾಗುವ ಹಾದಿಯಲ್ಲಿ ವಾದ್ಯಮೇಳ, ಛತ್ರಿ ಚಾಮರಗಳು, ವೀರಗಾಸೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಸಾಗಿ ಉತ್ಸವದ ಮೆರುಗು ಹೆಚ್ಚಿಸಿದವು.

ಒಟ್ಟಾರೆ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಇರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರ ದಂಡೆ ಈ ಬಾರಿ ಹೆಚ್ಚಾಗಿತ್ತು. ಜೊತೆಗೆ  ರಾಜ್ಯದ ನಾನ ಭಾಗದಿಂದ ಪಾದಯಾತ್ರೆ ಮೂಲಕ ಬಂದಿದ್ದ ಭಕ್ತಗಣ ಮಾದಪ್ಪನ ಕೃಪೆಗೆ ಪಾತ್ರರಾದ್ರು.

click me!