ಈ ಬಾರಿ ಹಾಸನಾಂಬ ದರ್ಶನ ಪಡೆಯಲು ದಿನದ 24 ಗಂಟೆಯೂ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ತಡೆ ಇಲ್ಲದೆ ಸುಲಲಿತವಾಗಿ ಭಕ್ತರು ದರ್ಶನ ಪಡೆಯಬಹುದಾಗಿದೆ. ಮೊದಲ ದಿನವಾದ ಗುರುವಾರ ಸಾರ್ವಜನಿಕರಿಗೆ ದೇವಾಲಯದ ಒಳ ಪ್ರವೇಶ ಇರಲಿಲ್ಲ. ಆದರೂ ಭಕ್ತರು ಹಾಸನಾಂಬ ದೇವಿಯ ದರ್ಶನ ಮಾಡಲು ಮುಗಿಬಿದ್ದಿದ್ದರು. ಇಂದಿನಿಂದ ಸಾರ್ವಜನಿಕರಿಗೆ ಪ್ರವೇಶ ಅವಕಾಶ ಇರಲಿದೆ.
ಹಾಸನ(ಅ.25): ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲನ್ನು ಈ ವರ್ಷದ ಪಂಚಾಂಗದ ಪ್ರಕಾರ ನಿನ್ನೆ(ಗುರುವಾರ) ಮಧ್ಯಾಹ್ನ 12:15ಕ್ಕೆ ಗರ್ಭಗುಡಿ ಮುಂದೆ ಬಾಳೆ ಕಂಬ ಕಡಿಯುವ ಮೂಲಕ ತೆರೆಯಲಾಯಿತು. ದೇವಿಯ ದರ್ಶನಕ್ಕೆ ನ.3ರವರೆಗೆ ಅವಕಾಶ ನೀಡಲಾಗಿದೆ.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಸಂಸದ ಶ್ರೇಯಸ್ ಎಂ. ಪಟೇಲ್ ಹಾಗೂ ಇತರ ಗಣ್ಯರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ರಾಜವಂಶಸ್ಥ ನರಸಿಂಹರಾಜ ಅರಸ್ ಗರ್ಭಗುಡಿ ಮುಂದಿನ ಬಾಳೆ ಕಂದನ್ನು ಕಡಿಯುವ ಮೂಲಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು.