ಉತ್ತರಕನ್ನಡ ಜಿಲ್ಲೆಯ ಶಿರಸಿಯ ಐತಿಹಾಸಿಕ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯಿಸಿದೆ.
ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯ ಐತಿಹಾಸಿಕ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯಿಸಿದೆ.
ಅರೆಬರೆ ಬಟ್ಟೆ ಧರಿಸಿ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಬಾರದು. ಇದರಿಂದ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುತ್ತದೆ. ಹಿಂದೂ ಸಂಸ್ಕ್ರತಿಯಂತೆ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಶಿರಸಿ ದೇವಸ್ಥಾನದ ಆಡಳಿತ ಮಂಡಳಿಗೆಹಿಂದೂ ಜನ ಜಾಗೃತಿ ಸಮಿತಿ ಮನವಿ ಸಲ್ಲಿಸಿದೆ.
ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಅದನ್ನು ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲೂ ಜಾರಿ ಮಾಡಬೇಕೆಂದು ಸಮಿತಿ ಪಟ್ಟು ಹಿಡಿದಿದೆ.