ಚಿಕ್ಕಮಗಳೂರು: ಸೀತಾಳಯ್ಯನಗಿರಿಯಲ್ಲಿ ಇತಿಹಾಸ ಪ್ರಸಿದ್ಧ ಮಲ್ಲಿಕಾರ್ಜುಸ್ವಾಮಿ ರಥೋತ್ಸವ

By Ravi Janekal  |  First Published Mar 26, 2024, 6:12 PM IST

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯ ತಪ್ಪಲ್ಲಿನಲ್ಲಿರುವ ಇತಿಹಾಸ ಪ್ರಸಿದ್ದ ಸೀತಾಳಯ್ಯನ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ನಡೆಯಿತು. ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ರಥೋತ್ಸವ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ರು. ಹೋಳಿ ಹಬ್ಬದ ಮುನ್ನ ದಿನ  ನಡೆಯುವ ರಥೋತ್ಸವಾಗಿದೆ. 


ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು (ಮಾ.26): ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯ ತಪ್ಪಲ್ಲಿನಲ್ಲಿರುವ ಇತಿಹಾಸ ಪ್ರಸಿದ್ದ ಸೀತಾಳಯ್ಯನ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ನಡೆಯಿತು. ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ರಥೋತ್ಸವ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ರು. ಹೋಳಿ ಹಬ್ಬದ ಮುನ್ನ ದಿನ  ನಡೆಯುವ ರಥೋತ್ಸವಾಗಿದೆ. 

Latest Videos

undefined

ರಥಕ್ಕೆ ಬಾಳೆ ಹಣ್ಣು ಹೂವುಗಳನ್ನು ಎಸೆದು ಭಕ್ತಿ ಸಮರ್ಪಣೆ: 

ರುದ್ರರಮಣೀಯ ನಿಸರ್ಗದ ನಡುವೆ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಇಂದು  ನಡೆದ  ಸೀತಾಳಮಲ್ಲಿಕಾರ್ಜುನ ಸ್ವಾಮಿ ರಥೋತ್ಸವದಲ್ಲಿ ಉಭಯ ನಾಡಿನ ವಿವಿಧ ಗ್ರಾಮದ ಸಹಸ್ರಾರು ಭಕ್ತರು ಪಾಲ್ಗೊಂಡು ಬಾಳೆಹಣ್ಣು, ಪುರಿ ಉಗ್ಗಿ ಸಂಭ್ರಮಿಸಿದರು.ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಸೀತಾಳಮಲ್ಲಿ ಕಾರ್ಜುನ ಸ್ವಾಮಿ ದೇವಾಲಯದಲ್ಲಿ ಅರ್ಚಕರು ಬೆಳಗ್ಗೆ ದೇವರಿಗೆ ಪುಷ್ಪಾಲಂಕಾರ ನೆರವೇರಿಸಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಾಡಿನ ಅರ್ಚಕರುಗಳು ಮುಳ್ಳಪ್ಪಕಟ್ಟೆ, ಹಾಲುಮಲ್ಲಪ್ಪ, ಚೆಂಗರಮಲ್ಲಪ್ಪ ಕಟ್ಟೆ ಸೇರಿದಂತೆ ರಥದ ಸುತ್ತ ಬಿನ್ನ ಹಾಕಿ ನಾಡಿನ ಪ್ರಮುಖರನ್ನು ಆಹ್ವಾನಿಸಿದ ನಂತರ ರಥ ಎಳೆಯಲಾಯಿತು. ವಿವಿಧ ಗ್ರಾಮದ ಹತ್ತಾರು ದೇವರ ಅಡ್ಡೆಗಳನ್ನು ಹೊತ್ತ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಪುರಿ, ಬಾಳೆಹಣ್ಣು , ಹೂವು ಎಸೆದು ಭಕ್ತಿ ಸಮರ್ಪಿಸಿದರು.

 

ದತ್ತಪೀಠ ಪರಿಸರದಲ್ಲಿ ಭಾರೀ ಬೆಂಕಿ; ಕುರುಚಲು , ಹಲ್ಲುಗಾವಲು ಸುಟ್ಟು ಕರಕಲು!

ರಾಜ್ಯದ ಅತ್ಯಂತ ಎತ್ತರವಾದ ಪ್ರದೇಶದ ತಪ್ಪಲ್ಲಿನಲ್ಲಿ ರಥೋತ್ಸವ: 

ಬೆಳಗ್ಗೆ ಗಳಿಗೆತೇರು ಎಳೆದ ನಂತರ ಮಧ್ಯಾಹ್ನ ದೊಡ್ಡತೇರು ಎಳೆಯಲಾಯಿತು. ನಾಡಿನ ಸಂಕೇತವಾಗಿ ಕಚ್ಚೆಪಂಚೆ, ಕೋಟು, ಪೇಟ ತೊಟ್ಟು ವ್ರತಾಚರಣೆ ಯೊಂದಿಗೆ ಶಿಸ್ತಿನಿಂದ ಪಾಲ್ಗೊಂಡಿದ್ದ ಉಭಯ ನಾಡಿನಭಕ್ತರು ತಮಟೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ್ದು ಕಂಡು ಬಂತು. ಜಾತ್ರಾ ಮಹೋತ್ಸವದ ಅಂಗವಾಗಿ ಸುಮುತ್ತಲ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಮಧ್ಯಾಹ್ನ ಉರಿ ಬಿಸಿಲಿನಲ್ಲೂ ರಥೋತ್ಸವದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು .ರಾಜ್ಯದ ಅತ್ಯಂತ ಎತ್ತರವಾದ ಪ್ರದೇಶವಾದ ಮುಳ್ಳಯ್ಯನಗಿರಿಯ ತಪ್ಪಲ್ಲಿನಲ್ಲಿ ಸೀತಾಳಯ್ಯನ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ನಡೆಯುತ್ತಿರುವುದು ವಿಶೇಷವಾಗಿದೆ.

click me!