ಅಯೋಧ್ಯೆಯಲ್ಲಿ 25000 ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ ನಿರ್ಮಾಣ: ಪೇಜಾವರ ಶ್ರೀ

By Suvarna News  |  First Published Mar 21, 2023, 4:31 PM IST

ಅಯೋಧ್ಯೆ  ಮಂದಿರ ನಿರ್ಮಾಣ ಕಾರ್ಯಕ್ಕೆ ವೇಗ 
ಪೇಜಾವರ ಮಠಾಧೀಶರಿಂದ ಕಾಮಗಾರಿ ಪರಿಶೀಲನೆ
ರಾಮ ಲಕ್ಷ್ಮಣ ಸೀತೆಯ ವಿಗ್ರಹಗಳ ನಿರ್ಮಾಣಕ್ಕೆ ಶಿಲೆ ಪರಿಶೀಲನೆ


ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಗತಿ ಪರಿಶೀಲಿಸಿದರು .

ಈ ಸಂದರ್ಭದಲ್ಲಿ ಅಲ್ಲಿನ ಬೆಳವಣಿಗೆಗಳ‌ ಕುರಿತು ಮಾಹಿತಿ ನೀಡಿದ ಶ್ರೀಗಳು , 'ಮಂದಿರ ನಿರ್ಮಾಣ ಕಾರ್ಯ ವೇಗದಿಂದ ನಡೆಯುತ್ತಿದ್ದು ಪ್ರಸ್ತುತ ಗರ್ಭಗುಡಿಯ ಉಭಾಪೀಠದ ಮೇಲೆ ಸ್ತಂಭಗಳ ಜೋಡಣೆ ಮತ್ತು ಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ  ಮೇಲ್ಛಾವಣಿಯ ಶಿಲಾ ಬೀಮ್  ಮತ್ತು ಶಿಲಾ ಹೊದಿಗೆಗಳನ್ನು ಅಳವಡಿಸುವ ಕಾರ್ಯ ಆರಂಭವಾಗಲಿದೆ . ಮಂದಿರದ ಲೋಕಾರ್ಪಣೆಯ ವೇಳೆಗೆ ದೇಶಾದ್ಯಂತದಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ  25000 ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ' ಎಂದರು. 

Tap to resize

Latest Videos

undefined

ಅವಧಿಗೂ 3 ತಿಂಗಳು ಮೊದಲೇ ಅಯೋಧ್ಯೆಯ ಶ್ರೀರಾಮಮಂದಿರ ನಿರ್ಮಾಣ ಪೂರ್ಣ

ಶಿಲೆಗಳು ಪರಿಶೀಲನೆಯಲ್ಲಿ
'ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀ ರಾಮ ಲಕ್ಷ್ಮಣ ಸೀತೆಯ ವಿಗ್ರಹಗಳ ನಿರ್ಮಾಣಕ್ಕಾಗಿ ಕರ್ನಾಟಕದ ಹೆಗ್ಗಡೆ ದೇವನ‌ಕೋಟೆ , ಕಾರ್ಕಳ , ತಮಿಳುನಾಡಿನ ಮಹಾಬಲಿಪುರಂ , ರಾಜಸ್ಥಾನ  ಹಾಗೂ ನೇಪಾಳಗಳಿಂದ ಶಿಲೆಗಳನ್ನು ತರಲಾಗಿದ್ದು ಶಿಲ್ಪಿಗಳು ಅವುಗಳ ಪರಿಶೀಲನೆ ನಡೆಸಿ ಉತ್ತಮವಾದವುಗಳನ್ನು ಆಯ್ದುಕೊಂಡು ಪ್ರತಿಮೆಗಳನ್ನು ನಿರ್ಮಿಸುವರು' ಎಂದು ಶ್ರೀಗಳು ತಿಳಿಸಿದರು. 
ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್,  ವಿಹಿಂಪ ಮುಖಂಡ ಗೋಪಾಲ್ ಜೀ , ಶ್ರೀಗಳ ಆಪ್ತ ಕಾರ್ಯದರ್ಶಿ ಕೃಷ್ಣ ಭಟ್, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ  ಮಹೇಂದ್ರ ದುಬೆ ಉಪಸ್ಥಿತರಿದ್ದರು.

click me!