ಕಾಂಗ್ರೆಸ್ ಪೂರ್ಣಾವಧಿ ಅಧಿಕಾರ ನಡೆಸುತ್ತಾ?: ನಿಗೂಢ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

Published : Jul 01, 2023, 02:28 PM ISTUpdated : Jul 01, 2023, 02:37 PM IST
ಕಾಂಗ್ರೆಸ್ ಪೂರ್ಣಾವಧಿ ಅಧಿಕಾರ ನಡೆಸುತ್ತಾ?: ನಿಗೂಢ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಸಾರಾಂಶ

ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತೆ ಹಾಗೂ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ: ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತೆ ಹಾಗೂ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಒಂದು ಸರ್ಕಾರ ಬರುತ್ತೆ ಹಾಗೂ ಸ್ಥಿರ ಸರ್ಕಾರ ಇರುತ್ತೆ ಅಂತ ಹೇಳಿದ್ದೆ, ಅದು ನಿಜ ಆಗಿದೆ ಎಂದರು. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ, ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ ಎಂದು ತಿಳಿಸಿದರು. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿದ್ದು, ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ. ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆ ನಡೆಯುತ್ತೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು ಎಂದರು.

ಬಡವರಿಗೆ, ಪದವೀಧರರಿಗೆ, ಮನೆ ಯಜಮಾನಿಗೆ ಸರ್ಕಾರದ ಮೋಸ: ಈಶ್ವರಪ್ಪ ಆಕ್ರ ...

ಇಲ್ಲಾ ಗಂಡಾಂತರ ಕಟ್ಟಿಟ್ಟ ಬುತ್ತಿ, ಕರುನಾಡಿಗೂ ಕೆಲವೊಂದು ಆಪತ್ತು ಇದೆ. ಕೆಲ ಸಾವು-ನೋವುಗಳು ಆಗುತ್ತವೆ. ದೈವ ಕೃಪೆಯಿಂದ ಪಾರಾಗಬಹುದು ಎಂದರು. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತೆ, ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ. ಜಗತ್ತಿನ ಸಾಮ್ರಾಟರು ತಲ್ಲಣ ಆಗ್ತಾರೆ ಎಂದರು. ಇನ್ನು ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರ್ಲಿಲ್ಲವೊ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರವಾಗಿ ಮಾತನಾಡಿ, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ ಎಂದು ನಿಗೂಢ ಅರ್ಥದಲ್ಲಿ ಮಾತನಾಡಿದರು.

PREV
Read more Articles on
click me!

Recommended Stories

ಇಂದು ಬುಧವಾರ ಈ ರಾಶಿಗೆ ಶುಭ, ಅದೃಷ್ಟ
Baba Vanga Prediction 2026: ಯಂತ್ರಗಳು ಮನುಷ್ಯರನ್ನು ತಿನ್ನುತ್ತವೆ! ಬಾಬಾ ವಂಗಾ ಭಯಂಕರ ಭವಿಷ್ಯವಾಣಿ!