ಅಧಿಕಶ್ರಾವಣ ಮಾಸ ಹಾಗೂ ರಾಯರ ವಾರ ಗುರುವಾರ ಆಗಿದ್ದರಿಂದ ಸಾಮೂಹಿಕ ಅಷ್ಟೋತ್ತರ ಪಾರಾಯಣದಲ್ಲಿ ವಿವಿಧ ಭಜನಾ ಮಂಡಳಿಗಳು, ಭಕ್ತರು ಭಾಗವಹಿಸಿದ್ದರು. ಕಾರ್ಯಕ್ರಮ ಹಿನ್ನೆಲೆಯಲ್ಲಿ ಶ್ರೀಮಠದಿಂದ ಉಚಿತ ವಸತಿ,ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು.
ರಾಯಚೂರು(ಆ.04): ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಧಿಕ ಶ್ರಾವಣ ಮಾಸದ ನಿಮಿತ್ತ ಸಾಮೂಹಿಕ ಅಷ್ಟೋತ್ತರ ಪಾರಾಯಣ ಗುರುವಾರ ನಡೆಯಿತು.
ಬೆಳಗ್ಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಅಭಿಷೇಕ, ಮಹಾಮಂಗಳಾರತಿಯನ್ನು ನೆರವೇರಿಸಿದರು. ಇದರ ಜೊತೆಗೆ ಮೂಲರಾಮದೇವರಿಗೆ ಸಂಸ್ಥಾನಮಠದ ಪೂಜೆಯನ್ನು ಮಾಡಿದರು. ನಂತರ ಶ್ರೀಮಠದ ಪ್ರಾಂಗಣದಲ್ಲಿ ನಡೆದ ವೇದಿಗೆ ಕಾರ್ಯಕ್ರಮದಲ್ಲಿ ಶ್ರೀಗಳು ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಅನುಗ್ರಹ ಸಂದೇಶ ನೀಡಿದರು.
undefined
ಜ್ಞಾನವಾಪಿ ಕ್ಯಾಂಪಸ್ ಸಮೀಕ್ಷೆ; ಈ ಪ್ರಮುಖ ವಿಷಯಗಳ ಬಗ್ಗೆ ನಿಮಗೆಷ್ಟು ಗೊತ್ತು?
ಅಧಿಕಶ್ರಾವಣ ಮಾಸ ಹಾಗೂ ರಾಯರ ವಾರ ಗುರುವಾರ ಆಗಿದ್ದರಿಂದ ಸಾಮೂಹಿಕ ಅಷ್ಟೋತ್ತರ ಪಾರಾಯಣದಲ್ಲಿ ವಿವಿಧ ಭಜನಾ ಮಂಡಳಿಗಳು, ಭಕ್ತರು ಭಾಗವಹಿಸಿದ್ದರು. ಕಾರ್ಯಕ್ರಮ ಹಿನ್ನೆಲೆಯಲ್ಲಿ ಶ್ರೀಮಠದಿಂದ ಉಚಿತ ವಸತಿ,ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶ್ರೀಮಠದ ವಿದ್ವಾಂಸರು, ಪಂಡಿತರು ಉಪಸ್ಥಿತರಿದ್ದರು.