ಸಂಭ್ರಮದ ದಸರಾ ಹಬ್ಬಕ್ಕೆ ಸಜ್ಜಾದ ಮೈಸೂರು: ಹಂಪ ನಾಗರಾಜಯ್ಯರಿಂದ ಉದ್ಘಾಟನೆ

By Kannadaprabha News  |  First Published Oct 3, 2024, 10:07 AM IST

ಮುಡಾ ಗದ್ದಲ, ಲೋಕಾಯುಕ್ತ, ಇ.ಡಿ. ತನಿಖೆಯ ನಡುವೆಯೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ದೂರಿ ಚಾಲನೆ ಸಿಗಲಿದ್ದು, ಈಗಾಗಲೇ ನಾಡಹಬ್ಬ ಆಚರಣೆಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. 


ಅಂಶಿ ಪ್ರಸನ್ನಕುಮಾರ್ 

ಮೈಸೂರು (ಅ.03): ಮುಡಾ ಗದ್ದಲ, ಲೋಕಾಯುಕ್ತ, ಇ.ಡಿ. ತನಿಖೆಯ ನಡುವೆಯೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ದೂರಿ ಚಾಲನೆ ಸಿಗಲಿದ್ದು, ಈಗಾಗಲೇ ನಾಡಹಬ್ಬ ಆಚರಣೆಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಬೆಳಗ್ಗೆ 9.15 ರಿಂದ 9.45 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು. 

Latest Videos

undefined

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಚ್‌.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವ ರಾದ ಡಾ.ಎಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಎಚ್.ಕೆ.ಪಾಟೀಲ್,ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ, ಈಶ್ವರ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸುವರು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸುವರು. ಮೈಸೂರು ಜಿಲ್ಲೆಯವರೇ ಆದ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಆಗಿ ಇದು 7ನೇ ದಸರಾ. 

ಕೆಲವೊಮ್ಮೆ ಕೋರ್ಟ್‌ನಲ್ಲಿ ನ್ಯಾಯ ಸಿಗದೆ ಇರಬಹುದು: ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ಮಂತ್ರ!

ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿ, ಕೆರೆ-ಕಟ್ಟೆ- ಜಲಾಶಯಗಳು ಭರ್ತಿಯಾಗಿರುವುದ ರಿಂದ ವೈಭವಯುತವಾಗಿ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ಸಿದ್ದರಾಮಯ್ಯನವರು ಈಗಾ ಗಲೇ ಸುಮಾರು 40 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದಾರೆ. ದಸರೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆ, ವೃತ್ತಗಳನ್ನು ವಿದ್ಯುದ್ದೀಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದ್ದು, ಅರಮನೆ ಸೇರಿ ಇಡೀ ಮೈಸೂರು ನಗರದಲ್ಲಿ ರಾತ್ರಿ ವೇಳೆ 'ಕಿನ್ನರಲೋಕ'ವೇ ಸೃಷ್ಟಿಯಾಗಿದೆ. ಈಗಾಗಲೇ 'ಅಭಿಮನ್ಯು' ನೇತೃತ್ವದ ಗಜಪಡೆ ಅರಮನೆ ಅಂಗಳದಲ್ಲಿ ಬೀಡುಬಿಟ್ಟಿದ್ದು, ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ರಾಜಬೀದಿಗಳಲ್ಲಿ ತಾಲೀಮು ನಡೆಸುತ್ತಿವೆ. ಅರಮನೆಯಿಂದ ಬನ್ನಿಮಂಟಪದವ ರೆಗೆ ನಡಿಗೆ, ಮರದ ಅಂಬಾರಿ ಸೇರಿ ಭಾರ ಹೊರುವ ತಾಲೀಮು, ಪಿರಂಗಿ ಗಾಡಿಗಳಿಂದ ಸಿಡಿಮದ್ದು ಸಿಡಿಸುವ ತಾಲೀಮಿಗೆ ಅವು ಹೊಂದಿಕೊಂಡಿವೆ. 

ಯುವ ದಸರಾಗೂ ಚಾಲನೆ: ನಾಡಹಬ್ಬದಲ್ಲಿ ಅತ್ಯಂತ ಹೆಚ್ಚು ಜನ ಸೇರುವ ಯುವದಸರೆಯನ್ನು ಈ ಬಾರಿ ಮಹಾರಾಜ ಕಾಲೇಜು ಮೈದಾನದಿಂದ ವರ್ತುಲ ರಸ್ತೆ ಸಮೀಪದ ಉತ್ತನಹಳ್ಳಿ ಬಳಿಗೆ ಸ್ಥಳಾಂತರಿಸಲಾಗಿದೆ. ಶ್ರೇಯಾ ಘೋಷಾಲ್, ಎ. ಆರ್.ರೆಹಮಾನ್, ಇಳಯರಾಜ ಮತ್ತಿತರ ಸಂಗೀತ ದಿಗ್ಗಜರುಈ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಯುವ ದಸರೆಗೆ ಚಾಲನೆ ನೀಡುವರು.

ಬ್ರಿಟಿಷರ ನೆಲದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಬೀದರ್‌ನ‌ ಆದೀಶ ವಾಲಿ

ಇಂದಿನಿಂದ ರಾಜವಂಶಸ್ತರ ಖಾಸಗಿ ದರ್ಬಾರ್ ಆರಂಭ: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋ ತವ ಅಂಗವಾಗಿ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಗತಕಾಲದ ವೈಭವ ಸಾರುವ ಖಾಸಗಿ ದರ್ಬಾರ್‌ಸಾಂಪ್ರದಾ ಯಿಕ ವಿಧಿ-ವಿಧಾನಗಳೊಂದಿಗೆ ಅ.3 ರಿಂದ 12ರವರೆಗೆ ನಡೆ ಯಲಿದ್ದು, ಇದಕ್ಕಾಗಿ ಮೈಸೂರು ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ರಾಜ ವಂಶಸ್ಥ ಹಾಗೂ ಸಂಸದ ಯದುವೀರ್‌ಕೃಷ್ಣದತ್ತ ಚಾಮ ರಾಜ ಒಡೆಯರ್ ಅವರು ಅರಮನೆಯ ಸಂಪ್ರದಾಯ ದಂತೆ ಖಾಸಗಿ ದರ್ಬಾರ್ ಅನ್ನು ಗುರುವಾರ ಆರಂಭಿಸ ಲಿದ್ದು, 10ನೇ ಬಾರಿ ರತ್ನಖಚಿತ ಸಿಂಹಾಸನಾರೋಹಣ ಏರಲಿದ್ದಾರೆ.

click me!