ಚಾಮರಾಜೇಶ್ವರ ರಥೋತ್ಸವ ನವದಂಪತಿಗಳ ಜಾತ್ರೆಯು ಹೌದು. ಆಷಾಡ ಮಾಸದಲ್ಲಿ ನಡೆಯುವ ಈ ರಥೋತ್ಸವ ಸಹಜವಾಗಿಯೇ ವಿಶೇಷತೆಯಿಂದ ಕೂಡಿದೆ. ಜೇಷ್ಠ ಮಾಸದ ತನಕ ವಿವಾಹ ಮಹೋತ್ಸವಗಳ ಸಡಗರ ಮುಗಿದು ಆಷಾಡ ಮಾಸದ ನೆಪದಲ್ಲಿ ಒಂದು ತಿಂಗಳ ಕಾಲ ತಾತ್ಕಾಲಿಕವಾಗಿ ಅಗಲಿರಬೇಕಾದ ನವವಿವಾಹಿತರ ಈ ರಥೋತ್ಸವದ ದಿನ ಒಂದಡೆ ಸೇರಿ ಚಾಮರಾಜೇಶ್ವರನಿಗೆ ಹಣ್ಣು ಧವನ ಎಸೆದು ನಮಿಸುತ್ತಾರೆ. ತಮ್ಮ ದಾಂಪತ್ಯ ಜೀವನ ಸುಖವಾಗಿರಲೆಂದು ಪ್ರಾರ್ಥಿಸುತ್ತಾರೆ.
ವರದಿ - ಪುಟ್ಟರಾಜು. ಆರ್. ಸಿ. ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ
ಚಾಮರಾಜನಗರ(ಜು.20): ಆಷಾಡ ಮಾಸ, ಶೂನ್ಯ ಮಾಸವಾಗಿ ಶುಭ ಕಾರ್ಯಗಳಿಗೆ ನಿಷಿದ್ಧ. ಅದರೆ ಆ ನಗರದಲ್ಲಿ ಪ್ರತಿ ವರ್ಷ ಆಷಾಡ ಮಾಸದಲ್ಲೇ ಒಂದು ವಿಶಿಷ್ಟ ರಥೋತ್ಸವ ನಡೆಯುತ್ತೆ. ಅದು ಕೇವಲ ರಥೋತ್ಸವಲ್ಲ, ಅಲ್ಲಿ ಸಾವಿರಾರು ನವಜೋಡಿಗಳು ಸೇರಿ ಶಂಭ್ರಮಿಸುವ ವೈಶಿಷ್ಟ್ಯ ಇದೆ. ನವದಂಪತಿಗಳ ಜಾತ್ರೆ ಎಂದೇ ಖ್ಯಾತಿಯಾದ ಆ ರಥೋತ್ಸವವಾದರು ಯಾವುದು, ಅದು ಎಲ್ಲಿ ನಡೆಯುತ್ತೆ, ಅಲ್ಲಿನ ವೈಶಿಷ್ಟವಾದರು ಏನು, ನಾವು ತೋರಿಸ್ತೀವಿ ನೋಡಿ..
undefined
ಗಡಿ ಜಿಲ್ಲೆ ಚಾಮರಾಜನಗರದಲ್ಲಿಂದು ಚಾಮರಾಜೇಶ್ವರನ ರಥೋತ್ಸವ ಅದ್ದೂರಿಯಾಗಿ ಜರುಗಿತು. ಆಷಾಡ ಮಾಸದ ಪೂರ್ಣಿಮೆಯ ದಿನವಾದ ಇಂದು ಪೂರ್ವಷಾಡ ನಕ್ಷತ್ರದಲ್ಲಿ ಮದ್ಯಾಹ್ನ 12.07 ರಿಂದ 12.30 ರೊಳಗೆ ಸಲ್ಲುವ ಶುಭ ಅಭಿಜಿನ್ ಲಗ್ನದಲ್ಲಿ ಚಾಮರಾಜೇಶ್ವರ ಮನ್ ಮಹಾ ರಥಾರೋಹಣ ನಡೆಯಿತು ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪೂಜೆ ಸಲ್ಲಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಚಾಮರಾಜೇಶ್ವರನ ರಥಕ್ಕೂ ಮೊದಲು ಗಣಪತಿ, ಸುಬ್ರಹ್ಮಣ್ಯ ರಥಗಳು ಹಾಗೂ ಮೈಸೂರು ಮಹಾರಾಜರಾಗಿದ್ದ ಖಾಸಾ ಚಾಮರಾಜ ಒಡೆಯರ್ ಅವರ ಉತ್ಸವ ಮೂರ್ತಿ ಮುಂದೆ ಚಲಿಸಿದವು. ಚಾಮರಾಜೇಶ್ವರ ದೊಡ್ಡ ರಥ ನಂತರ ಕೆಂಪನಂಜಾಂಭ ರಥಗಳು ರಥದ ಬೀದಿಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸಾಗಿ ಸ್ವಸ್ಥಾನ ಸೇರಿದವು.
ನ್ಯಾಯ, ಧೈರ್ಯದಲ್ಲಿ ಮಾತ್ರವಲ್ಲ, ಸೆಕ್ಸ್ ವಿಷಯದಲ್ಲೂ ಮಹಿಳೆಯರೇ ಮುಂದು ಅಂತಾನೆ ಚಾಣಕ್ಯ!
ಚಾಮರಾಜೇಶ್ವರ ರಥೋತ್ಸವ ನವದಂಪತಿಗಳ ಜಾತ್ರೆಯು ಹೌದು. ಆಷಾಡ ಮಾಸದಲ್ಲಿ ನಡೆಯುವ ಈ ರಥೋತ್ಸವ ಸಹಜವಾಗಿಯೇ ವಿಶೇಷತೆಯಿಂದ ಕೂಡಿದೆ. ಜೇಷ್ಠ ಮಾಸದ ತನಕ ವಿವಾಹ ಮಹೋತ್ಸವಗಳ ಸಡಗರ ಮುಗಿದು ಆಷಾಡ ಮಾಸದ ನೆಪದಲ್ಲಿ ಒಂದು ತಿಂಗಳ ಕಾಲ ತಾತ್ಕಾಲಿಕವಾಗಿ ಅಗಲಿರಬೇಕಾದ ನವವಿವಾಹಿತರ ಈ ರಥೋತ್ಸವದ ದಿನ ಒಂದಡೆ ಸೇರಿ ಚಾಮರಾಜೇಶ್ವರನಿಗೆ ಹಣ್ಣು ಧವನ ಎಸೆದು ನಮಿಸುತ್ತಾರೆ. ತಮ್ಮ ದಾಂಪತ್ಯ ಜೀವನ ಸುಖವಾಗಿರಲೆಂದು ಪ್ರಾರ್ಥಿಸುತ್ತಾರೆ. ನವದಂಪತಿಗಳು ಸಂಪ್ರದಾಯದ ಪ್ರಕಾರ ಒಂದು ತಿಂಗಳ ಕಾಲ ಅಗಲಿರಬೇಕು. ಇಬ್ಬರು ಒಟ್ಟಾಗಿ ಬೆರೆಯುವಂತಿಲ್ಲ. ಈ ಅವಧಿಯಲ್ಲಿ ಅವರ ವಿರಹ ವೇದನೆ ಅನುಭವಿಸಿದವರಿಗೆ ಗೊತ್ತು. ಆದರೆ ಆಷಾಡ ಮಾಸದಲ್ಲು ನವಜೋಡಿಗಳು ಒಂದಡೆ ಸೇರಲು ಚಾಮರಾಜೇಶ್ವರ ರಥೋತ್ಸವ ಒಂದು ಸುವರ್ಣಾವಕಾಶ ಕಲ್ಪಿಸುತ್ತದೆ. ಚಾಮರಾಜೇಶ್ವರ ರಥೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ತೇರಿಗೆ ಹಣ್ಣು ಧವನ ಎಸೆದು ಹರಕೆ ಹೊತ್ತರೆ ನವದಂಪತಿಗಳಿಗೆ ಸಂತಾನ ಭಾಗ್ಯ , ಅವಿವಾಹಿತರಿಗೆ ಕಂಕಣ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಇದೆ.
ನವದಂಪತಿಗಳ ಜಾತ್ರೆ ಎಂದೆ ಖ್ಯಾತಿಯಾಗಿರುವ ಚಾಮರಾಜೇಶ್ವರ ರಥೋತ್ಸವದಲ್ಲಿ ಸಾವಿರಾರು ನವವಿವಾಹಿತರು ಬಂದು ಸೇರಿದ್ದರು. ಎಲ್ಲಿ ನೋಡಿದರು ನವದಂಪತಿಗಳದ್ದೇ ಕಲರವ. ದೇವರಿಗೆ ಒಟ್ಟಾಗಿ ಸೇರಿ ಹಣ್ಣು ಧವನ ಎಸೆದು ನಮಿಸುವುದು. ಕೈಕೈ ಹಿಡಿದು ಸುತ್ತಾಡುವ ದೃಶ್ಯ ಸಾಮಾನ್ಯವಾಗಿತ್ತು. ನವ ದಂಪತಿಗಳು . ಖುಷಿಖುಷಿಯಾಗಿ ಅಡ್ಡಾಡುತ್ತಾ ಜಾತ್ರೆಯಲ್ಲಿ ಇಷ್ಟ ಬಂದ ಸಾಮಾಗ್ರಿ ಖರೀದಿಸುತ್ತಾ ಸಿಹಿತಿಂಡಿ ಮೆಲ್ಲುತ್ತಾ /ಅಷಾಡದ ಅಗಲಿಕೆಯ ಬೇಸರ ಮರೆಯುತ್ತಾರೆ. ಮನದ ಭಾವನೆಗಳನ್ನು ಪರಸ್ಪರ ಹಂಚಿಕೊಂಡು ಕಾಲ ಕಳೆಯುತ್ತಾರೆ. ಈ ಜಾತ್ರೆಯಲ್ಲಿ ಕೇವಲ ಚಾಮರಾಜನಗರ ಜಿಲ್ಲೆಯವರಷ್ಟೆ ಅಲ್ಲ ಸುತ್ತಮುತ್ತಲಿನ ಜಿಲ್ಲೆ ಹಾಗು ಹೊರರಾಜ್ಯಗಳಿಂದಲು ನವವಿವಾಹಿತರು ಭಾಗವಹಿಸುತ್ತಾರೆ. ಒಟ್ಟಾರೆ ಆಷಾಡದ ನಡುವೆಯು ನವದಂಪತಿಗಳ ಭೇಟಿಗೆ ಚಾಮರಾಜೇಶ್ವರ ಕೃಪೆ ತೋರುವುದು ಇಲ್ಲಿನ ವಿಶೇಷವಾಗಿದೆ.