ಮಂಗಳೂರು ಶಾರದೆಗೆ ವಾರಣಾಸಿ ಮುಸ್ಲಿಂ ಕುಟುಂಬ ನೇಯ್ದ ಸೀರೆ!

By Kannadaprabha News  |  First Published Sep 20, 2022, 10:29 AM IST

ಈ ಬಾರಿ ದಸರಾ ಮಹೋತ್ಸವದಲ್ಲಿ ನಗರದ ರಥಬೀದಿ ಶಾರದೆ 8 ಲಕ್ಷ ರು. ಮೌಲ್ಯದ ಚಿನ್ನದ ಜರಿ ಸೀರೆಯೊಂದಿಗೆ ಮಿಂಚಲಿದ್ದಾಳೆ. ಈ ಸೀರೆಯನ್ನು ವಾರಣಾಸಿ ಜ್ಞಾನವ್ಯಾಪಿ ದೇಗುಲ ಬಳಿಯ ಮುಸ್ಲಿಂ ಕುಟುಂಬವೊಂದು ಕಳೆದ 6 ತಿಂಗಳಿನಿಂದ ತಯಾರಿಸುತ್ತಿದೆ.


ಮಂಗಳೂರು (ಸೆ.20) : ಈ ಬಾರಿ ದಸರಾ ಮಹೋತ್ಸವದಲ್ಲಿ ನಗರದ ರಥಬೀದಿ ಶಾರದೆ 8 ಲಕ್ಷ ರು. ಮೌಲ್ಯದ ಚಿನ್ನದ ಜರಿ ಸೀರೆಯೊಂದಿಗೆ ಮಿಂಚಲಿದ್ದಾಳೆ. ಈ ಸೀರೆಯನ್ನು ವಾರಣಾಸಿ ಜ್ಞಾನವ್ಯಾಪಿ ದೇಗುಲ ಬಳಿಯ ಮುಸ್ಲಿಂ ಕುಟುಂಬವೊಂದು ಕಳೆದ 6 ತಿಂಗಳಿನಿಂದ ತಯಾರಿಸುತ್ತಿದೆ.

Panchanga: ಗುರುವಾರ, ಮೂಲ ನಕ್ಷತ್ರ, ಶೃಂಗೇರಿ ಶಾರದೆಯ ಆರಾಧನೆಯಿಂದ ದೋಷ ನಿವಾರಣೆ

Tap to resize

Latest Videos

ಪ್ರತಿವರ್ಷ ಶಾರದೆಯ ಶೋಭಾಯಾತ್ರೆ ಸಂದರ್ಭ ಬೆಳ್ಳಿಯ ಜರಿಯಿರುವ ರೇಷ್ಮೆ ಸೀರೆಯನ್ನು ಶಾರದಾ ದೇವಿಗೆ ಉಡಿಸಲಾಗುತ್ತಿದ್ದು, ನಗರದ ದಾನಿಯೊಬ್ಬರು ಈ ಸೀರೆಯನ್ನು ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ವಾರಣಾಸಿ ಮುಸ್ಲಿಂ ಕುಟುಂಬವೇ ಈ ಸೀರೆಯನ್ನು ತಯಾರಿಸುತ್ತಿದ್ದು, ಈ ಬಾರಿ ಶಾರದೆಯ ಸೀರೆ ತಯಾರಿಸುವವರು ಆ ಕುಟುಂಬದ 5ನೇ ತಲೆಮಾರಿನವರು.

ಸ್ವರ್ಣದ ವೀಣೆ, ನವಿಲು: ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವದ ಈ ಪರ್ವಕಾಲದಲ್ಲಿ ಶಾರದಾ ಮಹೋತ್ಸವ ಸಮಿತಿ ಮತ್ತು ಭಕ್ತಾದಿಗಳು ಒಟ್ಟು ಸೇರಿ 200 ಪವನ್‌ ತೂಕದ ಸ್ವರ್ಣಾಭರಣಗಳನ್ನು ಸಮರ್ಪಿಸಲಿದ್ದಾರೆ. ಅದರಲ್ಲಿ ಶಾರದೆಗೆ ಚಿನ್ನದ ವೀಣೆ, ನವಿಲೂ ಸೇರಿದೆ. ಇದು ಮಾತ್ರವಲ್ಲದೆ ಶಾರದೆಗೆ ರಜತ ಬೆಳ್ಳಿ ದೀಪಗಳು ಸಮರ್ಪಣೆಯಾಗುತ್ತಿವೆ

Panchanga: ವಿದ್ಯಾರ್ಥಿಗಳು ತಾಯಿ ಶಾರದೆಯ ಈ ಮಂತ್ರ ಪಠಿಸಿದರೆ, ಓದಿಗೆ ಅನುಕೂಲವಾಗುವುದು

ಮಂಗಳೂರು ದಸರಾ ಉದ್ಘಾಟನೆಗೆ ಸಿಎಂ ಆಹ್ವಾನ:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವ ಸೆ.26ರಿಂದ ಅ.6ರವರೆಗೆ ನಡೆಯಲಿದ್ದು, ದಸರಾ ಮಹೋತ್ಸವ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗುವುದು ಎಂದು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ. 

ದಸರಾದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಅವರಿಗೆ ಕಳುಹಿಸಿಕೊಟ್ಟು, ಸ್ವತಃ ನಾನೇ ಆಹ್ವಾನಿಸುತ್ತೇನೆ. ಮುಖ್ಯಮಂತ್ರಿಗಳ ಸಮಯವನ್ನು ಗೊತ್ತುಪಡಿಸಿ ದಸರಾ ಉದ್ಘಾಟನೆ ದಿನ, ಸಮಯ ನಿಗದಿಪಡಿಸಲಾಗುವುದು. ಕ್ಷೇತ್ರದ ಭಕ್ತಾದಿಗಳ ಅಭಿಲಾಷೆಯಂತೆ ಈ ಬಾರಿಯ ಮಂಗಳೂರು ದಸರಾ ಮಹೋತ್ಸವ ಮತ್ತಷ್ಟುವೈಭವಪೂರ್ಣವಾಗಿ ನಡೆಯಲಿದೆ ಎಂದು ತಿಳಿಸಿದರು.

10 ಲಕ್ಷ ಪ್ರವಾಸಿಗರ ನಿರೀಕ್ಷೆ: ಮಂಗಳೂರು ದಸರಾ ಮಹೋತ್ಸವ ನಾಡಿನ ಜನರ ಉತ್ಸವವಾಗಿದ್ದು, ಇದರ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಈ ಬಾರಿ ದಸರಾ ಮಹೋತ್ಸವಕ್ಕೆ ವಿವಿಧೆಡೆಗಳಿಂದ 10ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರ ನಿರೀಕ್ಷೆಯಿದೆ. ಅದಕ್ಕೆ ತಕ್ಕಂತೆ ಸಿದ್ಧತೆಗಳು ನಡೆದಿವೆ. ಭಕ್ತರ ಅನುಕೂಲದ ದೃಷ್ಟಿಯಿಂದ ಈ ಬಾರಿ ಚಂಡಿಕಾಯಾಗವನ್ನು ಕ್ಷೇತ್ರದಲ್ಲಿರುವ ಗಾಜಿನ ಮನೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.

click me!