Sawan Month 2023: ಇದು ಶಿವನು 'ವಿಷ' ಕುಡಿದ ಶ್ರಾವಣ ಮಾಸ; ಮಹಾದೇವನ ಕೃಪೆಗಾಗಿ ಏನು ಮಾಡಬೇಕು?

By Sushma Hegde  |  First Published Aug 16, 2023, 11:48 AM IST

ನಾಳೆಯಿಂದ ಪವಿತ್ರ ಮಾಸವಾದ ಶ್ರಾವಣವು ಆರಂಭವಾಗಲಿದ್ದು, ಧಾರ್ಮಿಕ ಕಾರ್ಯಗಳ ಮೂಲಕ ಶಿವನನ್ನು ಮೆಚ್ಚಿಸಲು ಇದು ಪ್ರಶಸ್ತವಾದ ಕಾಲವಾಗಿದೆ. ಶ್ರಾವಣದ ಮಹತ್ವ ಏನು ಹಾಗೂ ಶ್ರಾವಣದಲ್ಲಿ ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.


ನಾಳೆಯಿಂದ ಪವಿತ್ರ ಮಾಸವಾದ ಶ್ರಾವಣವು ಆರಂಭವಾಗಲಿದ್ದು, ಧಾರ್ಮಿಕ ಕಾರ್ಯಗಳ ಮೂಲಕ ಶಿವನನ್ನು ಮೆಚ್ಚಿಸಲು ಇದು ಪ್ರಶಸ್ತವಾದ ಕಾಲವಾಗಿದೆ. ಶ್ರಾವಣದ ಮಹತ್ವ ಏನು ಹಾಗೂ ಶ್ರಾವಣದಲ್ಲಿ ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

ಹಿಂದೂಗಳಿಗೆ ಶ್ರಾವಣ ಮಾಸವು ಅತ್ಯಂತ ಪವಿತ್ರ. ಈ ಮಾಸದಲ್ಲಿ ಶಿವನ ಆರಾಧನೆ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗೂ ಶಿವನ ಭಕ್ತರ ಬೇಡಿಕೆಗಳನ್ನು ಈಡೇರಿಸುತ್ತಾನೆ. ಶ್ರಾವಣದ ಮಹತ್ವ ಏನು ಹಾಗೂ ಈ ಮಾಸದಲ್ಲಿ ಶಿವನನ್ನು ಏಕೆ ಆರಾಧಿಸಬೇಕು ಎಂಬ ಡೀಟೇಲ್ಸ್ ಇಲ್ಲಿದೆ.

Tap to resize

Latest Videos

ಶಿವನು ಹಾಲಾಹಲ ಕುಡಿದ ಮಾಸ ಶ್ರಾವಣ

ಪುರಾಣ ಕಾಲದಲ್ಲಿ ಸಮುದ್ರ ಮಂಥನವಾದ ಸಂದರ್ಭದಲ್ಲಿ ಅಮೃತಕ್ಕಾಗಿ ದೇವತೆಗಳು ಮತ್ತು ದಾನವರು ಕಾದಾಡುತ್ತಿದ್ದರು. ಆಗ 14 ಬೇರೆ ಬೇರೆ ರತ್ನಗಳು ಮೇಲೆದ್ದು ಬರುತ್ತವೆ. ಹದಿಮೂರು ರತ್ನಗಳನ್ನು ದೇವತೆಗಳು ದಾನವರು ಹಂಚಿಕೊಳ್ಳುತ್ತಾರೆ, ಉಳಿದ ಒಂದು ರತ್ನವೇ ಹಾಲಾಹಲ.  ಇಡೀ ಪೃಥ್ವಿಯನ್ನೇ ನಾಶಮಾಡುವ ಶಕ್ತಿಯಿರುವ ಹಾಲಾಹಲವನ್ನು ಶಿವ ಕುಡಿಯುತ್ತಾನೆ, ಪಾರ್ವತಿ ಗಂಟಲನ್ನು ಒತ್ತಿ ಹಿಡಿದ ಕಾರಣ ಹಾಲಾಹಲವು ಗಂಟಲಲ್ಲೇ ಉಳಿದುಕೊಳ್ಳುತ್ತದೆ. ಶಿವನ ಗಂಟಲು ನೀಲಿ ಬಣ್ಣಕ್ಕೆ ತಿರುಗುತ್ತದೆ. ಹಾಗಾಗಿ ಶಿವನಿಗೆ ನೀಲಕಂಠನೆಂಬ ಹೆಸರು ಬರುತ್ತದೆ. ಜಗತ್ತಿನ ಉಳಿವಿಗಾಗಿ ಶಿವ ಹಾಲಾಹಲವನ್ನು ಕುಡಿದದ್ದು ಶ್ರಾವಣ ಮಾಸದಲ್ಲಿ ಆದ ಕಾರಣ ಈ ಮಾಸದಲ್ಲಿ ಶಿವನನ್ನು ಆರಾಧಿಸುತ್ತಾರೆ .

ಶನಿವಾರ ಈ ಕೆಲಸ ಮಾಡಿದರೆ ರಾಜಸುಖ; ಎಚ್ಚರ.. ಈ ಕೆಲಸದಿಂದ ಶನಿದೋಷ..!


  
ಶ್ರಾವಣ ಸೋಮವಾರ ವ್ರತ

ಶ್ರಾವಣದಲ್ಲಿ ಸೋಮವಾರಕ್ಕೆ ಬಹಳ ಪ್ರಾಮುಖ್ಯತೆ ಇದೆ. ಶ್ರಾವಣ ಸೋಮವಾರದಂದು ಎಲ್ಲಾ ಶಿವನ ದೇವಾಲಯಗಳಲ್ಲಿ ಹಾಲಿನ ಅಭಿಷೇಕ ಮತ್ತು ಬಿಲ್ವಾರ್ಚನೆಗೆ ಆದ್ಯತೆ ನೀಡಲಾಗುತ್ತದೆ. ಶ್ರಾವಣ ಸೋಮವಾರದ ವ್ರತವನ್ನು ಮಾಡುವವರು, ಆ ದಿನ ಶಿವನ ಪೂಜೆ, ಧ್ಯಾನಗಳನ್ನು ಮಾಡುತ್ತಾ ಸೂರ್ಯಾಸ್ತದವರೆಗೆ ಉಪವಾಸವನ್ನು ಆಚರಿಸುತ್ತಾರೆ.  

ಶ್ರಾವಣ ಮಾಸದಲ್ಲಿ ಶಿವನಿಗೆ ಅಭಿಷೇಕ

ಶ್ರಾವಣ ಮಾಸದಲ್ಲಿ ಶಿವನಿಗೆ ಹಾಲಿನಿಂದ ಅಭಿಷೇಕ ಮಾಡುವುದರಿಂದ ಪುಣ್ಯ ಲಭಿಸುತ್ತದೆ. ವಿಭೂತಿಯಿಂದ ಶಿವನನ್ನು ಆರಾಧಿಸಿ, ಪಂಚಾಮೃತದಿಂದ ಅಭಿಷೇಕ ಮಾಡುವುದರ ಜೊತೆಗೆ ಬಿಲ್ವಪತ್ರೆಗಳಿಂದ ಅರ್ಚನೆ ಮಾಡಿದರೆ, ಶಿವ ಸಂತುಷ್ಟನಾಗಿ ಬೇಡಿದ್ದನ್ನು ನೀಡುತ್ತಾನೆ.

ಶ್ರಾವಣ ಮಾಸದಲ್ಲಿ ರುದ್ರಾಭಿಷೇಕ 

ಈ ಮಾಸದಲ್ಲಿ ರುದ್ರಾಭಿಷೇಕವನ್ನು ಮಾಡಿಸುವುದರಿಂದ ಮನೆಗೆ ಒಳಿತಾಗುತ್ತದೆ. ಈ ಮಾಸದಲ್ಲಿ ಮಹಾಮೃತ್ಯುಂಜಯ ಮಂತ್ರವನ್ನು ಪಠಿಸುವುದು ಹೆಚ್ಚು ಶ್ರೇಯಸ್ಕರವಾಗಿದೆ. ಹಾಗೂ ಶ್ರಾವಣ ಮಾಸದಲ್ಲಿ
ರುದ್ರಾಕ್ಷಿಯನ್ನು ಧರಿಸುವುದರಿಂದ ಶಿವನ ಕೃಪೆಯನ್ನು ಪಡೆಯಬಹುದು.

ಶನಿಯಿಂದ ನಾಶವಾಗದ ವಿಷಯೋಗ ಸೃಷ್ಟಿ; ಈ ನಾಲ್ಕು ರಾಶಿಯವರಿಗೆ ಇನ್ಮುಂದೆ ಬರೀ ಸಂಕಷ್ಟ..!

ದಿನ ಭವಿಷ್ಯ, ವಾರ ಭವಿಷ್ಯ, ನಿಮ್ಮ ರಾಶಿ ವಿಶೇಷ, ದಿನ ವಿಶೇಷ, ಹಬ್ಬ ಹರಿದಿನಗಳು, ಸಂಪ್ರದಾಯ ಆಚರಣೆಗಳು, ಅವುಗಳ ವೈಜ್ಞಾನಿಕ ಹಿನ್ನೆಲೆ, ಪುರಾಣ ಪುಣ್ಯ ಕತೆಗಳು, ವಾಸ್ತು ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಸುವರ್ಣ ನ್ಯೂಸ್ ಜ್ಯೋತಿಷ್ಯ ವಿಭಾಗವನ್ನು ತಪ್ಪದೇ ನೋಡುತ್ತಿರಿ.

click me!