ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ, ಬಾಲ ಕೃಷ್ಣನ ವೇಶ ಧರಿಸಿ ಸಂಭ್ರಮಪಟ್ಟ ಪುಟಾಣಿಗಳು..!

Published : Sep 06, 2023, 08:49 PM IST
ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ, ಬಾಲ ಕೃಷ್ಣನ ವೇಶ ಧರಿಸಿ ಸಂಭ್ರಮಪಟ್ಟ ಪುಟಾಣಿಗಳು..!

ಸಾರಾಂಶ

ಸುಮಾರು 100ಕ್ಕೂ ಹೆಚ್ಚು ಮಕ್ಕಳು ಕೃಷ್ಣನ ವೇಷ ಧರಿಸಿ ದೇವಸ್ಥಾನಕ್ಕೆ ಆಗಮಿಸಿದ್ದರು. ಎಲ್ಲಾ ಮಕ್ಕಳಿಗೂ ವಿಶೇಷ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಕೃಷ್ಣ ಜನ್ಮಾಷ್ಟಮಿ ನಾಳೆ(ಗುರುವಾರ)ಯೂ ಇದ್ದು, ದೇವಾಲಯದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು(ಸೆ.06): ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಇಂದು(ಬುಧವಾರ) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗಿದೆ. ಅದೇ ರೀತಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಮಲ್ಲೇಶ್ವರಂ 11ನೇ ಕ್ರಾಸ್‌ನಲ್ಲಿರುವ ಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಮಕ್ಕಳಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಸುಮಾರು 100ಕ್ಕೂ ಹೆಚ್ಚು ಮಕ್ಕಳು ಕೃಷ್ಣನ ವೇಷ ಧರಿಸಿ ದೇವಸ್ಥಾನಕ್ಕೆ ಆಗಮಿಸಿದ್ದರು. ಎಲ್ಲಾ ಮಕ್ಕಳಿಗೂ ವಿಶೇಷ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಕೃಷ್ಣ ಜನ್ಮಾಷ್ಟಮಿ ನಾಳೆ(ಗುರುವಾರ)ಯೂ ಇದ್ದು, ದೇವಾಲಯದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ರಾಧಾ-ಕೃಷ್ಣನ ವಿಗ್ರಹವನ್ನು ಇಡುತ್ತಿದ್ದರೆ, ಈ ವಾಸ್ತು ನಿಯಮಗಳನ್ನು ಅನುಸರಿಸಿ

ನಾಳೆ(ಸೆ.07) ರಂದು ನಡೆಯುವ ಶ್ರೀ ಕೃಷ್ಣ ಜಯಂತಿ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ಮಹಾಭಿಷೇಕ, ಸಂಜೆ 5 ಗಂಟೆಗೆ ಮಹಾಮಂಗಳಾರತಿ, ಸಂಜೆ 6.30ಕ್ಕೆ ವಿದ್ವಾನ್‌ ಶ್ರೀಧರ್‌ ಸಾಗರ್‌ ಮತ್ತು ವೃಂದವರಿಂದ ಸ್ಯಾಕ್ಸೋಫೋನ್‌ ವಾದನ ಹಾಗೂ ರಾತ್ರಿ 11 ಗಂಟೆಗೆ ಶ್ರೀ ನವನೀತ ಕೃಷ್ಣನಿಗೆ ಮಹಾಭಿಷೇಕ ನಡೆಯಲಿದೆ. 

ಇನ್ನು ಹಿರಿಯ ನಾಗರಿಕರಿಗೆ ರಾತ್ರಿ 8 ರಿಂದ 10 ಗಂಟೆಯವರಿಗೆ ದೇವರ ದರ್ಶನವನ್ನು ಏರ್ಪಡಿಸಲಾಗಿದೆ. ಇದರ ಸದುಪಯೋಗವನ್ನು ಹಿರಿಯ ನಾಗರಿಕರು ಪಡೆದುಕೊಳ್ಳಬೇಕು ಎಂದು ವೇಣುಗೋಪಾಲ ಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. 

PREV
Read more Articles on
click me!

Recommended Stories

ಈ 4 ರಾಶಿಯವರಲ್ಲಿ ಒಳ್ಳೆಯದಕ್ಕಿಂತ ಕೆಟ್ಟ ಗುಣಗಳೇ ಹೆಚ್ಚು, ದ್ವೇಷ ಸಾಧಿಸೋದ್ರಲ್ಲಿ ನಿಸ್ಸೀಮರು
ಹೊಸ ವರ್ಷದಲ್ಲಿ 3 ರಾಜಯೋಗ, 3 ರಾಶಿಗೆ ಬಹಳಷ್ಟು ಹಣ