ನವರಾತ್ರಿ ಹಾಗೂ ದಸರಾ ಹಬ್ಬದ ನಿಮಿತ್ತವಾಗಿ ಸಚಿವೆ ಶಶಿಕಲಾ ಜೊಲ್ಲೆ ಉದ್ಯೋಗ ಸಮೂಹದ ವತಿಯಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಹಾಲಕ್ಷ್ಮೀ ದೇವಿಗೆ ಕುಂಕುಮಾರ್ಚನೆ ಕಾರ್ಯಕ್ರಮದ ನಡೆಯಿತು.
ಬೆಳಗಾವಿ (ಅ.1) : ನವರಾತ್ರಿ ಹಾಗೂ ದಸರಾ ಹಬ್ಬದ ನಿಮಿತ್ತವಾಗಿ ಸಚಿವೆ ಶಶಿಕಲಾ ಜೊಲ್ಲೆ ಉದ್ಯೋಗ ಸಮೂಹದ ವತಿಯಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಹಾಲಕ್ಷ್ಮೀ ದೇವಿಗೆ ಕುಂಕುಮಾರ್ಚನೆ ಕಾರ್ಯಕ್ರಮದ ನಡೆಯಿತು.
ಮಳೆ ಹಾನಿ; ರೈತರಿಗೆ .1.38 ಕೋಟಿ ಪರಿಹಾರ - ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಡೆದ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ನಿಪ್ಪಾಣಿಯ ಸಾವಿರಾರು ಮಹಿಳೆಯರು ಭಾಗಿಯಾಗಿದ್ದರು. ಕಾರ್ಯಕ್ರಮದ ವೇಳೆ ಮಳೆ ಸುರಿಯಿತು. ಮಳೆಗೆ ಚದುರದೇ ಮಳೆಯನ್ನೂ ಲೆಕ್ಕಿಸದೆ ಕುಂಕುಮಾರ್ಚನೆ ಕಾರ್ಯಕ್ರಮ ಮುಗಿಯುವವರೆಗೆ ಮಳೆಯಲ್ಲಿಯೇ ಕುಳಿತು ಕುಂಕುಮಾರ್ಚನೆ ಮಾಡಿ ದೇವಿಯ ಕೃಪೆಗೆ ಪಾತ್ರರದಾರು.
ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿದೆ.
ಅದರಂತೆ ದಿನಾಂಕ 30.09.2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರಮಾಡಿಕೊಂಡು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸಚಿವರು ಸೂಚನೆ ನೀಡಿದ್ದ ಹಿನ್ನಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಜಯನಗರ ಉಸ್ತುವಾರಿ ಅದಲು ಬದಲು ಆದೇಶ ಹಿಂಪಡೆದ ರಾಜ್ಯ ಸರ್ಕಾರ
ಲೋಕ ಕಲ್ಯಾಣಕ್ಕಾಗಿ ಹಾಗೂ ಸಂಪ್ರದಾಯ ಪದ್ಧತಿಗಳನ್ನು ಎಲ್ಲರಿಗೂ ತಿಳಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಅಂತ ಇದೇ ವೇಳೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ನವರಾತ್ರಿ ಹಬ್ಬದ ಪ್ರಯುಕ್ತ ನಿಪ್ಪಾಣಿ ಪಟ್ಟಣದ ನಗರವಾಸಿನಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಮಾತೆಯ ದರುಶನ ಪಡೆದು ನಾಡಿನ ಜನತೆಯ ಪರವಾಗಿ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಜನತೆಗೆ ಒಳಿತಾಗಿ,ನಾಡಿನೆಲ್ಲೆಡೆ ಸಮೃದ್ಧಿ ಸೃಷ್ಟಿಯಾಗಲಿ
ಸಚಿವ ಶಶಿಕಲಾ ಜೊಲ್ಲೆ