ನವರಾತ್ರಿ ಹಿನ್ನಲೆಯಲ್ಲಿ ಶ್ರೀ ಮಠದಲ್ಲಿ ಪ್ರತಿದಿನದಂತೆ ಇಂದು ಕೂಡ ಪಾರಾಯಣ, ಕುಂಕುಮಾರ್ಚನೆ ಪೂಜೆಗಳು ನೆರವೇರಿದವು. ಬೀದಿ ಉತ್ಸವದ ಜೊತೆಗೆ ಪ್ರತಿನಿತ್ಯ ಸಂಜೆ 6.30 ಕ್ಕೆ ಶ್ರೀಶಾರದಾಂಬೆಗೆ ರಾಜಬೀದಿಯಲ್ಲಿ ರಥೋತ್ಸವ ನಡೆಯುಲಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು(ಅ.18): ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಹೊರನಾಡಿನ ಧಾರ್ಮಿಕ ಕ್ಷೇತ್ರಗಳಲ್ಲಿ ನವರಾತ್ರಿ ಸಂಭ್ರಮ ಮನೆಮಾಡಿದೆ. ಶೃಂಗೇರಿ, ಹೊರನಾಡಿನ ದೇವಿ ದರ್ಶನ ಪಡೆಯಲು ಭಕ್ತ ಸಾಗರವೇ ಹರಿದುಬಂದಿದೆ. ನವರಾತ್ರಿಯ ನಾಲ್ಕನೇ ದಿನವಾದ ಇಂದು(ಬುಧವಾರ) ಶೃಂಗೇರಿ ಶಾರದೆ ಮಯೂರ ವಾಹನಾಲಂಕಾರದಲ್ಲಿ ದರ್ಶನ ನೀಡಿದ್ರೆ ಹೊರನಾಡಿನ ಅನ್ನಪೂಣೇಶ್ವರಿ ಮೃಗಾರೂಢ ಕೂಷ್ಮಾಂಡ ಅವತಾರದಲ್ಲಿ ಭಕ್ತರಿಗೆ ದರ್ಶನದ ಭಾಗ್ಯ ನೀಡಿದ್ದಳು.
undefined
ಶೃಂಗೇರಿಯಲ್ಲಿ ನವರಾತ್ರಿ ಸಂಭ್ರಮ
ವಿದ್ಯಾಧಿದೇವತೆ ಶೃಂಗೇರಿ ಶಾರದಾಂಭೆ ನವರಾತ್ರಿಯ ನಾಲ್ಕನೇ ದಿನವಾದ ಇಂದು ಕೈಯಲ್ಲಿ ಶಕ್ತಾಯ್ಯುಧವನ್ನು ಧರಿಸಿ ಕುಮಾರಸ್ವಾಮಿ ಶಕ್ತಿಯಾಗಿ ಲೋಕವನ್ನ ಅನುಗ್ರಹಿಸುವ ಮಯೂರ ವಾಹನಾಲಂಕಾರದ ಕೌಮಾರೀಯಾಗಿ ಭಕ್ತರಿಗೆ ದರ್ಶನ ನೀಡಿದ್ದಳು. ಅನುಗ್ರಹಿಸಿಳು.ಬೀದಿ ಉತ್ಸವದಲ್ಲಿ ಅಡ್ಡಗದ್ದೆ ಗ್ರಾ.ಪಂ ಭಕ್ತಾದಿಗಳು ಭಾಗವಹಿಸಿದರು.
ಚಿಕ್ಕಮಗಳೂರಲ್ಲಿ ನವರಾತ್ರಿ ಸಂಭ್ರಮ: ಗೊಂಬೆಗಳ ಮೂಲಕ ಪುರಾಣ, ಪುಣ್ಯಕಥೆ ಮೆಲುಕು ಹಾಕುವ ಕಾರ್ಯ
ನವರಾತ್ರಿ ಹಿನ್ನಲೆಯಲ್ಲಿ ಶ್ರೀ ಮಠದಲ್ಲಿ ಪ್ರತಿದಿನದಂತೆ ಇಂದು ಕೂಡ ಪಾರಾಯಣ, ಕುಂಕುಮಾರ್ಚನೆ ಪೂಜೆಗಳು ನೆರವೇರಿದವು. ಬೀದಿ ಉತ್ಸವದ ಜೊತೆಗೆ ಪ್ರತಿನಿತ್ಯ ಸಂಜೆ 6.30 ಕ್ಕೆ ಶ್ರೀಶಾರದಾಂಬೆಗೆ ರಾಜಬೀದಿಯಲ್ಲಿ ರಥೋತ್ಸವ ನಡೆಯುಲಿದೆ. ನವರಾತ್ರಿಯ ಅಂಗವಾಗಿ ಶೃಂಗೇರಿ ಶಾರದಾಂಭೆ ದೇಗುಲದ ಒಳಭಾಗ, ಹೊರಭಾಗದಲ್ಲಿ ಹೂವಿನ ಅಲಂಕಾರ ಭಕ್ತರನ್ನು ಆಕರ್ಷಣೆ ಮಾಡುತ್ತಿದೆ.