
ಬಾಘಪತ್(ಜ.28) ಜೈನ ಮಂದಿರದಲ್ಲಿ ಆಯೋಜಿಸಿದ್ದ ಲಡ್ಡು ಮಹೋತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದೆ. ಲಡ್ಡು ಮಹೋತ್ಸವಕ್ಕಾಗಿ ಹಾಕಿದ್ದ ತಾತ್ಕಾಲಿಕ ಮರದ ಛಾವಣಿ ಕುಸಿದು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರೆ, 6 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಾಘಪತ್ ಜಿಲ್ಲೆಯಲ್ಲಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸೂಚಿಸಿದ್ದಾರೆ. ಇಷ್ಟೇ ಅಲ್ಲ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ಸೂಚಿಸಿದ್ದಾರೆ.
ಬರೌತ್ ಪ್ರದೇಶದಲ್ಲಿರುವ ಜನಪ್ರಿಯ ಜೈನ ಮಂದಿರದಲ್ಲಿ ಲಡ್ಡು ಮಹೋತ್ಸವ ಜಾತ್ರೆ ಆಯೋಜಿಲಾಗಿದೆ. ವಿಶೇಷ ಅಂದರೆ 30 ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರಾ ಮಹೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಮಂದಿರಕ್ಕೆ ಲಡ್ಡು ಸಮರ್ಪಿಸಿ ಭಗವಂತನ ಕೃಪೆಗೆ ಪಾತ್ರರಾಗಲು ಆಗಮಿಸಿದ್ದಾರೆ. ಇದರಂತೆ ಎಲ್ಲವೂ ಸೂಸೂತ್ರವಾಗಿ ನಡೆಯುತ್ತಿತ್ತು. ಲಡ್ಡು ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಕಾರಣ ತಾತ್ಕಾಲಿಕ ಮರದ ವೀಕ್ಷಣಾ ಛಾವಣಿ ನಿರ್ಮಾಣ ಮಾಡಲಾಗಿತ್ತು.
ಆಸ್ಪತ್ರೆಯಲ್ಲಿ ಲಿಫ್ಟ್ ಕುಸಿದು ಬಿದ್ದು ಆಗಷ್ಟೇ ಮಗುವಿಗೆ ಜನ್ಮ ನೀಡಿದ್ದ ಅಮ್ಮ ಸಾವು
ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈ ವೀಕ್ಷಣಾ ಛಾವಣಿ ಹತ್ತಿದ್ದಾರೆ. ಇದರ ಪರಿಣಾಮ ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಇದರಿಂದ ಛಾಣಿ ಮೇಲಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ ಭಕ್ತರು ನೆಲಕ್ಕೆ ಬಿದ್ದಿದ್ದಾರೆ. ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಜಾತ್ರಾ ನಿಯಮದ ಪ್ರಕಾರ ಆ್ಯಂಬುಲೆನ್ಸ್ ಸೇವೆಗಳನ್ನು ನಿಯೋಜಿಸಲಾಗಿತ್ತು. ಹೀಗಾಗಿ ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡ 6 ಭಕ್ತರು ಮೃತಪಟ್ಟಿರುವುದಾಗಿ ವರದಿಯಾಗಿದೆ. 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ.ಈ ಪೈಕೆ ಕೆಲವರ ಸ್ಥಿತಿ ಗಂಭೀರವಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಜಿಲ್ಲಾಡಳಿತ ಸ್ಥಳಕ್ಕೆ ಆಗಮಿಸಿದೆ. ಪೊಲೀಸರು ಹಾಗೂ ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದೆ. ಸಣ್ಣಪುಟ್ಟ ಗಾಯಾಳುಗಳಿಗೆ ಪ್ರಥಮ ಟಿ ಚಿಕತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಇತ್ತ ಸಿಎಂ ಯೋಗಿ ಆದಿತ್ಯನಾಥ್ ಬಾಘಪತ್ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಾರೆ. ತಕ್ಷಣವೇ ಎಲ್ಲಾ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚಿಸಲಾಗಿದೆ. ಗಾಯಾಗಳುಗಳ ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿರುವ ಯೋಗಿ ಆದಿತ್ಯನಾಥ್ ಘಟನೆಗೆ ಕಾರಣ ಕೇಳಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಕೇಳಿದ್ದಾರೆ.
ಭಾರತದ ಮೊದಲ ಬುಲೆಟ್ ರೈಲು ಕಾಮಗಾರಿ ಸ್ಥಳದಲ್ಲಿ ಅವಘಡ, ಮೂವರು ಮೃತ!