ತಿರುಪತಿ ವೆಂಕಟೇಶ್ವರನ ವಿಐಪಿ ದರ್ಶನ ಸಮಯವನ್ನು ಪ್ರಾಯೋಗಿಕವಾಗಿ ಬದಲಾವಣೆ ಮಾಡಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ ನಿರ್ಧರಿಸಿದೆ.
ತಿರುಪತಿ: ತಿರುಪತಿ ವೆಂಕಟೇಶ್ವರನ ವಿಐಪಿ ದರ್ಶನ ಸಮಯವನ್ನು ಪ್ರಾಯೋಗಿಕವಾಗಿ ಬದಲಾವಣೆ ಮಾಡಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ ನಿರ್ಧರಿಸಿದೆ. ಈವರೆಗೆ ನಸುಕಿನ 2.30ರಿಂದ ಬೆಳಗ್ಗೆ 8 ಗಂಟೆವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಸಮಿತಿ (ಟಿಟಿಡಿ) ಹೇಳಿದೆ. ವಿಐಪಿ ದರ್ಶನಕ್ಕೆ ನಸುಕಿನಲ್ಲಿ ಅವಕಾಶ ನೀಡಲಾಗುತ್ತಿದ್ದ ಕಾರಣ, ಅದೇ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದ ಉಚಿತ ದರ್ಶನದ ಭಕ್ತರಿಗೆ ತೊಂದರೆ ಆಗುತ್ತಿತ್ತು. ಇದನ್ನು ನಿವಾರಿಸಲು ಸಮಯ ಬದಲಾಯಿಸಲಾಗಿದೆ.
2022ರಲ್ಲಿ ಈ ಎರಡು ದಿನ ಬಾಗಿಲು ಮುಚ್ಚಿರುತ್ತೆ ತಿರುಪತಿ ದೇವಸ್ಥಾನ!
ವೆಂಕಟೇಶ ಗೋವಿಂದ... ಪತ್ನಿಯ ಹೆಗಲ ಮೇಲೆ ಕೂರಿಸಿಕೊಂಡು ತಿರುಪತಿ ಬೆಟ್ಟವೇರಿದ ಪತಿ