ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ

ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ

Published : Aug 24, 2026, 03:59 PM IST

ಲಿಂಗನಮಕ್ಕಿ ಜಲಾಶಯದ ಸಮಾನಾಂತರ ಅಣೆಕಟ್ಟಾಗಿರುವ ತಲಕಳಲೆ ಹಿನ್ನೀರಿನ ಪ್ರದೇಶದಲ್ಲಿ ನೆಲೆಸಿರುವ ಶ್ರೀ ಪದ್ಮಾವತಿ ದೇವಿ, ಭಕ್ತರ ನಂಬಿಕೆ ಮತ್ತು ಭಕ್ತಿಯ ಕಾರಣದಿಂದಲೇ ‘ಬಳೆ ಪದ್ಮಾವತಿ ದೇವಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಪಡೆದಿದ್ದಾಳೆ.

ದೇವರಿಗೆ ಹರಕೆ ಹೊತ್ತಾಗ ಸೀರೆ, ಬಂಗಾರ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಸಮರ್ಪಿಸುವುದು ಸಾಮಾನ್ಯ. ಆದರೆ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಸಮೀಪದ ವಡನಬೈಲು ಗ್ರಾಮದಲ್ಲಿರುವ ಶ್ರೀ ಪದ್ಮಾವತಿ ದೇವಿಗೆ ಭಕ್ತರು ವಿಶಿಷ್ಟ ರೀತಿಯಲ್ಲಿ ಹರಕೆ ತೀರಿಸುತ್ತಾರೆ. ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆಯ ಕಾಣಿಕೆ! ಲಿಂಗನಮಕ್ಕಿ ಜಲಾಶಯದ ಸಮಾನಾಂತರ ಅಣೆಕಟ್ಟಾಗಿರುವ ತಲಕಳಲೆ ಹಿನ್ನೀರಿನ ಪ್ರದೇಶದಲ್ಲಿ ನೆಲೆಸಿರುವ ಶ್ರೀ ಪದ್ಮಾವತಿ ದೇವಿ, ಭಕ್ತರ ನಂಬಿಕೆ ಮತ್ತು ಭಕ್ತಿಯ ಕಾರಣದಿಂದಲೇ ‘ಬಳೆ ಪದ್ಮಾವತಿ ದೇವಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಪಡೆದಿದ್ದಾಳೆ.

ತಮ್ಮ ಇಷ್ಟಾರ್ಥಗಳು ನೆರವೇರಲಿ, ಸಂಕಷ್ಟಗಳು ದೂರವಾಗಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಗೆ ಬಳೆಗಳನ್ನು ಅರ್ಪಿಸುತ್ತಾರೆ. ಹರಕೆ ಈಡೇರಿದ ಬಳಿಕ ಮತ್ತೆ ದೇವಿಯ ಸನ್ನಿಧಿಗೆ ಬಂದು ಬಳೆಗಳನ್ನು ಸಮರ್ಪಿಸುವ ಸಂಪ್ರದಾಯವೂ ಇಲ್ಲಿ ನಡೆದುಕೊಂಡು ಬಂದಿದೆ. ಹೀಗಾಗಿ, ಭಕ್ತಿಯ ಸಂಕೇತವಾಗಿ ಬಳೆಗಳನ್ನೇ ಸ್ವೀಕರಿಸುವ ಈ ವಿಶಿಷ್ಟ ಶಕ್ತಿದೇವಿಯ ಕ್ಷೇತ್ರವು ಜೋಗ-ಸಾಗರ ಭಾಗದ ಧಾರ್ಮಿಕ ಪರಂಪರೆಯಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more