ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದ 12 ವರ್ಷದ ಹುಡುಗಿಯ ಹೊಟ್ಟೆಯಲ್ಲಿ ರಂಧ್ರ!

Published : May 20, 2024, 10:32 AM IST
ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದ 12 ವರ್ಷದ ಹುಡುಗಿಯ ಹೊಟ್ಟೆಯಲ್ಲಿ ರಂಧ್ರ!

ಸಾರಾಂಶ

ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಇದನ್ನು ಸೇವಿಸಿದ 12 ವರ್ಷದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರವಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ. ಆಸ್ಪತ್ರೆಯು ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿದ್ದನ್ನು ಗಮನಿಸಿದೆ. 

ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ ಈ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಟ್ರೆಂಡಿ ಫುಡ್‌ಗಳ ಹಿಂದೆ ಅಡಗಿರುವ ಅಪಾಯಗಳ ಬಗ್ಗೆ ಪ್ರತಿಯೊಬ್ಬರೂ ಅರಿತಿರಬೇಕು. 

ಬಾಲಕಿಯನ್ನು ಇಂಟ್ರಾಆಪರೇಟಿವ್ OGD ಸ್ಕೋಪಿಯೊಂದಿಗೆ ಪರಿಶೋಧನಾತ್ಮಕ ಲ್ಯಾಪರೊಟಮಿಗೆ ಒಳಪಡಿಸಲಾಯಿತು. ಅಲ್ಲಿ ಅನ್ನನಾಳ, ಹೊಟ್ಟೆ ಮತ್ತು ಡ್ಯುವೋಡೆನಮ್ ಅನ್ನು ಪರೀಕ್ಷಿಸಲು ಎಂಡೋಸ್ಕೋಪ್ ಬಳಸಲಾಯಿತು. ಈ  ಸಂದರ್ಭದಲ್ಲಿ ಹೊಟ್ಟೆಯಲ್ಲಿ ಸುಮಾರು 4x5 ಸೆಂ.ಮೀ ಅಳತೆಯ ಅನಾರೋಗ್ಯಕರ ಪ್ಯಾಚ್ ಕಂಡುಬಂದಿದೆ.

ಇಲ್ಲಿದೆ ನೀತಾ ಅಂಬಾನಿಯ ನೂರಾರು ಕೋಟಿ ಮೌಲ್ಯದ ಅಪರೂಪದ ವಜ್ರದ ಹಾರಗಳು
 

ನಂತರ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು, ಹೊಟ್ಟೆಯ ಒಂದು ಭಾಗವನ್ನು ತೆಗೆದುಹಾಕಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಎಂರಡು ದಿನ ಐಸಿಯುನಲ್ಲಿದ್ದ ಬಾಲಕಿ, 6 ದಿನಗಳ ಆಸ್ಪತ್ರೆ ಮೇಲ್ವಿಚಾರಣೆ ಬಳಿಕ ಮನೆಗೆ ಮರಳಿದ್ದಾಳೆ. 

ಆಹಾರದ ಪ್ರಯೋಗಗಳ ಬಗ್ಗೆ ಎಚ್ಚರವಾಗಿರಿ
ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಯ ಆಪರೇಟಿಂಗ್ ಸರ್ಜನ್ ಡಾ.ವಿಜಯ್ ಎಚ್.ಎಸ್ ಮಾತನಾಡಿ, ದೇಶದ ವಿವಿಧ ಭಾಗಗಳಿಂದ ಇಂತಹ ಹಲವಾರು ಪ್ರಕರಣಗಳು ವರದಿಯಾಗಿವೆ ಮತ್ತು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುವುದು ಬಹಳ ಮುಖ್ಯ ಎಂದು ಹೇಳಿದರು. 
ಆಹಾರದಲ್ಲಿ ಪ್ರಯೋಗದ ಅಭ್ಯಾಸಗಳಿಗೆ ಸಂಬಂಧಿಸಿದ ಅಂತರ್ಗತ ಅಪಾಯಗಳು ಮತ್ತು ಸುರಕ್ಷತಾ ಕ್ರಮಗಳ ಅಗತ್ಯವನ್ನು ಅವರು ಸೂಚಿಸುತ್ತಾರೆ.

ಸಂಬಂಧ ಚೆನ್ನಾಗಿರ್ಬೇಕು ಅಂದ್ರೆ ಬೆಡ್‌ರೂಂನಲ್ಲಿ ಈ ತಪ್ಪು ಖಂಡಿತಾ ಮಾಡ್ಬೇಡಿ
 

ದ್ರವ ಸಾರಜನಕವು ಗಮನಾರ್ಹವಾದ ಆರೋಗ್ಯ ಅಪಾಯಗಳನ್ನು ಉಂಟು ಮಾಡುತ್ತದೆ ಮತ್ತು ಅದು ಸುತ್ತುವರಿದ ಜಾಗದಲ್ಲಿ ಆವಿಯಾದಾಗ, ಅದು ಅಪಾರ ಪ್ರಮಾಣದ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸಂದರ್ಭದಲ್ಲಿ ಚರ್ಮವನ್ನು ಹಾನಿಗೊಳಿಸುತ್ತದೆ ಮತ್ತು  ತೀವ್ರ ಆರೋಗ್ಯ ಬೆದರಿಕೆಗಳನ್ನು ಉಂಟು ಮಾಡುತ್ತದೆ. ಆವಿಯನ್ನು ಉಸಿರಾಡುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತದೆ ಮತ್ತು ದ್ರವರೂಪದ ಸಾರಜನಕದ ಅಪಾಯಕಾರಿ ಸ್ವಭಾವದಿಂದಾಗಿ ಅಂಗಾಂಶ ಹಾನಿಯ ವರದಿಗಳಿವೆ ಎಂದು ಆರೋಗ್ಯ ತಜ್ಞರು ವಿವರಿಸಿದರು.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Heart Problemಗೆ ಎಲ್ಲರೂ ಹೇಳೋ ಕಾರಣವಲ್ಲವೇ ಅಲ್ಲ, ಪೌಷ್ಟಿಕ ತಜ್ಞರ ಮಹಾವಂಚನೆ ಬಯಲಿಗೆ
ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?