
ರಾಯಚೂರು (ಅ.12): ರಸ್ತೆಗೆ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋಗಿ ದೇವದುರ್ಗ ಜೆಡಿಎಸ್ ಶಾಸಕಿ ಜಿ ಕರೆಮ್ಮಾ ನಾಯಕ್ ಪ್ರಯಾಣಿಸುತ್ತಿದ್ದ ಕಾರು ರಸ್ತೆ ಪಕ್ಕದ ಬೆಟ್ಟಕ್ಕೆ ಡಿಕ್ಕಿಯಾಗಿ ಅಪಘಾತಕ್ಕೀಡಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದಿದೆ.
ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಶಾಸಕಿ ಕರೆಮ್ಮಾ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇದನ್ನೂ ಓದಿ: ದೇವದುರ್ಗವನ್ನು ಮಾದರಿ ಪಟ್ಟಣವನ್ನಾಗಿಸುವ ಸಂಕಲ್ಪ: ಶಾಸಕಿ ಕರೆಮ್ಮ
ಲಿಂಗಸಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ:
ಅಪಘಾತದ ನಂತರ ಶಾಸಕಿ ತಕ್ಷಣವೇ ಲಿಂಗಸೂಗೂರು ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ , ಸದ್ಯ ಆರೋಗ್ಯವಾಗಿದ್ದಾರೆ. ಈ ಘಟನೆ ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕಿಯ ಆರೋಗ್ಯ ವಿಚಾರಿಸಲು ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.