
ಮುಂಬೈ (ಏ.29): ಇಲ್ಲಿನ ಗೋರೆಗಾಂವ್ ಪ್ರದೇಶದಲ್ಲಿ ಬೀದಿ ಬದಿಯಲ್ಲಿ ಮಾಂಸಾಹಾರವನ್ನು ಸೇವಿಸಿದ ನಂತರ ಕಳೆದ ಎರಡು ದಿನಗಳಲ್ಲಿ ಕನಿಷ್ಠ 12 ಜನರನ್ನು ಫುಡ್ ಪಾಯ್ಸನ್ ಸಲುವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬೃಹನ್ಮುಂಬೈ ಪಾಲಿಕೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. 12 ಮಂದಿಯ ಪೈಕಿ 9 ಮಂದಿಯನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದರೆ, ಇನ್ನೂ ಮೂವರು ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಗೋರೆಗಾಂವ್ (ಪೂರ್ವ) ದ ಸಂತೋಷ್ ನಗರ ಪ್ರದೇಶದ ಸ್ಯಾಟಲೈಟ್ ಟವರ್‌ನಲ್ಲಿ ಶುಕ್ರವಾರ ಚಿಕನ್ ಷಾವರ್ಮಾ ತಿಂದ ನಂತರ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ. "ಶುಕ್ರವಾರ ಮತ್ತು ಶನಿವಾರದಂದು ಹನ್ನೆರಡು ಜನರು ವಿಷಾಹಾರದ ಬಗ್ಗೆ ದೂರು ನೀಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಬತ್ತು ಜನರು ಡಿಸ್ಚಾರ್ಜ್ ಆಗಿದ್ದರೆ, ಇತರ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಅದೇ ಹೋಟೆಲ್ ಅಥವಾ ಬೀದಿ ಬದಿಯ ಅಂಗಡಿಯಿಂದ ಮಾಂಸಾಹಾರ ತಿಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಎನ್ನುವ ಬಗ್ಗೆ ಉತ್ತರ ನೀಡಲು ನಿರಾಕರಿಸಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.