ಸುರುಳಿ ಸುರುಳಿಯಾಗಿ ಸುತ್ತಿಕೊಂಡಿರುವ ಪರೋಟಾವನ್ನು ಹೆಚ್ಚಿನವರು ಇಷ್ಟಪಡುತ್ತಾರೆ. ಚಿಕನ್ ಕರಿ ಅಥವಾ ವೆಜ್ ಕರಿಯೊಂದಿಗೆ ಇದನ್ನು ತಿನ್ನಲು ಚೆನ್ನಾಗಿರುತ್ತದೆ. ಆದ್ರೆ ಇದು ಮೈದಾದಿಂದ ಮಾಡೋ ಕಾರಣ ಆರೋಗ್ಯಕ್ಕೆ ಒಳ್ಳೇದಲ್ಲ ಅಂತ ಹೆಚ್ಚಿನವರು ಹೇಳ್ತಾರೆ. ಹಾಗೆಯೇ ಪರೋಟಾ ತಿಂದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
ಇಡುಕ್ಕಿ: ಎಲ್ಲರಿಗೂ ಎಲ್ಲಾ ರೀತಿಯ ಆಹಾರ ಆಗಿ ಬರೋದಿಲ್ಲ. ಒಬ್ಬೊಬ್ಬರ ದೇಹ ಪ್ರಕಾರಕ್ಕೆ ತಕ್ಕಂತೆ ಆಹಾರವನ್ನು ಆರಿಸಿಕೊಳ್ಳಬೇಕಾಗುತ್ತದೆ. ಕೆಲವೊಬ್ಬರು ನಿರ್ಧಿಷ್ಟ ಆಹಾರ ಸೇವಿಸಿದ್ರೆ ಅಲರ್ಜಿಯನ್ನು ಅನುಭವಿಸುತ್ತಾರೆ. ಹಾಗೆಯೇ ಬಹುಕಾಲದಿಂದ ತಿನ್ನದಿದ್ದ ಆಹಾರವೊಂದನ್ನು ದಿಢೀರ್ ತಿಂದ ಕಾರಣ ಯುವತಿಯೊಬ್ಬಳಿಗೆ ಫುಡ್ ಅಲರ್ಜಿ ಉಂಟಾಗಿ ಆಕೆ ಸಾವನ್ನಪ್ಪಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡಪುಳದಲ್ಲಿ ನಡೆದಿದೆ. ಪರೋಟ ತಿಂದ ಬಳಿಕ ಫುಡ್ ಅಲರ್ಜಿಯಿಂದಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೋಡಪುಳ ಸಮೀಪದ ವಾಜತೊಪ್ಪುವಿನ ನಿವಾಸಿ ನಯನಮರಿಯಾ (16) ಮೃತ ವಿದ್ಯಾರ್ಥಿನಿ. ವಾಜತೊಪ್ಪುವಿನ ಸೆಂಟ್ ಜಾರ್ಜ್ ಹೈಯರ್ ಸೆಕೆಂಡರಿ ಸ್ಕೂಲ್ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು.
ಮೈದಾ ಮತ್ತು ಗೋಧಿಯಿಂದ ಮಾಡಿದ ಆಹಾರ (Food)ಗಳನ್ನು ಸೇವಿಸಿದಾಗಲೆಲ್ಲ ನಯನಾಗೆ ಅಲರ್ಜಿ ಬರುತ್ತಿತ್ತಂತೆ. ಹೀಗಾಗಿ ತುಂಬಾ ಸಮಯಗಳಿಂದ ಇಂಥಾ ಆಹಾರವನ್ನು ಸೇವಿಸುತ್ತಿರಲ್ಲಿಲ್ಲ. ಆದರೆ ತುಂಬಾ ದಿನಗಳ ಬಳಿಕ ಇತ್ತೀಚೆಗಷ್ಟೇ ಮತ್ತೆ ಮೈದಾ ಅಥವಾ ಗೋಧಿಯಿಂದ ಮಾಡಿದ ಆಹಾರವನ್ನು ಸೇವಿಸಿದ್ದಳು ಮತ್ತು ಆಕೆಗೆ ಏನೂ ಆಗಿರಲಿಲ್ಲ. ಹೀಗಾಗಿ ಏನೂ ಆಗಲಿಲ್ಲ ಎಂಬ ನಂಬಿಕೆಯಿಂದಲೇ ಇತ್ತೀಚೆಗೆ ನಯನಾ ಮೈದಾದಿಂದ ಮಾಡಿ ಪರೋಟವನ್ನು ತಿಂದಿದ್ದಳು. ಆದರೆ ಪರೋಟ ತಿಂದ ಬಳಿಕ ಈಕೆಗೆ ಅಲರ್ಜಿ ಕಾಣಿಸಿಕೊಂಡಿತ್ತು. ತಕ್ಷಣ ಇಡುಕ್ಕಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಯಿತು. ವೆಂಟಿಲೇಟರ್ನಲ್ಲಿ ಇಟ್ಟು ಚಿಕಿತ್ಸೆ (Treatment) ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿನ್ನೆ (ಫೆ. 10) ಮಧ್ಯಾಹ್ನ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.
ಕೇರಳ ರಾಜ್ಯದಲ್ಲಿ ಫುಡ್ ಪಾರ್ಸೆಲ್‌ಗಳಿಗೆ ಎಕ್ಸ್‌ಪೈರಿ ದಿನಾಂಕ ಕಡ್ಡಾಯ
ಚಿಕನ್ ಶವರ್ಮಾ ತಿಂದು ಕಾಸರಗೋಡಿನ ಯುವತಿ ಸಾವು
ಈ ಹಿಂದೆ ಕಾಸರಗೋಡು (Kasaragod) ಜಿಲ್ಲೆಯಲ್ಲಿ ಶವರ್ಮಾ (Shawarma) ಸೇವಿಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಳು. ಮೇ 1ರಂದು ಕಾಸರಗೋಡಿನ ಐಡಿಯಲ್ ಫುಡ್ ಪಾಯಿಂಟ್ ಎಂಬ ಉಪಾಹಾರ ಗೃಹದಿಂದ ಚಿಕನ್ ಶವರ್ಮಾ ತಿಂದ 16 ವರ್ಷದ ದೇವಾನಂದ (Devananda) ಸಾವನ್ನಪ್ಪಿದ್ದು, ಹಲವರು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಜಿಲ್ಲಾ ವೈದ್ಯಾಧಿಕಾರಿ (ಡಿಎಂಒ) ಡಾ.ಎ.ವಿ.ರಾಮದಾಸ್, ಶಿಗೆಲ್ಲ ಎಂಬ ಬ್ಯಾಕ್ಟೀರಿಯಾ (Shigella Bacteria) ದಿಂದ ಆಹಾರ ವಿಷಪೂರಿತವಾಗಿ ಸಾವು ಸಂಭವಿಸಿದೆ ಎಂದು ಮಾಹಿತಿ ನೀಡಿದ್ದರು. ಫುಡ್ ಪಾಯ್ಸನಿಂಗ್‌ನಿಂದಾಗಿ ಯುವತಿಯ ಸಾವು ಮತ್ತು 40ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾದ ನಂತರ, ರಾಜ್ಯ ಆರೋಗ್ಯ ಇಲಾಖೆ ದುರಂತದ ಹಿಂದಿನ ಕಾರಣವನ್ನು ಗುರುತಿಸಿದೆ. ಅನಾಹುತಕ್ಕೆ ಕಾರಣವಾಗಿದ್ದು ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾ ಎಂದು ಹೇಳಿತ್ತು.
ಕೇರಳದ ವಿಶೇಷ ಕುಜಿಮಂತಿ ಬಿರಿಯಾನಿ ತಿಂದ ಯುವತಿ ಸಾವು
ಫುಡ್ ಪಾಯಿಸನ್ನಿಂದ ಕೇರಳದ ಕಾಸರಗೋಡಿನಲ್ಲಿ ಯುವತಿ (Girl)ಯೊಬ್ಬಳು ಮೃತಪಟ್ಟಿದ್ದಳು. ಮೃತ ಯುವತಿಯನ್ನು ಕಾಸರಗೋಡಿನ ಥಲಕ್ಲೇ ಮೂಲದ ಅಂಜುಶ್ರೀ ಪಾರ್ವತಿ ಎಂದು ಗುರುತಿಸಲಾಗಿತ್ತು. ಉದುಮದಲ್ಲಿರುವ ಹೋಟೆಲ್ ಒಂದರಲ್ಲಿ ಆನ್ಲೈನ್ ಮೂಲಕ ಚಿಕನ್ ಆಹಾರ ತರಿಸಿ ಅಂಜುಶ್ರೀ ಸೇವಿಸಿದ್ದಳು. ಇದಾದ ಬಳಿಕ ಆಕೆಯ ಆರೋಗ್ಯ (Health)ದಲ್ಲಿ ಏರುಪೇರು ಕಂಡುಬಂದಿತ್ತು. ಪರಿಸ್ಥಿತಿ ಗಂಭೀರವಾದ ಬೆನ್ನಲ್ಲೇ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಯುವತಿ ಮೃತಪಟ್ಟಿದ್ದಳು. ಪುಡ್ ಪಾಯಿಸನ್ನಿಂದ ಮೃತಪಟ್ಟಿದ್ದಾಳೆ (Death) ಎಂದು ವೈದ್ಯರು ದೃಢಪಡಿಸಿದ್ದರು.
ಮೊಟ್ಟೆಯಿಂದ ತಯಾರಿಸುವ ಮೇಯನೇಸ್ ಉತ್ಪಾದನೆ ನಿಷೇಧಿಸಿದ ಕೇರಳ ಸರಕಾರ
ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದ ಅಂಜುಶ್ರೀ ಕ್ರಿಸ್ ಮಸ್ ರಜೆಯ ಕಾರಣ ಸಮಯ ಕಳೆಯಲೆಂದು ಮನೆಗೆ ಬಂದಿದ್ದರು. ಈ ವೇಳೆ ಕಾಸರಗೋಡಿನ ಹೋಟೆಲ್ ಒಂದರಿಂದ ಆನ್ ಲೈನ್ ಮೂಲಕ ಕುಜಿಮಂತಿ ಹೆಸರಿನ ಚಿಕನ್ ಬಿರಿಯಾನಿ ಖರೀದಿಸಿ ಸೇವಿಸಿದ್ದರು. ತಕ್ಷಣ ಆಕೆ ಅಸ್ವಸ್ಥಳಾಗಿದ್ದಳು. ಕೂಡಲೇ ಆಕೆಯನ್ನು ಸಮೀಪದ ಕಾಸರಗೋಡು ಆಸ್ಪತ್ರೆಗೂ ಬಳಿಕ ಮಂಗಳೂರು ಆಸ್ಪತ್ರೆಗೂ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಳು.