
Peach Fruit ಪೋಷಕಾಂಶಗಳಿಂದ ತುಂಬಿದ, ಆದ್ರೆ ಕಡಿಮೆ ಕ್ಯಾಲೋರಿ ಇರುವ ಹಣ್ಣು. ಇದರಲ್ಲಿ ಫೈಬರ್, ಪೊಟ್ಯಾಶಿಯಂ, ವಿಟಮಿನ್ ಎ ಮತ್ತು ಸಿ ಹೇರಳವಾಗಿದೆ. ಕ್ಯಾರೊಟಿನಾಯ್ಡ್ಸ್ ಮತ್ತು ಪಾಲಿಫಿನಾಲ್‌ಗಳಂತಹ ಆ್ಯಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿರೋದ್ರಿಂದ, ದೇಹದಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು (Boosting Immunity Power) ಕಾಪಾಡಲು ಸಹಾಯ ಮಾಡುತ್ತೆ.
ಹೃದಯದ ಆರೋಗ್ಯಕ್ಕೆ ಬೆಸ್ಟ್: ಪೀಚ್‌ನಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು (Blood Pressure) ನಿಯಂತ್ರಿಸಲು ಸಹಾಯ ಮಾಡುತ್ತೆ. ಜೊತೆಗೆ, ದೇಹದಲ್ಲಿರುವ ಹೆಚ್ಚುವರಿ ಸೋಡಿಯಂ (Sodium) ಅನ್ನು ಹೊರಹಾಕಿ, ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತೆ.
ಚರ್ಮವನ್ನು ರಕ್ಷಿಸುತ್ತೆ: ಇದರಲ್ಲಿ ವಿಟಮಿನ್ ಸಿ ಮತ್ತು ಎ ಅಧಿಕವಾಗಿರುವುದರಿಂದ, ಕೊಲಾಜನ್ ಉತ್ಪತ್ತಿಗೆ, ಚರ್ಮದಲ್ಲಿ ತೇವಾಂಶ ಉಳಿಸಿಕೊಳ್ಳಲು ಮತ್ತು ಸೂರ್ಯನ ಯುವಿ ಕಿರಣಗಳಿಂದಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸಲು ಇದು ನೆರವಾಗುತ್ತೆ.
ಕೆಲವು ಅಧ್ಯಯನಗಳ ಪ್ರಕಾರ, ಪೀಚ್‌ನಲ್ಲಿರುವ ಪಾಲಿಫಿನಾಲ್‌ಗಳು ಕೆಲವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಬಲ್ಲವು ಎಂದು ತಿಳಿದುಬಂದಿದೆ.
ಕಣ್ಣಿನ ಆರೋಗ್ಯಕ್ಕೆ ಉತ್ತಮ: ಪೀಚ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಾದ ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್, ಮ್ಯಾಕ್ಯುಲರ್ ಡಿಜೆನರೇಶನ್ (ದೃಷ್ಟಿ ದೋಷ) ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
ತೂಕ ಇಳಿಸಲು ಬೆಸ್ಟ್: ಇದರಲ್ಲಿ ಕ್ಯಾಲೋರಿ ಮತ್ತು ಕೊಬ್ಬಿನಾಂಶ ಕಡಿಮೆ ಇದ್ದು, ನಾರಿನಾಂಶ ಹೆಚ್ಚಾಗಿರೋದ್ರಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಒಂದು ಉತ್ತಮ ಸ್ನ್ಯಾಕ್ ಆಗಿದೆ. ಪೋಷಕಾಂಶಗಳ ಆಗರವಾಗಿರುವ ಪೀಚ್ ಹಣ್ಣನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಕೂಡ ಕಡಿಮೆಯಾಗುತ್ತೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.