ಅಖಿಲ ಭಾರತ ಫುಟ್ಬಾಲ್ ಫೆಡರೇಷನ್‌ಗೆ ಶಾಕ್ ನೀಡಿದ ಫಿಫಾ
ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಮಾನ್ಯತೆ ರದ್ದು ಮಾಡಿದ ಫಿಫಾ
ಭಾರತದಲ್ಲಿ ಅಂಡರ್ 17 ಮಹಿಳಾ ಫುಟ್ವಾಲ್ ಆಯೋಜನೆ ಸಾಧ್ಯವಿಲ್ಲವೆಂದ ಫುಟ್ಬಾಲ್ ಸಂಸ್ಥೆ
ನವದೆಹಲಿ(ಆ.16): ಅಂತರರಾಷ್ಟ್ರೀಯ ಫುಟ್ಬಾಲ್ ಫೆಡರೇಷನ್(ಫಿಫಾ), ಭಾರತೀಯ ಫುಟ್ಬಾಲ್ ಅಭಿಮಾನಿಗಳಿಗೆ ಶಾಕ್ ನೀಡಿದ್ದು, ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ಫುಟ್ಬಾಲ್ ಫೆಡರೇಷನ್‌ನ ಮಾನ್ಯತೆಯನ್ನು FIFA ರದ್ದುಪಡಿಸಿದೆ. ಹೀಗಾಗಿ ಅಕ್ಟೋಬರ್‌ನಲ್ಲಿ ಭಾರತದಲ್ಲೇ ನಡೆಯಬೇಕಿದ್ದ ಅಂಡರ್ 17 ಮಹಿಳಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಆಯೋಜನೆಯ ಮೇಲೆ ಆತಂಕದ ಕರಿನೆರಳು ಬಿದ್ದಿದೆ.
ಭಾರತೀಯ ಫುಟ್ಬಾಲ್ ಫೆಡರೇಷನ್‌ನಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗುತ್ತಿರುವುದು ಫಿಫಾ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಫಿಫಾ ತಿಳಿಸಿದೆ. ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್ ತನ್ನ ದೈನಂದಿನ ವ್ಯವಹಾರಗಳನ್ನು ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ವಾಪಾಸ್ ಪಡೆಯುವವರೆಗೂ ಪ್ರಜಾತಾಂತ್ರಿಕವಾಗಿ ಚುನಾವಣೆ ನಡೆದು ಸಮಿತಿ ರಚನೆಯಾಗುವವರೆಗೂ ಈ ಅಮಾನತು ಜಾರಿಯಲ್ಲಿರಲಿದೆ ಎಂದು ಫಿಫಾ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಚ್ (Supreme Court) ಪ್ರಪುಲ್ ಪಟೇಲ್‌ರನ್ನು ಎಐಎಫ್‌ಎಫ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಸಮಿತಿಗೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಇದರ ಜತೆಗೆ ಶೀಘ್ರದಲ್ಲೇ ನೂತನ ಸಮಿತಿ ರಚಿಸುವಂತೆ ಆದೇಶಿಸಿತ್ತು.
undefined
ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷರಾಗಿದ್ದ ಪ್ರಪುಲ್ ಪಟೇಲ್ ಅವರ ಅಧಿಕಾರವಧಿ ಮುಕ್ತಾಯವಾಗಿದ್ದರೂ ಸಹಾ, ಹೊಸ ಚುನಾವಣೆ ನಡೆಸದೆಯೇ ಅಧಿಕಾರದಲ್ಲಿ ಮುಂದುವರೆದಿದ್ದರು. ಇದಾದ ಬಳಿಕ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಪ್ರಪುಲ್ ಪಟೇಲ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಆಡಳಿತಾಧಿಕಾರಿಗಳ ಸಮಿತಿಯೊಂದನ್ನು ರಚಿಸಿತ್ತು.
AIFF Election: ಸೆಪ್ಟೆಂಬರ್ 16ರೊಳಗೆ ಚುನಾವಣೆ ನಡೆಸಲು ಫಿಫಾ ಡೆಡ್‌ಲೈನ್
ಈ ಮೊದಲು ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್)ಗೆ (All India Football Federation) ಸಾಂವಿಧಾನಿಕ ಮಾನ್ಯತೆ ಮತ್ತು ಪದಾಧಿಕಾರಿಗಳ ಆಯ್ಕೆಗೆ ಫಿಫಾ ಹಾಗೂ ಏಷ್ಯನ್ ಫುಟ್ಬಾಲ್ ಕಾನ್ಫಡರೇಶನ್(ಎಎಫ್‌ಸಿ) ಗಡುವು ವಿಧಿಸಿತ್ತು. ಒಂದು ವೇಳೆ ಗಡುವು ತಪ್ಪಿದರೆ ವಿಶ್ವ ಫುಟ್ಬಾಲ್‌ನಿಂದ ಭಾರತವನ್ನು ನಿಷೇಧ ಮಾಡುವುದಾಗಿ ಎಚ್ಚರಿಕೆ ನೀಡಿತ್ತು.
ಕಳೆದ ಜೂನ್ ತಿಂಗಳಿನಲ್ಲಿ ಭಾರತ ಪ್ರವಾಸ ಮಾಡಿದ್ದ ಫಿಫಾ ತಂಡವು, ಜುಲೈ 31ರೊಳಗೆ ಸಮಿತಿಗೆ ಸಾಂವಿಧಾನಿಕ ಮಾನ್ಯತೆ ಪಡೆದು, ಸೆಪ್ಟೆಂಬರ್ 15ರ ಒಳಗೆ ಚುನಾವಣೆ ನಡೆಸಿ ಪದಾಧಿಕಾರಿಗಳ ಆಯ್ಕೆ ಮಾಡಬೇಕು ಎಂದು ಆದೇಶಿಸಿತು. ತಪ್ಪಿದರೆ ಮುಂಬರುವ ಅಕ್ಟೋಬರ್‌ನಲ್ಲಿ ನಡೆಯಲಿರುವ ಅಂಡರ್-17 ವಿಶ್ವಕಪ್ ಆತಿಥ್ಯ ಭಾರತವನ್ನು ಕೈಬಿಡುತ್ತೇವೆ ಎಂದು ಎಚ್ಚರಿಕೆ ನೀಡಿತ್ತು.
ಅಂಡರ್ 17 ಮಹಿಳಾ ಫುಟ್ಬಾಲ್ ವಿಶ್ವಕಪ್ ಮೇಲೆ ಕರಿನೆರಳು: ಬಹುನಿರೀಕ್ಷಿತ ಫಿಫಾ ಅಂಡರ್ 17 ಮಹಿಳಾ ಫುಟ್ಬಾಲ್ ವಿಶ್ವಕಪ್ ಟೂರ್ನಿಯು 2020ರಲ್ಲಿ ನಡೆಯಬೇಕಿತ್ತು. ಆದರೆ ದೇಶದಲ್ಲಿ ಕೋವಿಡ್ ಅಟ್ಟಹಾಸ ಮೆರೆದಿದ್ದರಿಂದಾಗಿ ಟೂರ್ನಿಯನ್ನು ಮುಂದೂಡಲಾಗಿತ್ತು. ಇದೀಗ ಮುಂಬರುವ ಅಕ್ಟೋಬರ್ 11 ರಿಂದ 30ರ ವರೆಗೆ ಅಂಡರ್ 17 ಮಹಿಳಾ ಫುಟ್ಬಾಲ್ ವಿಶ್ವಕಪ್ ಟೂರ್ನಿಯು ಭಾರತದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಇದೀಗ ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್ ಮಾನ್ಯತೆ ರದ್ದಾಗಿರುವುದರಿಂದಾಗಿ ಅಂಡರ್ 17 ಮಹಿಳಾ ಫುಟ್ಬಾಲ್ ವಿಶ್ವಕಪ್ ಮೇಲೆ ಅನುಮಾನದ ತೂಗುಗತ್ತಿ ನೇತಾಡಲಾರಂಭಿಸಿದೆ.