
ಬೆಂಗಳೂರು(ಜ.31): ಇಂಡಿಯನ್ ಸೂಪರ್ ಲೀಗ್ 6ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಎಫ್‌ಸಿ, 8ನೇ ಗೆಲುವು ದಾಖಲಿಸಿದೆ.
ನಿಮಗೆ Football ಇಷ್ಟ ಇಲ್ಲದೇ ಇದ್ರೂ ಸುನಿಲ್ ಚೆಟ್ರಿ ಬಗ್ಗೆ ಓದಲೇಬೇಕು..!
ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಬಿಎಫ್‌ಸಿ, ಹೈದ್ರಾಬಾದ್ ಎಫ್‌ಸಿ ವಿರುದ್ಧ 1-0 ಗೋಲಿನಿಂದ ಜಯಿಸಿತು. ಬಿಎಫ್‌ಸಿ 28 ಅಂಕಗಳಿಂದ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಹೈದ್ರಾಬಾದ್ ಕೊನೆ ಸ್ಥಾನದಲ್ಲೇ ಉಳಿದಿದೆ.
ಪಂದ್ಯದ ಆರಂಭದಲ್ಲಿ ಆಕ್ರಮಣಾಕಾರಿ ಆಟಕ್ಕೆ ಮುಂದಾದ ಸುನಿಲ್ ಚೆಟ್ರಿ ಪಡೆ, ಹೈದ್ರಾಬಾದ್ ಮೇಲೆ ಸವಾರಿ ಮಾಡಿತು. 7ನೇ ನಿಮಿಷದಲ್ಲಿ ನಿಶು ಕುಮಾರ್ ಆಕರ್ಷಕ ಗೋಲು ಬಾರಿಸಿ ಬಿಎಫ್‌ಸಿಗೆ ಮುನ್ನಡೆ ಒದಗಿಸಿದರು. ಆ ಬಳಿಕ ಹೈದ್ರಾಬಾದ್ ಗೋಲು ಗಳಿಸಲು ಸಾಕಷ್ಟು ಹೋರಾಟ ನಡೆಸಿತಾದರೂ ಯಶಸ್ವಿಯಾಗಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.