ಮುಂಡರಗಿ: ಗಾಂಧಿ ವೇಷ ತೊಟ್ಟು ಜಾಗೃತಿ ಯಾತ್ರೆ

By Web DeskFirst Published Oct 20, 2019, 9:38 AM IST
Highlights

ನೆರೆಗೆ ತುತ್ತಾಗಿರುವ ಉತ್ತರ ಕರ್ನಾಟಕದ ಭಾಗದಲ್ಲಿ ಶೀಘ್ರದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಮತ್ತು ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಗಾಂಧಿ ವೇಷದಲ್ಲಿ ಪಾದಯಾತ್ರೆ ಮೂಲಕ ಜಾಗೃತಿ|  ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಮುಂಡರಗಿಯಿಂದ ಪಾದಯಾತ್ರೆ ಮೂಲಕ ವಿಧಾನಸೌಧದವರೆಗೂ ಬಂದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ್‌| ಮದ್ಯಪಾನ ಮುಕ್ತ ರಾಷ್ಟ್ರ ನಿರ್ಮಾಣ ಮಾಡಬೇಕು| ಪರಿಸರ ಸ್ನೇಹಿ ವಾತಾವರಣ ಹಾಗೂ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು|

ಬೆಂಗಳೂರು(ಅ.20): ನೆರೆಗೆ ತುತ್ತಾಗಿರುವ ಉತ್ತರ ಕರ್ನಾಟಕದ ಭಾಗದಲ್ಲಿ ಶೀಘ್ರದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಮತ್ತು ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ್‌ ಅವರು ಗಾಂಧಿ ವೇಷದಲ್ಲಿ ಪಾದಯಾತ್ರೆ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಮುಂಡರಗಿಯಿಂದ ಪಾದಯಾತ್ರೆ ಮೂಲಕ ವಿಧಾನಸೌಧದವರೆಗೂ ಬಂದಿರುವ ಅವರು, ಮದ್ಯಪಾನ ಮುಕ್ತ ರಾಷ್ಟ್ರ ನಿರ್ಮಾಣ ಮಾಡಬೇಕು. ಪರಿಸರ ಸ್ನೇಹಿ ವಾತಾವರಣ ಹಾಗೂ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು. ಅಲ್ಲದೆ, ಬಸವಣ್ಣನವರ ವಚನಗಳಂತೆ ಗೋಹತ್ಯೆ ನಿಲ್ಲಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಜಾಗೃತಿ ಮೂಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಡರಗಿ ಜಿಲ್ಲೆಯಿಂದ ಇಲ್ಲಿಯವರೆಗೂ ಜಾಗೃತಿ ಮೂಡಿಸುತ್ತಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು.
ಅಕ್ಟೋಬರ್‌ 11 ರಂದು ಕರ್ಕಿಕಟ್ಟಿ ಗ್ರಾಮದಿಂದ ಪಾದಯಾತ್ರೆ ಪ್ರಾರಂಭಿಸಿದ ಅವರು, ಮುಂಡರಗಿ, ರೋಣ, ಗದಗ, ಕೊಟ್ಟೂರು, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಪಾದಯಾತ್ರೆಯಲ್ಲಿ ಬಂದಿದ್ದೇನೆ ಎಂದು ಹೇಳಿದರು.
 

click me!