
ಗದಗ(ಅ.15): ಕಾಂಕ್ರೀಟ್ ಮಿಕ್ಸರ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಳ್ನಾವರ ರಸ್ತೆಯ ಮಂಡಿಹಾಳ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮೃತನನ್ನು ಗದಗ ಜಿಲ್ಲೆ ಅಡವಿಸೋಮಾಪುರ ಗ್ರಾಮದ ಲೆಂಕಪ್ಪ ಬಸಪ್ಪ ತಳವಾರ (42) ಎಂದು ಗುರುತಿಸಲಾಗಿದೆ. ಇಳಕಲ್ ದಿಂದ ರಾಮನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ತೆರಳುತ್ತಿದ್ದ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಲೆಂಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.