ಮುಂಡರಗಿ ಬಳಿ ಬೈಕ್‌ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

Published : Oct 28, 2019, 12:25 PM IST
ಮುಂಡರಗಿ ಬಳಿ ಬೈಕ್‌ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಸಾರಾಂಶ

ಬೈಕ್‌ಗೆ ಡಿಕ್ಕಿ ಹೊಡೆದ ಲಾರಿ| ಸ್ಥಳದಲ್ಲೇ ಇಬ್ಬರು ಬೈಕ್ ಸವಾರರ ಸಾವು| ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ನಡೆದ ಘಟನೆ| ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ| ಮೃತ ನಾಗರಾಜ್ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ನವಲೆ ಗ್ರಾಮದ ನಿವಾಸಿ| 

ಗದಗ(ಅ.28): ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪಾರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಘಟನೆ ಇಂದು(ಸೋಮವಾರ) ನಡೆದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೃತರಲ್ಲಿ ಒಬ್ಬರು ನಾಗರಾಜ್(32) ಎಂದು ತಿಳಿದು ಬಂದಿದೆ. ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೂಡ ಮೃತಪಟ್ಟಿದ್ದಾರೆ. ಆದರೆ, ಮಹಿಳೆ ಹೆಸರು ತಿಳಿದು ಬಂದಿಲ್ಲ. ಮೃತ ನಾಗರಾಜ್ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ನವಲೆ ಗ್ರಾಮದ ನಿವಾಸಿಯಾಗಿದ್ದಾರೆ. ನೀರಾವರಿ ಇಲಾಖೆಯಲ್ಲಿ ನಾಗರಾಜ್ ಕಾರ್ಯನಿರ್ವಹಿಸ್ತಿದ್ದರು ಎಂದು ತಿಳಿದು ಬಂದಿದೆ. 

ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ