ಗರ್ಭಿಣಿ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

Published : Nov 01, 2019, 10:13 AM IST
ಗರ್ಭಿಣಿ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

ಸಾರಾಂಶ

ಗರ್ಭಿಣಿ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. 

ಗದಗ [ನ.01]: ಮಹಿಳಾ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯಲ್ಲಾಗಿದೆ. 

ಇಲ್ಲಿನ ಸಂಭಾಪುರ ರಸ್ತೆಯಲ್ಲಿರುವ ಪೊಲೀಸ್ ಕ್ವಾಟ್ರಸಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಸೀಮಾ ಶವನಗೌಡರ್ [25] ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಗದಗ್ ನ ಗ್ರಾಮೀಣ ಠಾಣೆಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಸೀಮಾ ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು. ಅಲ್ಲದೇ ಎರಡು ತಿಂಗಳ ಗರ್ಭಿಣಿಯಾಗಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಕಾರಣ ಪತ್ತೆಹಚ್ಚಲಾಗುತ್ತಿದೆ.

ಡಿಸಿಎಂ ಬಂದೋಬಸ್ತ್‌ಗೆ ಗರ್ಭಿಣಿ ಪೇದೆ: Sorry ಕೇಳಿ ರಜೆಗೆ ಕಳುಹಿಸಿದ SP

ಕಳೆದ ಕೆಲ ದಿನಗಳ ಹಿಂದಷ್ಟೇ ಮಂಗಳೂರಿನಲ್ಲಿ ಮಹಿಳಾ ಪೇದೆಯನ್ನು ಉಪ ಮುಖ್ಯಮಂತ್ರಿ ಭದ್ರತೆಗೆ ನೇಮಿಸಿ ಸುದ್ದಿಯಾಗಿದ್ದು, ಬಳಿಕ ಅವರಿಗೆ ರಜೆ ನೀಡಿ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಇಲ್ಲೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ.

PREV
click me!

Recommended Stories

ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ