Published : Dec 09, 2019, 08:05 PM ISTUpdated : Dec 12, 2019, 11:41 AM IST
ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೇ ದಾಂಪತ್ಯ ಜೀವನತ್ತೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳತಿ ಪ್ರೇರಣಾ ಶಂಕರ್ ಜೊತೆ ಧ್ರುವ ವಿವಾಹವಾಗಿದ್ದಾರೆ. ಇದೀಗ ಪತ್ನಿಗೆ ಧ್ರುವ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಪೋರ್ಶೆ ಮಕಾನ್ ಎಸ್ ಕಾರು ಗಿಫ್ಟ್ ನೀಡಿದ್ದಾರೆ. ಹೊಸ ಕಾರು ಖರೀದಿಸಿದ ಧ್ರುವ, ಗಾಳಿ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.