ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ
ಬಿಬಿಎಂಪಿ ಶಾಲಾ, ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಸಾಕಷ್ಟು ಉಚಿತ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಪ್ರಮುಖವಾಗಿ ನೋಟ್ ಪುಸ್ತಕ, ಪಠ್ಯ ಪುಸ್ತಕಗಳು, ಸಮವಸ್ತ್ರಗಳು, ಶೂ ಮತ್ತು ಕಾಲುಚೀಲ, ಬ್ಯಾಗ್ ಗಳು, ಸ್ವೇಟರ್, ಮಧ್ಯಾಹ್ನದ ಬಿಸಿಯೂಟ , ಶಿಶುವಿಹಾರದ ಮಕ್ಕಳಿಗೆ ಬಿಸಿ ಹಾಲು, ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿ, ಆಟವಾಡಲು ಆಟಿಕೆಗಳು ಸಿಗುತ್ತವೆ.