ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ:
ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಹಾವಳಿ ಹೆಚ್ಚುತ್ತಿರುವ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ ವ್ಯಕ್ತಪಡಿಸಿದ್ದರು. ಓಲೈಕೆ ರಾಜಕಾರಣಕ್ಕಾಗಿ ರಾಜ್ಯದ ಹಿತವನ್ನು ಬಲಿಕೊಡದೆ, ಅಕ್ರಮ ವಲಸಿಗರ ಪತ್ತೆ ಮತ್ತು ಗಡೀಪಾರಿಗೆ ತಕ್ಷಣವೇ 'ವಿಶೇಷ ಟಾಸ್ಕ್ ಫೋರ್ಸ್' ರಚನೆ ಮಾಡಬೇಕು ಎಂದು ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.