ಬೆಂಗಳೂರಿನ ರಸ್ತೆ ಗುಂಡಿ ಮತ್ತು ಕಸ ವಿಲೇವಾರಿ ಕುರಿತು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರು ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ, ಕಸ ವಿಲೇವಾರಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಿರಣ್ ಮಜುಂದಾರ್ ಶಾ ಭೇಟಿಯಾಗಿದ್ದಾರೆ.
25
ಟ್ವೀಟ್ ವಾರ್
ಕಳೆದ ಕೆಲವು ದಿನಗಳಿಂದ ರಾಜ್ಯ ಸರ್ಕಾರದ ವಿರುದ್ಧ ಕಿರಣ್ ಮಜುಂದಾರ್ ಶಾ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್, ಟ್ವೀಟ್‌ಗಳ ಹಿಂದೆ ಬೇರೆ ಅಜೆಂಡಾ ಇದೆ ಎಂದು ಆರೋಪಿಸಿದ್ದರು. ಈ ಹೇಳಿಕೆಗೂ ಕಿರಣ್ ಮಜುಂದಾರ್ ಶಾ ಪ್ರತಿಕ್ರಿಯಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ.
35
ಭೇಟಿ ಯಾಕೆ?
ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಲು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಈ ಕುರಿತು ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ. ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ಪತ್ರಿಕೆ ನೀಡುತ್ತಿರುವ ಫೋಟೋಗಳು ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿವೆ.
‘ಬೆಂಗಳೂರಲ್ಲಿ ರಸ್ತೆ ಸರಿಯಿಲ್ಲ. ಇಷ್ಟೊಂದು ಕಸ ಏಕಿದೆ? ಚೀನಾದಲ್ಲಿ ಹೀಗಿಲ್ಲ ಎಂದು ಬೆಂಗಳೂರಿಗೆ ಬಂದಿದ್ದ ಉದ್ಯಮಿಯೊಬ್ಬರು ನನಗೆ ಕೇಳಿದರು’ ಎಂದು ಸರ್ಕಾರವನ್ನು ಪ್ರಶ್ನಿಸಿ ಕಿರಣ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷಗಳು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದವರು.
‘ಬೆಂಗಳೂರು ಯಶ ಕಂಡಿರುವುದು ಸಾಮೂಹಿಕ ಯತ್ನದಿಂದಲೇ ಹೊರತು ನಿರಂತರ ಟೀಕೆಯಿಂದಲ್ಲ. ಬೆಂಗಳೂರಲ್ಲಿ ಸವಾಲಿವೆ. ಎದುರಿಸಿ ಕೆಲಸ ಮಾಡುತ್ತ ₹1100 ಕೋಟಿ ಖರ್ಚಲ್ಲಿ 10 ಸಾವಿರ ಗುಂಡಿ ಗುರುತಿಸಿ 5 ಸಾವಿರ ಗುಂಡಿ ಮುಚ್ಚಿಸಿದ್ದೇವೆ. ಬೆಂಗಳೂರನ್ನು ಒಡೆವ ಬದಲು ನಾವೆಲ್ಲ ಒಟ್ಟಾಗಿ ಕಟ್ಟೋಣ’ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು.