ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವದ ಸಂಭ್ರಮದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ಅಭಿಮಾನಿಗಳ ನೂಕುನುಗ್ಗಲು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ಬರೋಬ್ಬರಿ 18 ವರ್ಷಗಳ ನಂತರ ಐಪಿಎಲ್‌ನಲ್ಲಿ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಜಯೋತ್ಸವ ಸಂಭ್ರಮ ಬೆಂಗಳೂರಿನಲ್ಲಿ ದಾರುಣವಾಗಿ ಪರಿಣಮಿಸಿದೆ.
215
ಚಿನ್ನಸ್ವಾಮಿ ಸ್ಟೇಡಿಯಂನ ಬಳಿ ಭಾರೀ ಕಾಲ್ತುಳಿತ ಸಂಭವಿಸಿದ್ದು, ಇಲ್ಲಿಯವರೆಗೂ 11 ಮಂದಿ ಸಾವು ಕಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವೈದೇಹಿ ಆಸ್ಪತ್ರೆಯಲ್ಲಿ 4 ಮಂದಿ ಹಾಗೂ ಬೌರಿಂಗ್ ಆಸ್ಪತ್ರೆಯಲ್ಲಿ 7 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ.
315
ನಿರೀಕ್ಷೆಗೂ ಮೀರಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟ್ರೋಫಿ ವಿಜೇತ ತಮ್ಮ ಫೇವರಿಟ್ ತಂಡದ ಸದಸ್ಯರನ್ನು ನೋಡಲು ಆಗಮಿಸಿದ್ದರು.
ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ 6 ರನ್‌ಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸೋಲಿಸಿ ಮೊಟ್ಟ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿತ್ತು.
515
ಟ್ರೋಫಿ ಗೆಲ್ಲುತ್ತಿದ್ದಂತೆ ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಆನಂದ ಭಾಷ್ಪ ಸುರಿಸಿದ್ದರು. ಇದನ್ನು ನೋಡಿ ಅಭಿಮಾನಿಗಳು ಕೂಡ ಕಣ್ಣೀರಾಗಿದ್ದಾರೆ. ಆದರೆ, ಕೊಹ್ಲಿ ಕಣ್ಣೀರಿಗೆ ಮರುಕಪಟ್ಟವರೇ ಇಂದು ಸಮಾಧಿಯಾಗಿರುವುದು ದುರಂತ.
615
ಅಪಾರ ಪ್ರಮಾಣದ ಅಭಿಮಾನಿಗಳು ಬರುವ ನಿರೀಕ್ಷೆ ಇದ್ದರೂ ರಾಜ್ಯ ಸರ್ಕಾರ ಅದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಂಡಿರಲಿಲ್ಲ. ಸೂಕ್ತ ಬ್ಯಾರಿಕೇಡ್‌ಗಳನ್ನು ಹಾಕಿ ಸರಿಯಾದ ವ್ಯವಸ್ಥೆ ಮಾಡಿದ್ದರೆ ಈ ಅವಾಂತರ ಆಗುತ್ತಿರಲಿಲ್ಲ.
715
ಚಿಕ್ಕ ಮಕ್ಕಳು, ಯುವಕರೆನ್ನದೆ 11 ಮಂದಿ ಸಾವು ಕಂಡಿದ್ದರೆ, ಅವರ ಕುಟುಂಬದವರ ಆಕ್ರಂದನ ಆಸ್ಪತ್ರೆಯ ಎದುರು ಮುಗಿಲು ಮುಟ್ಟಿದೆ.
815
ಪೊಲೀಸರು ಚಿಕ್ಕ ಚಿಕ್ಕ ಮಕ್ಕಳನ್ನು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸುತ್ತಿರುವ ದೃಶ್ಯ ಚಿನ್ನಸ್ವಾಮಿಯಲ್ಲಿ ಸಾಮಾನ್ಯವಾಗಿತ್ತು.
915
ಕಾಲ್ತುಳಿತದಿಂದ ರಸ್ತೆಯಲ್ಲೇ ಕುಸಿದು ಬಿದ್ದು ಪ್ರಜ್ಞಾಹೀನನಾಗಿದ್ದ ಅಭಿಮಾನಿಗೆ ಅಲ್ಲಿದ್ದ ಜನರೇ ಸಿಪಿಆರ್ ನೀಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
1015
ಘಟನೆಯಲ್ಲಿ 14 ವರ್ಷದ ಹುಡುಗಿ ದಿವ್ಯಾಂಶಿ ಕೂಡ ಸಾವು ಕಂಡಿದ್ದಾಳೆ. 9ನೇ ತರಗತಿಯಲ್ಲಿ ಓದುತ್ತಿದ್ದ ದಿವ್ಯಾಂಶಿ ತನ್ನ ಚಿಕ್ಕಮ್ಮನ ಜೊತೆ ಸ್ಟೇಡಿಯಂಗೆ ಬಂದಿದ್ದಳು ಎನ್ನಲಾಗಿದೆ.
1115
ಇನ್ನು ಆರ್‌ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನ ಪ್ರಧಾನ ಗೇಟ್‌ಅನ್ನು ಮುರಿದು ಸ್ಟೇಡಿಯಂನ ಒಳಹೊಕ್ಕುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಪೊಲೀಸರು ಲಾಠಿಚಾರ್ಜ್ ಕೂಡ ಮಾಡಿದ್ದಾರೆ.
1215
ಇನ್ನೊಂದೆಡೆ ವಿರೋಧ ಪಕ್ಷಗಳ ನಾಯಕರು ಇಂಥ ಅವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಇದು ಸರ್ಕಾರವೇ ಮಾಡಿರುವ ಕೊಲೆಗಳು ಎಂದು ದೂಷಿಸಿದ್ದಾರೆ.
1315
ಒಂದೆಡೆ ಅಭಿಮಾನಿಗಳ ಸಾವಿನ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಏರುತ್ತಿದ್ದರೆ, ಇನ್ನೊಂದೆಡೆ ಸ್ಟೇಡಿಯಂನ ಒಳಗಡೆ ಆರ್‌ಸಿಬಿ ತಂಡದ ಸಂಭ್ರಮ ಮುಂದುವರಿದಿದೆ. ಆದರೆ, ಕಾರ್ಯಕ್ರಮದ ಸಮಯವನ್ನು ಕಡಿಮೆ ಮಾಡಲಾಗಿದೆ.
1415
ಘಟನೆಯಲ್ಲಿ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅಪಾರ ಪ್ರಮಾಣದ ಅಭಿಮಾನಿಗಳು ಸೇರಿದ್ದರು. 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಆದರೆ, ಅಭಿಮಾನಿಗಳನ್ನು ನಿಯಂತ್ರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದಿದ್ದಾರೆ.
1515
ಇನ್ನೊಂಡೆ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೌರಿಂಗ್ ಆಸ್ಪತ್ರೆಗೆ ಆಗಮಿಸಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.