ಬೆಂಗಳೂರಿನ ಟ್ರಿನಿಟಿ ರಸ್ತೆಯಲ್ಲಿ ಕಾರಿನ ಸನ್ ರೂಫ್ ತೆರೆದು ಜೋಡಿಯೊಂದು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬೆಂಗಳೂರು ಟ್ರಾಫಿಕ್ ಪೊಲೀಸರು ನಿಯಮಗಳ ಉಲ್ಲಂಘನೆ ಮಾಡಿದ್ರೆ ದಂಡ ವಿಧಿಸೋದು ಫಿಕ್ಸ್. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಸವಾರರಿಗೆ ದಂಡ ವಿಧಿಸಿರುವ ಫೋಟೋ ಮತ್ತು ವಿಡಿಯೋಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
25
ಬೆಂಗಳೂರು ಟ್ರಾಫಿಕ್ ಪೊಲೀಸರು ಇಷ್ಟು ಸ್ಟ್ರಿಕ್ಟ್ ಆಗಿದ್ರೂ ಜೋಡಿಯೊಂದು ಕಾರ್ ಸನ್ ರೂಫ್ ತೆರೆದು ಸಾರ್ವಜನಿಕವಾಗಿ ತಮ್ಮ ಪ್ರೀತಿಯನ್ನು ಹಂಚಿಕೊಂಡಿದ್ದಾರೆ. ರಾತ್ರಿ ಘಟನೆ ನಡೆದಿದ್ದು, ಸಾರ್ವಜನಿಕರು ಜೋಡಿಯ ವರ್ತನೆಯನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದಾರೆ.
35
ಬೆಂಗಳೂರಿನ ಟ್ರಿನಿಟಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಜೋಡಿಯ ಅತಿರೇಕದ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕ ಮತ್ತು ಯುವತಿಯ ಹುಚ್ಚಾಟವನ್ನು ಹಿಂಬದಿ ಸವಾರ ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ವ್ಯಕ್ತಿ, ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಜೋಡಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. KA03 NR2922 ನಂಬರ್ ಕಾರಿನಲ್ಲಿ ಯುವಕ ಮತ್ತು ಯುವತಿ ಹೊರಗೆ ಬಂದು ಕಿಸ್ ಮಾಡಿದ್ದಾರೆ.
55
ಸನ್ ರೂಫ್ ತೆರೆದು ಹೊರ ಬಂದ ಯುವಕ-ಯುವತಿ ಬೆಂಗಳೂರಿನ ತಂಪಾದ ವಾತಾವರಣವನ್ನು ಆನಂದಿಸಿದ್ದಾರೆ. ನಂತರ ಇಬ್ಬರು ತುಟಿಗೆ ತುಟಿ ಸೇರಿಸಿದ್ದಾರೆ. ತಮ್ಮ ಸುತ್ತಮುತ್ತ ಕಾರ್, ಬೈಕ್‌ಗಳಿದ್ರೂ ಡೋಂಟ್ ಕೇರ್ ಮಾಡದ ಜೋಡಿ ರೊಮ್ಯಾನ್ಸ್ ಮಾಡಿದ್ದಾರೆ.